ಜನ ಮೆಚ್ಚಿದ ಫೋನ್! 8,750 ಬಿಗ್ ಡಿಸ್ಕೌಂಟ್.. ನಾಲ್ಕು 50MP ಕ್ಯಾಮೆರಾಗಳು.. ಈ Vivo ಫೋನಿನ ಬೆಲೆ ಭಾರೀ ಇಳಿಕೆ
ವೀವೋ ಮೊಬೈಲ್‌ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಾರೆ. ಹೀಗಾಗಿ, ಭಾರತದಲ್ಲಿ ವಿವೋ ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ಡಿಮ್ಯಾಂಡ್ ಇದೆ. ವಿವೋ V30 ಪ್ರೊ 5G (Vivo V30 Pro 5G) ಮೊಬೈಲ್ ಸಹ ಹಲವು ಅತ್ಯಾಕರ್ಷಕ ಫೀಚರ್ಸ್‌ಗಳಿಂದ ಭಾರೀ ಸದ್ದು ಮಾಡಿದೆ. ಪ್ರಸ್ತುತ, ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಮೂಲಕ ಮತ್ತೆ ವಿವೋ ಪ್ರಿಯರನ್ನು ತನ್ನತ್ತ ಸೆಳೆದಿದೆ. ನೀವು ವಿವೋ V30 ಪ್ರೊ ಫೋನ್ ಖರೀದಿಸಲು ಬಯಸಿದರೆ, ಇದು ನಿಮಗೆ ಉತ್ತಮ ಅವಕಾಶವಾಗಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಫ್ಲಿಪ್‌ಕಾರ್ಟ್‌ನಲ್ಲಿ ವಿವೋ V30 ಪ್ರೊ 5G ಮೊಬೈಲ್ ಶೇ.25% ರಷ್ಟು ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 6.78 ಇಂಚಿನ ದೊಡ್ಡ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 50MP + 50MP + 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು 50MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ, 12GB RAM + 512GB ಸ್ಟೋರೇಜ್, 5000mAh ಬ್ಯಾಟರಿ ಒಳಗೊಂಡಿದೆ. ಸದ್ಯ ನೀವು ಹೆಚ್ಚು ಖರ್ಚು ಮಾಡದೆ, ಈ ಫೋನನ್ನು ಖರೀದಿಸಬಹುದು.

ವಿವೋ V30 ಪ್ರೊ 5G ಹೊಸ ಬೆಲೆ ಮತ್ತುಆಫರ್‌ಗಳು
ವಿವೋ V30 ಪ್ರೊ 5G ಫೋನ್ ಭಾರತದಲ್ಲಿ 41,999 ರೂ.ಗೆ ಬಿಡುಗಡೆಯಾಗಿತ್ತು. ಪ್ರಸ್ತುತ, ನೀವು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ 7,000 ರೂ.ಗಳ ರಿಯಾಯಿತಿಯಲ್ಲಿ ಲಭ್ಯವಿದೆ. ನೀವು 34,999 ರೂ.ಗೆ ಈ ಮೊಬೈಲ್ ಖರೀದಿಸಬಹುದು. ಜೊತೆಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ 1,750 ರೂ. ಹೆಚ್ಚುವರಿ ಬ್ಯಾಂಕ್ ಡಿಸ್ಕೌಂಟ್ ಪಡೆಯಬಹುದು. ಇದಲ್ಲದೆ, ಎಕ್ಸ್‌ಚೇಂಜ್ ಆಫರ್ ಮೂಲಕ ಇನ್ನೂ ಹೆಚ್ಚಿನ ಹಣ ಉಳಿಸಬಹುದು.
ವಿವೋ V30 ಪ್ರೊ 5G ವೈಶಿಷ್ಟ್ಯಗಳು
ದೊಡ್ಡ ಡಿಸ್ಪ್ಲೇ
ವಿವೋ V30 ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಕರ್ವ್ಡ್ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1260 x 2800 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 2800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಸಹ ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ವಿವೋ V30 ಪ್ರೊ 5G ಮೊಬೈಲ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 8200 4nm ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ 8GB RAM + 256GB ಮತ್ತು 12GB RAM + 512GB ಸ್ಟೋರೇಜ್ ಆಯ್ಕೆ ಹೊಂದಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್
ವಿವೋ V30 ಪ್ರೊ 5G ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ದ್ವಿತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 2x ಟೆಲಿಫೋಟೋ ಪೋಟ್ರೇಟ್ ಲೆನ್ಸ್ ಹೊಂದಿದೆ. ಸೆಲ್ಪಿ ಮತ್ತು ವಿಡಿಯೋ ಕರೆಗಾಗಿ ಈ ಫೋನ್, 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಒಳಗೊಂಡಿದೆ.
ಅದ್ಭುತ ಬ್ಯಾಟರಿ ಬ್ಯಾಕಪ್
ವಿವೋ V30 ಪ್ರೊ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.


Click it and Unblock the Notifications








