ವಿವೋ V19 ಫಸ್ಟ್‌ ಲುಕ್: ಅತ್ಯುತ್ತಮ ಡ್ಯುಯಲ್ ಸೆಲ್ಫಿ ಕ್ಯಾಮೆರಾ!

|

ವಿವೋ ಸಂಸ್ಥೆಯು ಹೊಸದಾಗಿ ವಿವೋ V19 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.ಈ ಫೋನ್ ಸೆಲ್ಫಿ ಕೇಂದ್ರಿತ ಸ್ಮಾರ್ಟ್‌ಫೋನ್ ಆಗಿದ್ದು, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಈ ಫೋನ್ 8GB RAM ಹೊಂದಿರುವುದು ಮತ್ತೊಂದು ಪ್ರಮುಖ ಆಕರ್ಷಣೆ ಆಗಿದೆ.

ದೇಶಿಯ ಮಾರುಕಟ್ಟೆ

ದೇಶಿಯ ಮಾರುಕಟ್ಟೆಗೆ ಎಂಟ್ರಿ ಪಡೆದಿರುವ ವಿವೋ ವಿ19 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 712 SoC ಪ್ರೊಸೆಸರ್‌ ಜೊತೆಗೆ ಆಂಡ್ರಾಯ್ಡ್ 10 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ 8GB RAM ಜೊತೆಗೆ 128GB ಮತ್ತು 256GB ಸಂಗ್ರಹಣೆಯ ಆಯ್ಕೆಗಳನ್ನು ಹೊಂದಿದೆ. ಆರಂಭಿಕ ಬೆಲೆಯು 27,990ರೂ. ಆಗಿದೆ. ಆನ್‌ಲೈನ್ ಮತ್ತು ಆಫ್‌ಲೈನ್‌ ನಲ್ಲಿ ಲಭ್ಯವಾಗುತ್ತದೆ. ಹಾಗಾದರೇ ವಿವೋ ವಿ19 ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ವಿವೊ V19 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಡಿಸ್‌ಪ್ಲೇ ಆಗಿದ್ದು, ಆರನೇ ತಲೆಮಾರಿನ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಅಲ್ಲದೆ ಇದು ಸೂಪರ್ ಅಮೋಲೆಡ್ ಪಂಚ್ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಹೈ ಪಿಕ್ಸಲ್ ರೆಸಲ್ಯೂಶನ್ ಸ್ಕ್ರೀನ್ ಇದ್ದು, ವಿಡಿಯೊ ವೀಕ್ಷಣಗೆ ಉತ್ತಮವಾಗಿದೆ.

ಕ್ಯಾಮೆರಾ ರಚನೆ

ಕ್ಯಾಮೆರಾ ರಚನೆ

ವಿವೋ V19 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಫೋನ್‌ನ ಮೇಲಿನ ಎಡ ಮೂಲೆಯಲ್ಲಿ ಎಲ್-ಆಕಾರದ ರೀತಿಯ ಮಾಡ್ಯೂಲ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ರಿಯರ್‌ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಮೋಡ್, ಅಲ್ಟ್ರಾ-ಸ್ಟೇಬಲ್ ವಿಡಿಯೋ, ಆರ್ಟ್ ಪೋರ್ಟ್ರೇಟ್ ವಿಡಿಯೋ, ಸೂಪರ್ ಮ್ಯಾಕ್ರೋ ಅನ್ನು ನೀಡಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ಸೆಲ್ಫಿ, ಸೂಪರ್ ವೈಡ್-ಆಂಗಲ್ ಸೆಲ್ಫಿ, ಅಲ್ಟ್ರಾ-ಸ್ಟೇಬಲ್ ವಿಡಿಯೋ ಗಳನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳು

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳು

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫ್ಲ್ಯಾಶ್‌ಚಾರ್ಜ್ 2.0 ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ, GPS, OTG, 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ ವೈ-ಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೋ V19 ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM + 128GB ಶೇಖರಣಾ ಆಯ್ಕೆಗೆ 27,990 ರೂ. ಮತ್ತು 8GB RAM + 256GB ಶೇಖರಣಾ ಆಯ್ಕೆಗೆ 31,990 ರೂ. ಬೆಲೆಯನ್ನ ನಿಗಧಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಿಯಾನೋ ಬ್ಲ್ಯಾಕ್ ಮತ್ತು ಮಿಸ್ಟಿಕ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
The Vivo V19 boasts a 32MP+8MP dual-lens front-facing camera and also features a 48MP quad-lens rear camera.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X