Home
ಮೊಬೈಲ್

ಬಿಗ್ ಆಫರ್‌! 50MP + 50MP + 50MP ಕ್ಯಾಮೆರಾಗಳು.. 512GB ಸ್ಟೋರೇಜ್‌.. ಈ Vivo ಫೋನಿಗೆ ಭಾರೀ ಡಿಸ್ಕೌಂಟ್‌

ವಿವೋ ತನ್ನ ಅಭಿಮಾನಿಗಳಿಗೆ ಡಬಲ್ ಗುಡ್‌ ನ್ಯೂಸ್ ನೀಡಿದೆ. ಬಹುನಿರೀಕ್ಷಿತ ವಿವೋ V50 5G (Vivo V50 5G) ಫೋನ್ ಫೆಬ್ರವರಿ 17 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬರುವ ಮೊದಲೇ, ಕಂಪನಿಯು ತನ್ನ V ಸರಣಿಯ ವಿವೋ V40 5G (Vivo V40 5G) ಫೋನ್ ಮೇಲೆ ರಿಯಾಯಿತಿ ಘೋಷಿಸಿದೆ. ನೀವು ಉತ್ತಮ ಸೆಲ್ಫಿ ಫೋನ್ ಖರೀದಿಸಲು ಬಯಸಿದರೆ, ಈ ವಿವೋ ಮೊಬೈಲ್ ಫರ್ಪೆಕ್ಟ್ ಆಯ್ಕೆಯಾಗಲಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ವಿವೋ V40 5G ಫೋನ್ ಮೂರು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 50MP ಸೆಲ್ಫಿ ಕ್ಯಾಮೆರಾ ಮತ್ತು 50MP ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತಿದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 12GB + 512GB ಸ್ಟೋರೇಜ್‌, 5500mAh ಬ್ಯಾಟರಿ ಮತ್ತು 80W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ, ಶೇ.12 ರಷ್ಟು ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ.

ಬಿಗ್ ಆಫರ್‌! ಈ Vivo 5G ಫೋನಿಗೆ ಭಾರೀ ಡಿಸ್ಕೌಂಟ್.. ಹೊಸ ಬೆಲೆ, ವಿಶೇಷತೆಗಳೇನು?

ವಿವೋ V40 5G ಬೆಲೆ ಮತ್ತು ಆಫರ್

ವಿವೋ V40 5G ಫೋನ್ ಭಾರತದಲ್ಲಿ ಮೂರು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಈ ಪೈಕಿ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 34,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಈ ಮೊಬೈಲ್ ಮೇಲೆ 2,000 ರೂ. ಬ್ಯಾಂಕ್ ರಿಯಾಯಿತಿ ಲಭ್ಯವಿದೆ. ಜೊತೆಗೆ ಪೂರ್ಣ ಪಾವತಿಯ ಮೇಲೆ 1,000 ರೂ. ಮತ್ತು ಇಎಂಐ ಪಾವತಿ ಮೇಲೆ 2,000 ರೂ. ಡಿಸ್ಕೌಂಟ್ ನೀಡಲಾಗುತ್ತಿದೆ. ನೀವು, ಕ್ರೆಡಿಟ್ ಕಾರ್ಡ್ ಮೂಲಕ ಕೇವಲ 33,999 ರೂ.ಗೆ ಈ ಫೋನ್ ಖರೀದಿಸಬಹುದು. ಕ್ರೆಡಿಟ್ ಕಾರ್ಡ್ ಮೂಲಕ ಇಎಂಐ ಮಾಡಿದರೆ, ನೀವು 32,999 ರೂ.ಗೆ ಈ ಮೊಬೈಲ್ ಕೊಳ್ಳಬಹುದು.

ವಿವೋ V40 5G ವೈಶಿಷ್ಟ್ಯಗಳು

ಡಿಸ್ಲ್ಪೇ ಹೇಗಿದೆ

ವಿವೋ V40 5G ಮೊಬೈಲ್ 6.78 ಇಂಚಿನ 1.5K ಅಮೋಲೆಡ್ ಡಿಸ್ಲ್ಪೇ ಹೊಂದಿದೆ. ಇದು 2800 × 1260 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ದರ, 480Hz ಸ್ಪರ್ಶ ಮಾದರಿ ದರ ಮತ್ತು 4500 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ.

ಪವರ್‌ ಫುಲ್ ಪ್ರೊಸೆಸರ್

ವಿವೋ V40 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಅಡ್ರಿನೊ 720 ಜಿಪಿಯು ಸಹ ಹೊಂದಿದೆ.

ಬಿಗ್ ಆಫರ್‌! ಈ Vivo 5G ಫೋನಿಗೆ ಭಾರೀ ಡಿಸ್ಕೌಂಟ್.. ಹೊಸ ಬೆಲೆ, ವಿಶೇಷತೆಗಳೇನು?

RAM ಮತ್ತು ಸ್ಟೋರೇಜ್

ವಿವೋ V40 5G ಸ್ಮಾರ್ಟ್‌ಫೋನ್ 12GB ವಿಸ್ತೃತ RAM ಹೊಂದಿದೆ. ನೀವು 8GB ಭೌತಿಕ RAM ನೊಂದಿಗೆ, 20GB RAM (8GB+12GB) ವರೆಗೆ ಬಳಸಬಹುದು. ಈ ಫೋನ್ 128GB ಸ್ಟೋರೇಜ್‌, 256GB ಸ್ಟೋರೇಜ್‌ ಮತ್ತು 512GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

50MP + 50MP + 50MP ಕ್ಯಾಮೆರಾಗಳು

ವಿವೋ V40 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಈ ವಿವೋ V40 ಫೋನಿನಲ್ಲಿ ZEISS ಲೆನ್ಸ್ ಬಳಸಲಾಗಿದೆ.

ದೊಡ್ಡ ಬ್ಯಾಟರಿ

ವಿವೋ V40 5G ಫೋನ್ 5500mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಫೇಸ್ ಅನ್‌ಲಾಕ್‌ ಮತ್ತು ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್‌, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ನಂತಹ ಸೌಲಭ್ಯಗಳನ್ನು ಹೊಂದಿದೆ.

Best Mobiles in India

English summary
Vivo V40 5G purchase with Huge Discount before Vivo V50 5G indi launch: check new price, offers, availability, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+