ಈ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಖರೀದಿಗೆ ಯಾವುದು ಬೆಸ್ಟ್?..ನಿಮ್ಮ ಆಯ್ಕೆ ಏನು?
ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಬಹುತೇಕ ಎಲ್ಲರಿಗೂ ಅವಶ್ಯಕ ಡಿವೈಸ್ ಆಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಸದ್ಯ ಫೋನ್‌ಗಳು ಹಲವು ದೈನಂದಿನ ಹಾಗೂ ಆನ್‌ಲೈನ್ ಸೇವೆಗಳಿಗೆ ನೆರವಾಗುತ್ತಿವೆ ಎನ್ನಬಹುದು. ಈ ನಿಟ್ಟಿನಲ್ಲಿ ಗ್ರಾಹಕರು ನೂತನ ಸ್ಮಾರ್ಟ್‌ಫೋನ್ ಖರೀದಿಸುವಾಗ ಅತ್ಯುತ್ತಮ ಫೀಚರ್ಸ್‌ಗಳನ್ನು ಗಮನಿಸುವ ಜೊತೆಗೆ ಅವರ ಕೆಲಸಗಳಿಗೆ ಸರಿ ಹೊಂದುವಂತಹ ಫೋನ್‌ಗಳಿಗೆ ಆದ್ಯತೆ ನೀಡುತ್ತಾರೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಮತ್ತು ವಿವೋ V25 ಪ್ರೊ 5G ಸ್ಮಾರ್ಟ್‌ಫೋನ್‌ಗಳು ಸುಮಾರು 30,000ರೂ. ಒಳಗೆ ಅಧಿಕ ಗಮನ ಸೆಳೆದಿವೆ. ಈ ಎರಡು ಫೋನ್‌ಗಳು ಆಕರ್ಷಕ ಬಾಹ್ಯ ನೋಟ್‌ವನ್ನು ಪಡೆದಿದ್ದು, ಈ ಎರಡು ಫೋನ್‌ಗಳು ತ್ರಿವಳಿ ಕ್ಯಾಮೆರಾ ರಚನೆಯನ್ನು ಒಳಗೊಂಡಿವೆ. ಇದರೊಂದಿಗೆ 5G ಬೆಂಬಲವನ್ನು ಪಡೆದಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಮತ್ತು ವಿವೋ V25 ಪ್ರೊ 5G ಫೋನ್‌ಗಳಲ್ಲಿ ಖರೀದಿಗೆ ಯಾವುದು ಉತ್ತಮ? ಮುಂದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ O ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8 GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ನು ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ವಿವೋ V25 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್
ವಿವೋ V25 ಪ್ರೊ ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,376 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಒಳಗೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಫನ್‌ಟಚ್ OS 12 ಬೆಂಬಲವನ್ನು ಪಡೆದುಕೊಂಡಿದೆ. ಇದರೊಂದಿಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ.

ಅಲ್ಲದೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 66W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 4,830mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಕೊನೆಯ ಮಾತು : ಖರೀದಿಗೆ ಯಾವುದು ಉತ್ತಮ?
ಈ ಎರಡು ಫೋನ್‌ಗಳು ಮೀಡ್‌ರೇಂಜ್ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಗ್ಯಾಲಕ್ಸಿ A53 5G ಫೋನ್ Super AMOLED ಡಿಸ್‌ಪ್ಲೇ ಹೊಂದಿದ್ದು, ವಿವೋ V25 5G ಫೋನ್ AMOLED ಡಿಸ್‌ಪ್ಲೇ ಪಡೆದಿದೆ. ಗ್ಯಾಲಕ್ಸಿ A53 5G ಫೋನ್ ಕ್ವಾಡ್ ಕ್ಯಾಮೆರಾ ರಚನೆ ಪಡೆದಿದ್ದು, ವಿವೋ V25 5G ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದೆ. ಇನ್ನು ಬ್ಯಾಟರಿ ಬಗ್ಗೆ ನೋಡುವುದಾದರೆ, ಗ್ಯಾಲಕ್ಸಿ A53 5G ಫೋನ್ 5,000mAh, ಪಡೆದಿದ್ದರೆ, ವಿವೋ V25 5G ಫೋನ್ ಬ್ಯಾಟರಿ 4,830mAh ಸಾಮರ್ಥ್ಯದಲ್ಲಿದ್ದು, 66W ವೇಗದ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್ ಮತ್ತು ವಿವೋ V25 ಪ್ರೊ ಸ್ಮಾರ್ಟ್‌ಫೋನ್ ನಡುವೆ ಹೆಚ್ಚಿನ ಭಿನ್ನತೆಗಳು ಇಲ್ಲ ಎಂಬುದನ್ನು ಕಾಣಬಹುದಾಗಿದೆ. ಡಿಸ್‌ಪ್ಲೇ, ಬ್ಯಾಟರಿ ಹಾಗೂ ಕ್ಯಾಮೆರಾ ಆಯ್ಕೆಗಳಿಗೆ ಅಧಿಕ ಪ್ರಾಮುಖ್ಯತೆ ನೀಡುವುದಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್ ಬೆಸ್ಟ್ ಎನಿಸುತ್ತದೆ. ಇನ್ನು ಡಿಸೈನ್ ಹಾಗೂ 66W ವೇಗದ ಚಾರ್ಜಿಂಗ್ ಸೌಲಭ್ಯದಿಂದ ವಿವೋ V25 ಪ್ರೊ ಸ್ಮಾರ್ಟ್‌ಫೋನ್ ಗಮನ ಸೆಳೆದಿದೆ.


Click it and Unblock the Notifications








