Home
ಮೊಬೈಲ್

ವಿವೋ V20 SE ಫಸ್ಟ್‌ ಲುಕ್: ಆಕರ್ಷಕ ಡಿಸೈನ್ ಜೊತೆಗೆ ಪವರ್‌ಫುಲ್‌ ಫೋನ್!

ವಿವೋ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ V20 SE ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದ್ದು, ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಹಾಗೆಯೇ ಬ್ಯಾಟರಿ ಮತ್ತು ಆಕರ್ಷಕ ಡಿಸೈನ್‌ ವಿನ್ಯಾಸದಿಂದ ಗ್ರಾಹಕರ ದೃಷ್ಠಿಯನ್ನು ತನ್ನತ್ತ ಕೇಂದ್ರಿಕರಿಸಿದೆ.

ವಿವೋ V20 SE

ವಿವೋ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಈಗ ವಿವೋ V20 SE ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯ ಜೊತೆಗೆ ಆಂಡ್ರಾಯ್ಡ್ 10 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ ಮತ್ತು 4,100mAh ಬ್ಯಾಕ್‌ಅಪ್‌ ಜೊತೆಗೆ 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ. ಇನ್ನುಳಿದಂತೆ ವಿವೋ V20 SE ಸ್ಮಾರ್ಟ್‌ಫೋನ್ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ

ಡಿಸ್‌ಪ್ಲೇ ಹೇಗಿದೆ

ವಿವೋ V20 SE ಸ್ಮಾರ್ಟ್‌ಫೋನ್‌ 6.44-ಇಂಚಿನ ಪೂರ್ಣ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 1,080x2,400 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಅನುಪಾತ 20:9 ಆಗಿದೆ. ಹೈ ಪಿಕ್ಸಲ್ ರೆಸಲ್ಯೂಶನ್ ಸ್ಕ್ರೀನ್ ಇದ್ದು, ವಿಡಿಯೊ ವೀಕ್ಷಣಗೆ ಉತ್ತಮವಾಗಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ವಿವೊ V20 SE ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ನಿಂದ ನಿಯಂತ್ರಿಸಲ್ಪಡುತ್ತದೆ. ಇನ್ನು ಈ ಫೋನ್ 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸುವ ಅವಕಾಶ ಇದೆ. ಅಧಿಕ RAM ಫೋನಿನ ಕಾರ್ಯಕ್ಕೆ ಬಲ ತುಂಬಲಿದೆ. ಹೆಚ್ಚಿನ ಡೇಟಾ ಬೇಡುವ ಗೇಮ್‌ಗಳ ಆಟಕ್ಕೂ ಸಫೋರ್ಟ್‌ ನೀಡಲಿದೆ.

ಟ್ರಿಪಲ್ ಕ್ಯಾಮೆರಾ ರಚನೆ

ಟ್ರಿಪಲ್ ಕ್ಯಾಮೆರಾ ರಚನೆ

ವಿವೋ V20 SE ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಮುಖ್ಯ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಇರಲಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾ 8ಎಂಪಿ ಮತ್ತು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್‌ನಲ್ಲಿರಲಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳು

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳು

ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ, GPS, OTG, 2.4GHz ಮತ್ತು 5GHz ಡ್ಯುಯಲ್-ಬ್ಯಾಂಡ್ ವೈ-ಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ವಿವೊ V20 SE ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಮಾಡೆಲ್‌ ಅನ್ನು ಹೊಂದಿದ್ದು, 20,990 ರೂ ಪ್ರೈಸ್‌ಟ್ಯಾಗ್‌ ಅನ್ನು ಪಡೆದಿದೆ. ಈ ಫೋನ್ ಗ್ರೀನ್ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

Best Mobiles in India

English summary
The first impression of Vivo V20 SE smartphone, how is this smartphone at first sight.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+