ವಿವೋ V20 ಫಸ್ಟ್‌ ಲುಕ್‌; ಜಬರ್ದಸ್ತ್ ಸೆಲ್ಫಿ ಕ್ಯಾಮೆರಾ ಸ್ಮಾರ್ಟ್‌ಫೋನ್!

|

ವಿವೋ ಸಂಸ್ಥೆಯು ಹೊಸದಾಗಿ ವಿವೋ V20 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.ಈ ಫೋನ್ ಸೆಲ್ಫಿ ಕೇಂದ್ರಿತ ಸ್ಮಾರ್ಟ್‌ಫೋನ್ ಆಗಿದ್ದು, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಹಿಂಬದಿಯಲ್ಲಿ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೇಸ್‌ ಮಾಡೆಲ್‌ 8GB RAM ಹೊಂದಿರುವುದು ಮತ್ತೊಂದು ಪ್ರಮುಖ ಆಕರ್ಷಣೆ ಆಗಿದೆ.

ವಿವೋ V20

ದೇಶಿಯ ಮಾರುಕಟ್ಟೆಗೆ ಎಂಟ್ರಿ ಪಡೆದಿರುವ ವಿವೋ V20 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ ಜೊತೆಗೆ ನೂತನ ಆಂಡ್ರಾಯ್ಡ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ 8GB RAM ಜೊತೆಗೆ 128GB ಮತ್ತು 256GB ಸಂಗ್ರಹಣೆಯ ಆಯ್ಕೆಗಳನ್ನು ಹೊಂದಿದೆ. ಇದರೊಂದಿಗೆ 33W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರುವುದು ಪ್ಲಸ್‌ ಪಾಯಿಂಟ್‌ ಅನಿಸಲಿದೆ. ಹಾಗಾದರೇ ವಿವೋ V20 ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ವಿವೋ V20 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.44 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಆರನೇ ತಲೆಮಾರಿನ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಅಲ್ಲದೆ ಇದು ಸೂಪರ್ ಅಮೋಲೆಡ್ ಪಂಚ್ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಹೈ ಪಿಕ್ಸಲ್ ರೆಸಲ್ಯೂಶನ್ ಸ್ಕ್ರೀನ್ ಇದ್ದು, ವಿಡಿಯೊ ವೀಕ್ಷಣಗೆ ಉತ್ತಮವಾಗಿದೆ.

ಪ್ರೊಸೆಸರ್‌ ಕಾರ್ಯವೈಖರಿ

ಪ್ರೊಸೆಸರ್‌ ಕಾರ್ಯವೈಖರಿ

ವಿವೋ V20 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 720G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11 ರೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆಯನ್ನು ಸಹ ನೀಡಿದೆ. ಹೆಚ್ಚಿನ RAM ಸಾಮರ್ಥ್ಯದ ಆಯ್ಕೆಯು ಅಧಿಕ ಡೇಟಾ ಗೇಮ್‌ಗಳನ್ನು ಆಡಲು ಹಾಗೂ ಮಲ್ಟಿಟಾಸ್ಕ್‌ ಕೆಲಸಗಳಿಗೆ ಪೂರಕ ಸಪೋರ್ಟ್‌ ನೀಡಲಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ವಿವೋ V20 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 44 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡ್ಯುಯಲ್-ವ್ಯೂ ವಿಡಿಯೋ, ಸ್ಲೊ-ಮೊ ಸೆಲ್ಫಿ ವಿಡಿಯೋ, ಮತ್ತು ಮಲ್ಟಿ-ಸ್ಟೈಲ್ ಪೋರ್ಟ್ರೇಟ್ ಅನ್ನು ಹೊಂದಿದೆ. ಸೆಲ್ಫಿ ಕ್ಯಾಮೆರಾಗೆ ಹೆಚ್ಚಿನ ಒತ್ತು ನೀಡಿರುವುದು ಸೆಲ್ಫಿ ಪ್ರಿಯರಿಗೆ ಅಟ್ರ್ಯಾಕ್ಟ್‌ ಅನಿಸಲಿದೆ. ಹಾಗೆಯೇ ಸೆಲ್ಫಿ ಜೊತೆ ಹಿಂಬದಿಯ ಮುಖ್ಯ ಕ್ಯಾಮೆರಾ 64ಎಂಪಿ ಪ್ಲಸ್‌ ಪಾಯಿಂಟ್ ಆಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ವಿವೋ V20 ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು,ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ,ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ. ಇತ್ತೀಚಿನ ಅಗತ್ಯ ಫೀಚರ್ಸ್‌ಗಳು ಈ ಫೋನಿನಲ್ಲಿ ಇವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ವಿವೋ V20 ಬೇಸ್‌ ಮಾಡೆಲ್‌ ಬೆಲೆ 8GB RAM ಮತ್ತು 128GB ರೂಪಾಂತರಕ್ಕೆ 24,990 ರೂ ಆಗಿದ್ದು, 256GB ಸ್ಟೋರೇಜ್ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ 27,990 ರೂ.ಆಗಿದೆ. ಇದು ಮಿಡ್ನೈಟ್ ಜಾಜ್‌, ಮೂನ್ಲೈಟ್ ಸೋನಾಟಾ ಮತ್ತು ಸನ್ಸೆಟ್ ಮೆಲೊಡಿ ಎಂಬ ಮೂರು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.

ಕೊನೆಯ ಮಾತು

ಕೊನೆಯ ಮಾತು

ಹೈ ಎಂಡ್‌ ಫೀಚರ್ಸ್‌ಗಳಿಂದ ಭರ್ತಿ ಆಗಿರುವ ವಿವೋ V20 ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್ ಪ್ರಿಯರನ್ನು ಸೆಳೆಯುವುದರಲ್ಲಿ ಎರಡು ಮಾತಿಲ್ಲ. ಪವರ್‌ಫುಲ್‌ ಪ್ರೊಸೆಸರ್‌, ಬಿಗ್ ಡಿಸ್‌ಪ್ಲೇ, 64ಎಂಪಿ ಮುಖ್ಯ ಕ್ಯಾಮೆರಾ ಹಾಗೂ 44ಎಂಪಿ ಸೆಲ್ಫಿ ಕ್ಯಾಮೆರಾದಂತಹ ಫೀಚರ್ಸ್‌ಗಳಿಂದ ಮೊದಲ ನೋಟದಲ್ಲಿಯೇ ಗ್ರಾಹಕರನ್ನು ಆಕರ್ಷಿಸುತ್ತದೆ. ಆದರೆ ಸದ್ಯ ಚಾಲ್ತಿ ಇರುವ ಕ್ವಾಡ್‌ ಕ್ಯಾಮೆರಾ ರಚನೆ ಹಾಗೂ ಬ್ಯಾಟರಿ ಬ್ಯಾಕ್ಅಪ್ ಇನ್ನಷ್ಟು ಅಧಿಕವಾಗಿದ್ದರೇ ಈ ಫೋನ್ ಇನ್ನಷ್ಟು ಗಮನ ಸೆಳೆಯುವಂತಾಗುತ್ತಿತ್ತು. ಆದರೆ ಸೆಲ್ಫಿ ಪ್ರಿಯರಿಗೆ ಈ ಫೋನ್ ಉತ್ತಮ ಆಯ್ಕೆ.

Best Mobiles in India

English summary
Vivo V20 First Impression: Attractive Selfie Camera Phone. There is a 64-megapixel primary camera.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X