Home
ಮೊಬೈಲ್

ಮಾರುಕಟ್ಟೆ ಶೇಕ್! ಭಾರತಕ್ಕೆ Vivo V50 ಗ್ರ್ಯಾಂಡ್ ಎಂಟ್ರಿ; 50MP ಸೆಲ್ಫಿ ಕ್ಯಾಮೆರಾ.. 6000mAh ಬ್ಯಾಟರಿ.. ಬೆಲೆ ಇಷ್ಟೆನಾ?

ಬಹುನಿರೀಕ್ಷಿತ ವಿವೋ V50 (Vivo V50) ಸ್ಮಾರ್ಟ್‌ಫೋನ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಇದು ಈ ವರ್ಷ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ 'V' ಸರಣಿಯ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಇದು ಪ್ರೀಮಿಯಂ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿ ಬಿಡುಗಡೆಯಾಗಿದೆ. ಈ ಫೋನ್ ಸ್ಲಿಮ್ ವಿನ್ಯಾಸ, ಜೈಸ್ ಕ್ಯಾಮೆರಾ, ಕ್ವಾಡ್ ಕವರ್ಡ್ ಡಿಸ್ಪ್ಲೇ ಮತ್ತು ದೊಡ್ಡ ಬ್ಯಾಟರಿ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ, ಈ ವಿವೋ V50 ಫೋನಿನ ಬೆಲೆ, ಲಭ್ಯತೆ ಮತ್ತು ಯಾವೆಲ್ಲಾ ವೈಶಿಷ್ಟ್ಯಗಳನ್ನು ಹೊಂದಿದೆ ತಿಳಿಯೋಣ.

ವಿವೋ V50 ಫೋನ್ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ Vivo S20 ಮರುಬ್ರಾಂಡೆಡ್ ಆಗಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ ಹೊಂದಿದೆ. ಈ ಫೋನಿನಲ್ಲಿ 50MP+50MP ಕ್ಯಾಮೆರಾಗಳು ಮತ್ತು 50MP ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.77 ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಒಳಗೊಂಡಿದೆ. ಜೊತೆಗೆ 12GB RAM + 512GB ಸ್ಟೋರೇಜ್ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಫೀಚರ್ಸ್‌ ಲಭ್ಯವಿದೆ.

Vivo V50 ಬಿಡುಗಡೆ; 50MP ಸೆಲ್ಫಿ ಕ್ಯಾಮೆರಾ, 6000mAh ಬ್ಯಾಟರಿ; ಬೆಲೆ ನೋಡಿ

ವಿವೋ V50 ಬೆಲೆ (ನಿರೀಕ್ಷಿತ)

  • 8GB RAM + 128GB ಸ್ಟೋರೇಜ್ ಬೆಲೆ = 34,999 ರೂ.
  • 8GB RAM + 256GB ಸ್ಟೋರೇಜ್ ಬೆಲೆ = 36,999 ರೂ.
  • 12GB RAM + 512GB ಸ್ಟೋರೇಜ್ ಬೆಲೆ = 40,999 ರೂ.

ವಿವೋ V50 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 34,999 ರೂ. ಬೆಲೆಯನ್ನು ಹೊಂದಿದೆ. 8GB RAM + 256GB ಸ್ಟೋರೇಜ್ ಆಯ್ಕೆಯು 36,999 ರೂ. ಆಗಿದೆ. ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ 40,999 ರೂ.ಗೆ ಲಾಂಚ್ ಆಗಿದೆ.

ಈ ವಿವೋ 5G ಫೋನಿನ ಮೊದಲ ಮಾರಾಟವು ಫೆಬ್ರವರಿ 25 ರಿಂದ ಭಾರತದಲ್ಲಿ ಪ್ರಾರಂಭವಾಗಲಿದೆ. ಈ ಮೊಬೈಲ್ ಅನ್ನು ರೋಸ್ ರೆಡ್, ಸ್ಟಾರಿ ಬ್ಲೂ ಮತ್ತು ಟೈಟಾನಿಯಂ ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಕೆಲವು ಆಫರ್‌ ನೀಡುತ್ತದೆ. ನೀವು, ಎಚ್‌ಡಿಎಫ್‌ಸಿ ಮತ್ತು ಎಸ್‌ಬಿಐ ಬ್ಯಾಂಕ್ ಕಾರ್ಡ್‌ಗಳನ್ನು ಬಳಿಸಿ ಈ ಸ್ಮಾರ್ಟ್‌ಫೋನ್ ಖರೀದಿಸಿದರೆ, ಶೇ.10 ರಿಯಾಯಿತಿ ಸಿಗುತ್ತದೆ.

ವಿವೋ V50 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ V50 5G ಮೊಬೈಲ್ 6.77 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಅಲ್ಟ್ರಾ ಸ್ಲಿಮ್ ಕ್ವಾಡ್ ಕರ್ವ್ಡ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2392 × 1080 ಪಿಕ್ಸೆಲ್ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಸಹ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ V50 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್‌ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್‌ ಆಂಡ್ರಾಯ್ಡ್ 15 ಆಧಾರಿತ Funtouch ಓಎಸ್ 15 ಜೊತೆಗೆ ಕೆಲಸ ಮಾಡುತ್ತದೆ. ಈ ವಿವೋ ಸ್ಮಾರ್ಟ್‌ಫೋನ್‌ 8GB RAM ಮತ್ತು 12GB RAM ಹೊಂದಿದೆ.

RAM ಮತ್ತು ಸ್ಟೋರೇಜ್

ವಿವೋ V50 5G ಫೋನ್‌ 8GB RAM ಮತ್ತು 12GB RAM ಹೊಂದಿದೆ. ನೀವು ಭೌತಿಕ RAM ಜೊತೆಗೆ ವರ್ಚುವಲ್ RAM ಅನ್ನು ಸೇರಿಸುವ ಮೂಲಕ 24GB RAM (12GB + 12GB) ವರೆಗೆ ಬಳಸಬಹುದು. ಈ ಮೊಬೈಲ್ 512GB ಆಂತರಿಕ ಸ್ಟೋರೇಜ್ ಹೊಂದಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.

Vivo V50 ಬಿಡುಗಡೆ; 50MP ಸೆಲ್ಫಿ ಕ್ಯಾಮೆರಾ, 6000mAh ಬ್ಯಾಟರಿ; ಬೆಲೆ ನೋಡಿ

ಕ್ಯಾಮೆರಾ ಸೆಟಪ್

ವಿವೋ V50 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದು ಕಾರ್ಲ್ ಜೈಸ್ ಲೆನ್ಸ್ ಒಳಗೊಂಡಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ ಔರಾ ಲೈಟ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ (ZEISS ಕ್ಯಾಮೆರಾ ಸಿಸ್ಟಮ್) ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ ಆಟೋಫೋಕಸ್ ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಈ ವಿವೋ 5G ಫೋನ್ ಎಐ (AI) ಸ್ಟುಡಿಯೋ ಲೈಟ್ ಪೋರ್ಟ್ರೇಟ್ 2.0 ಔರಾ ಲೈಟ್ ಸಹ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ V50 5G ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಇದು ದೊಡ್ಡ ಬ್ಯಾಟರಿಯನ್ನು ಹೊಂದಿರುವ ವಿಭಾಗದಲ್ಲಿ ಅತ್ಯಂತ ತೆಳ್ಳಗಿನ ಸ್ಮಾರ್ಟ್‌ಫೋನ್ ಆಗಿರಲಿದೆ. ನೀವು ಕೇವಲ 39 ನಿಮಿಷಗಳಲ್ಲಿ ಶೇ.20 ರಿಂದ ಶೇ.100 ವರೆಗೆ ಸಂಪೂರ್ಣ ಚಾರ್ಜ್ ಮಾಡಬಹುದು.

ಇತರೆ ವೈಶಿಷ್ಟ್ಯಗಳು

ವಿವೋ V50 5G ಸ್ಮಾರ್ಟ್‌ಫೋನ್ ಹಲವು ಎಐ ಫೀಚರ್ಸ್‌ ಹೊಂದಿದೆ. ಇದು ಧೂಳು ಮತ್ತು ನೀರಿನಿಂದ ರಕ್ಷಣೆಗೆ IP68 + IP69 ರೇಟಿಂಗ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, 5G, 9 5G ಬ್ಯಾಂಡ್‌, ವೈ-ಫೈ, ಜಿಪಿಎಸ್‌, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
vivo V50 50MP selfie camera with launched India: know price, specifications and sale details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+