Home
ಮೊಬೈಲ್

ಫೆ.25ಕ್ಕೆ vivo V50 ಫಸ್ಟ್ ಸೇಲ್; ಭರ್ಜರಿ ಆಫರ್‌ ಘೊಷಣೆ.. ಬೆಲೆ ಎಷ್ಟು, ವಿಶೇಷತೆಗಳೇನು ಗೊತ್ತಾ?

vivo V50 5G sale: ವಿವೋ ಸಂಸ್ಥೆಯು ಇತ್ತೀಚೆಗೆ ಬಹುನಿರೀಕ್ಷಿತ ವಿವೋ V50 (Vivo V50) ಫೋನನ್ನು ಬಿಡುಗಡೆ ಮಾಡಿದೆ. ಈ ಮೂಲಕ ತನ್ನ 'V' ಸರಣಿಯ ಮೊದಲ ಸ್ಮಾರ್ಟ್‌ಫೋನ್ ಅನ್ನು ಈ ವರ್ಷ ಮಾರುಕಟ್ಟೆಗೆ ಪರಿಚಯಿಸಿದೆ. ಇದು ಪ್ರೀಮಿಯಂ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಆಗಿದೆ. ಅಂದಹಾಗೆ, ವಿವೋ V50 ಮೊಬೈಲ್ ಫೆಬ್ರವರಿ 25 ರಿಂದ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಇದು ಸ್ಲಿಮ್ ಡಿಸೈನ್, ಜೈಸ್ ಕ್ಯಾಮೆರಾ, ಕ್ವಾಡ್ ಕವರ್ಡ್ ಡಿಸ್ಪ್ಲೇ ಮತ್ತು ಬಿಗ್ ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ಆಫರ್‌ಗಳನ್ನು ತಿಳಿಯೋಣ.

ವಿವೋ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ Vivo S20 ಫೋನನ್ನು ಪರಿಚಯಿಸಿತ್ತು. ಇದರ ಮರುಬ್ರಾಂಡೆಡ್ ಆಗಿ ವಿವೋ V50 ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಫೋನಿನಲ್ಲಿ 50MP + 50MP ಕ್ಯಾಮೆರಾಗಳು ಮತ್ತು 50MP ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.77 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 512GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಲಭ್ಯವಿದೆ.

ಫೆ.25ಕ್ಕೆ vivo V50 ಫಸ್ಟ್ ಸೇಲ್; ಭರ್ಜರಿ ಆಫರ್‌ ಘೊಷಣೆ.. ಬೆಲೆ, ವಿಶೇಷತೆಗಳೇನು

ವಿವೋ V50 ಬೆಲೆ ಮತ್ತು ಆಫರ್‌ಗಳು

ವಿವೋ V50 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 34,999 ರೂ. ಆಗಿದೆ. 8GB RAM + 256GB ಸ್ಟೋರೇಜ್ ವೇರಿಯಂಟ್ 36,999 ರೂ.ಗೆ ಬಿಡುಗಡೆಯಾಗಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ರೂಪಾಂತರವು 40,999 ರೂ. ಬೆಲೆಯನ್ನು ಹೊಂದಿದೆ.

ಕಂಪನಿಯು ಇದೇ ಫೆಬ್ರವರಿ 25 ರಿಂದ ಭಾರತದಲ್ಲಿ ವಿವೋ V50 5G ಫೋನಿನ ಮಾರಾಟ ಪ್ರಾರಂಭಿಸಲಿದೆ. ನೀವು ರೋಸ್ ರೆಡ್, ಸ್ಟಾರಿ ಬ್ಲೂ ಮತ್ತು ಟೈಟಾನಿಯಂ ಗ್ರೇ ಬಣ್ಣಗಳಲ್ಲಿ ಈ ಫೋನನ್ನು ಆರ್ಡರ್ ಮಾಡಬಹುದು. ವಿವೋ ಮೊದಲ ಮಾರಾಟದ ಪ್ರಯುಕ್ತ ಕೆಲವು ಆಫರ್‌ ಘೋಷಿಸಿದೆ. ನೀವು, ಎಚ್‌ಡಿಎಫ್‌ಸಿ ಮತ್ತು ಎಸ್‌ಬಿಐ ಬ್ಯಾಂಕ್ ಕಾರ್ಡ್‌ಗಳನ್ನು ಬಳಿಸಿ ಈ ಮೊಬೈಲ್ ಖರೀದಿಸಿದರೆ, ಶೇ.10 ರಿಯಾಯಿತಿ ಸಿಗುತ್ತದೆ.

ವಿವೋ V50 ಫೀಚರ್ಸ್‌

ಡಿಸ್ಪ್ಲೇ ಹೇಗಿದೆ

ವಿವೋ V50 ಫೋನ್ 6.77 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2392 × 1080 ಪಿಕ್ಸೆಲ್ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಸಹ ಹೊಂದಿದೆ.

ಸ್ನಾಪ್‌ಡ್ರಾಗನ್ ಪ್ರೊಸೆಸರ್

ವಿವೋ V50 ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್‌ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್‌ ಆಂಡ್ರಾಯ್ಡ್ 15 ಆಧಾರಿತ Funtouch ಓಎಸ್ 15 ಜೊತೆಗೆ ಕೆಲಸ ಮಾಡುತ್ತದೆ. ಈ ವಿವೋ ಸ್ಮಾರ್ಟ್‌ಫೋನ್‌ 8GB RAM ಮತ್ತು 12GB RAM ಹೊಂದಿದೆ. ಈ ಮೊಬೈಲ್ 256GB ಸ್ಟೋರೇಜ್ ಹೊಂದಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್‌

ವಿವೋ V50 5G ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಔರಾ ಲೈಟ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಬ್ಯಾಕಪ್ ಸೂಪರ್

ವಿವೋ V50 5G ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಈ ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನಿಂದ ರಕ್ಷಣೆಗೆ IP68 + IP69 ರೇಟಿಂಗ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್‌, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
vivo V50 5G sale starts on February 25: check Price, Offers specification and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+