Home
ಮೊಬೈಲ್

Vivo V50 ಬಿಡುಗಡೆ ದಿನಾಂಕ ಘೋಷಣೆ: 6000mAh ಬ್ಯಾಟರಿ.. ಮೂರು 50MP ಕ್ಯಾಮೆರಾಗಳು.. ಬೆಲೆ ಇಷ್ಟೆನಾ?

ವಿವೋ ಅಭಿಮಾನಿಗಳ ಕಾಯುವಿಕೆ ಅಂತ್ಯ! ಕಂಪನಿಯು ತನ್ನ ಗ್ರಾಹಕರಿಗೆ ಕೊನೆಗೂ ಸಹಿಸುದ್ದಿ ನೀಡಿದೆ. ಹೌದು, ಹೊಸ ವಿವೋ V50 5G (Vivo V50 5G) ಫೋನಿನ ಭಾರತದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಈ ಮೊಬೈಲ್ ವಿವೋ V50 (Vivo V50) ಸರಣಿಯ ಅಡಿಯಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಇದು ದೊಡ್ಡ ಬ್ಯಾಟರಿ ಹೊಂದಿರುವ ಅತ್ಯಂತ ತೆಳ್ಳಗಿನ ಸ್ಮಾರ್ಟ್‌ಫೋನ್ ಆಗಿದೆ ಎಂದು ಕಂಪನಿ ತಿಳಿಸಿದೆ. ಬನ್ನಿ, ವಿವೋ V50 5G ಫೋನಿನ ಬಿಡುಗಡೆ ದಿನಾಂಕ, ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ವಿವೋ V50 5G ಫೋನಿನ ಮೈಕ್ರೋ ಸೈಟ್ ಕಂಪನಿಯ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ನೇರ ಪ್ರಸಾರವಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರುತ್ತದೆ. ಹಾಗೆಯೇ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Vivo V50 ಬಿಡುಗಡೆ ದಿನಾಂಕ ಘೋಷಣೆ: ಬೆಲೆ, ವಿಶೇಷತೆಗಳೇನು?

ವಿವೋ V50 5G ಬಿಡುಗಡೆ ದಿನಾಂಕ

ನೂತನ ವಿವೋ V50 5G ಮೊಬೈಲ್ ಇದೇ ಫೆಬ್ರವರಿ 17 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ವಿವೋ ಅಧಿಕೃತವಾಗಿ ಘೋಷಿಸಿದೆ. ಈ ಸ್ಮಾರ್ಟ್‌ಫೋನ್ ಅಂದು ಮಧ್ಯಾಹ್ನ 12 ಗಂಟೆಗೆ ಆನ್‌ಲೈನ್ ಕಾರ್ಯಕ್ರಮದ ಮೂಲಕ ರಿಲೀಸ್ ಆಗಲಿದೆ. ಈ ಫೋನಿನ ಪ್ರಮುಖ ವಿಶೇಷತೆಗಳು ಮತ್ತು ವಿನ್ಯಾಸವನ್ನು ವಿವೋ ಇಂಡಿಯಾ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋನ್ ರೋಸ್ ರೆಡ್, ಟೈಟಾನಿಯಂ ಗ್ರೇ ಮತ್ತು ಸ್ಟಾರಿ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ವಿವೋ V50 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ V50 5G ಸ್ಮಾರ್ಟ್‌ಫೋನ್ 6.78 ಇಂಚಿನ 1.5K ಡಿಸ್ಪ್ಲೇ ಹೊಂದಿದೆ. ಇದು ಮೈಕ್ರೋ ಕ್ವಾಡ್ ಕರ್ವ್ಡ್ ಓಎಲ್‌ಇಡಿ ಡಿಸ್ಪ್ಲೇ ಆಗಿದೆ. ಇದು 2800 × 1260 ಪಿಕ್ಸೆಲ್ ರೆಸಲ್ಯೂಶನ್‌ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಈ ಫೋನಿನ ಡಿಸ್ಪ್ಲೇಯು Vivo X200 Pro ರೀತಿಯೇ ಇದೆ. ವಿವೋ X200 ಪ್ರೊ ಫೋನಿನಲ್ಲಿ ಅಮೋಲೆಡ್ ಡಿಸ್ಪ್ಲೇ ಲಭ್ಯವಿದೆ. ಇದು 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ V50 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7 ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿರುತ್ತದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್‌ ಆಂಡ್ರಾಯ್ಡ್ 15 ಆಧಾರಿತ ಫಂಟೌಚ್ ಓಎಸ್ 15 ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 512GB ಸ್ಟೊರೇಜ್‌ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್

ವಿವೋ V50 5G ಮೊಬೈಲ್‌ ಫೋಟೋಗ್ರಫಿ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 50 ಮೆಗಾಪಿಕ್ಸೆಲ್ ದ್ವಿತೀಯ (ಅಲ್ಟ್ರಾ ವೈಡ್ ಲೆನ್ಸ್) ಕ್ಯಾಮೆರಾ ಹೊಂದಿದೆ. ಇದು ಔರಾ ಲೈಟ್ ಎಲ್‌ಇಡಿ ಫ್ಲ್ಯಾಷ್‌ನ ಬೆಂಬಲದೊಂದಿಗೆ ಬರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ ಈ ಫೋನ್, ಆಟೋಫೋಕಸ್ ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

Vivo V50 ಬಿಡುಗಡೆ ದಿನಾಂಕ ಘೋಷಣೆ: ಬೆಲೆ, ವಿಶೇಷತೆಗಳೇನು?

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ V50 5G ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ ಎಂದು ಕಂಪನಿ ಖಚಿತಪಡಿಸಿದೆ. ದೊಡ್ಡ ಬ್ಯಾಟರಿಯನ್ನು ಹೊಂದಿರುವ ವಿಭಾಗದಲ್ಲಿ ಇದು ಅತ್ಯಂತ ತೆಳ್ಳಗಿನ ಮೊಬೈಲ್ ಆಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಇನ್ನೂ Vivo V40 5G ಸ್ಮಾರ್ಟ್‌ಫೋನ್ 5500mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಬ್ಯಾಟರಿ ಮತ್ತು ಇತರೆ ವೈಶಿಷ್ಟ್ಯಗಳು

ವಿವೋ V50 5G ಮೊಬೈಲ್ ಎಐ (AI) ಚಾಲಿತ ಇಮೇಜ್ ಎಡಿಟಿಂಗ್, ಆಡಿಯೊ ಟ್ರಾನ್ಸ್‌ಕ್ರಿಪ್ಷನ್‌ ಮತ್ತು ರಿಯಲ್ ಟೈಮ್ ಕರೆ ಅನುವಾದ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, 5G, ವೈ-ಫೈ, ಜಿಪಿಎಸ್‌, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.

ವಿವೋ V50 5G ಬೆಲೆ (ನಿರೀಕ್ಷಿತ)

ವಿವೋ V50 5G ಫೋನಿನ ಬೆಲೆ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. ಆದರೆ, ವಿವೋ V40 5G ಮೊಬೈಲ್ ಭಾರತದಲ್ಲಿ 34,999 ರೂ.ಗೆ ಬಿಡುಗಡೆಯಾಗಿದೆ. ವಿವೋ V50 5G ಫೋನಿನ ಬೆಲೆ ಇದೇ ರೀತಿ ಇರಬಹುದು. ಭಾರತದಲ್ಲಿ ವಿವೋ V50 5G ಫೋನನ್ನು 37,999 ರೂ.ಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.

Best Mobiles in India

English summary
Vivo V50 is launching in India on February 17, 2025: Check Expected Price and Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+