Home
ಮೊಬೈಲ್

Vivo V50e vs Vivo V40e: ವಿವೋ V40eಗೂ.. ಹೊಸ ವಿವೋ V50ಗೂ ವ್ಯತ್ಯಾಸ ಏನು? ಬೆಲೆ, ಫೀಚರ್ಸ್‌ ಹೀಗಿವೆ

Vivo V50e 5G vs Vivo V40e 5G Comparison: ವಿವೋ ಫೋನ್‌ಗಳಿಗೆ (Vivo) ಭಾರತದಲ್ಲಿ ಭಾರೀ ಬೇಡಿಕೆ ಇದೆ. ಅದರಲ್ಲೂ ಮಿಡ್‌ ರೇಂಜ್‌ ಹಾಗೂ ಪ್ರೀಮಿಯಂ ವಿವೋ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿವೆ. ಕಂಪನಿಯು ಇತ್ತೀಚೆಗೆ ವಿವೋ V50e (Vivo V50e) ಮೊಬೈಲ್‌ ಅನ್ನು ಲಾಂಚ್ ಮಾಡಿದೆ. ಈ ಫೋನ್‌ ಆಕರ್ಷಕ ವಿನ್ಯಾಸದ ಜೊತೆಗೆ ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು ಮಾರುಕಟ್ಟೆಯಲ್ಲಿರುವ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ನೇರ ಪೈಪೋಟಿ ನೀಡುತ್ತದೆ. ಈ ಹಿಂದೆ ಬಿಡುಗಡೆಯಾಗಿದ್ದ ವಿವೋ V40e ಫೋನಿಗೆ ಹೋಲಿಸಿದರೆ ಇದು ಹೇಗೆ ಭಿನ್ನವಾಗಿದೆ ಎಂಬುವುದನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ.

ಕಂಪನಿಯು ಭಾರತದಲ್ಲಿ ವಿವೋ V50e ಅನ್ನು ಅಧಿಕೃತವಾಗು ಲಾಂಚ್‌ ಮಾಡಿದೆ. ಇದು ಕಳೆದ ವರ್ಷ (2024 ರಲ್ಲಿ) ಬಿಡುಗಡೆಯಾದ ವಿವೋ V40e ಫೋನಿನ ಅಪ್‌ಗ್ರೇಡ್ ಮೊಬೈಲ್ ಆಗಿದೆ. ಆದರೆ, ಹೆಚ್ಚಿನ ಬದಲಾವಣೆಗಳು ಕಂಡುಬಂದಿಲ್ಲ. ಇದು ವಿವೋ V40e ಫೋನಿನೊಂದಿಗೆ ಹಲವು ವಿಷಯಗಳಲ್ಲಿ ಹೋಲಿಕೆ ಹೊಂದಿದೆ. ಇದು ಮೊಬೈಲ್ ಪ್ರಿಯರಿಗೆ ಗೊಂದಲ ಉಂಟುಮಾಡಬಹುದು. ಆದರೆ, ನೀವು ತಿಳಿದುಕೊಳ್ಳಲು ಬಯಸಬಹುದಾದ ಸೂಕ್ಷ್ಮ ವ್ಯತ್ಯಾಸಗಳಿವೆ. ವಿವೋ V40e ಫೋನಿಗೆ ಹೋಲಿಸಿದರೆ ಹೊಸ ವಿವೋ V50e ಫೋನಿನಿಂದ ನೀವು ಏನನ್ನು ನಿರೀಕ್ಷಿಸಬಹುದು ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

Vivo V50e vs Vivo V40e: ಯಾವುದು ಉತ್ತಮ? ಬೆಲೆ, ಫೀಚರ್ಸ್‌ ನೋಡಿ

ವಿವೋ V50e 5G ಮತ್ತು ವಿವೋ V40e 5G ವ್ಯತ್ಯಾಸಗಳು

ಡಿಸ್ಪ್ಲೇ ವಿವರ

ವಿವೋ V50e 5G ಮೊಬೈಲ್ 6.77 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಅಮೋಲೆಡ್ ಸ್ಕ್ರೀನ್ ಆಗಿದೆ. ಈ ಡಿಸ್ಪ್ಲೇಯು 2392 × 1080 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬಿಡುಗಡೆಯಾಗಿದೆ. ಇದರೊಂದಿಗೆ 2160Hz PW ಡಿಮ್ಮಿಂಗ್, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಈ ಫೋನಿನ ಡಿಸ್ಪ್ಲೇ ಡೈಮಂಡ್ ಶೀಲ್ಡ್ ಗ್ಲಾಸ್ ರಕ್ಷಣೆ ಪಡೆದಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನವನ್ನು ಸಹ ಹೊಂದಿದೆ. ವಿವೋ V40e 5G ಸ್ಮಾರ್ಟ್‌ಫೋನ್ 6.77 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2,392 x 1,080 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ V50e ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಇದು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾದ ಸಿಪಿಯು ಆಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ Funtouch OS 15 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಮೊಬೈಲ್ಮಾ ಲಿ G615 ಜಿಪಿಯು ಹೊಂದಿದೆ. ವಿವೋ V40e 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಫನ್ ಟಚ್ ಓಎಸ್ 14 ನೊಂದಿಗೆ ಕೆಲಸ ಮಾಡುತ್ತದೆ.

RAM ಮತ್ತು ಸ್ಟೋರೇಜ್

ವಿವೋ V50e 5G ಫೋನ್ 8GB RAM + 8GB ವರ್ಚುವಲ್ RAM ಹೊಂದಿದೆ. ಇದು 8GB ವರ್ಚುವಲ್ RAM ಅನ್ನು 8GB ಭೌತಿಕ RAMಗೆ ಸೇರಿಸುವ ಮೂಲಕ 16GB RAM ಶಕ್ತಿಯನ್ನು ನೀಡುತ್ತದೆ. ನೀವು 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಬಹುದು. ಈ ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ಮತ್ತು IP69 ರೇಟಿಂಗ್‌ಗಳನ್ನು ಪಡೆದಿದೆ. ವಿವೋ V40e 5G ಮೊಬೈಲ್ 8GB RAM + 128GB ಮತ್ತು 8GB RAM + 256GB ಸ್ಟೋರೇಜ್‌ ಆಯ್ಕೆ ಹೊಂದಿದೆ. ಈ ಫೋನಿನಲ್ಲಿ 8GB ವಿಸ್ತೃತ RAM ಲಭ್ಯವಿದೆ.

ಕ್ಯಾಮೆರಾ ಸೆಟಪ್

ವಿವೋ V50e ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಇದೆ. ಈ ಫೋನಿನಲ್ಲಿ ಎಐ (AI) ಸ್ಟುಡಿಯೋ ಲೈಟ್ ಪೋರ್ಟ್ರೇಟ್ 2.0 ಔರಾ ಲೈಟ್ ವೈಶಿಷ್ಟ್ಯ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ವಿಶೇಷವೆಂದರೆ, ಈ ಫೋನಿನ ಮುಂಭಾಗದ ಕ್ಯಾಮೆರಾಗಳಲ್ಲಿ 4K ವಿಡಿಯೋ ರೆಕಾರ್ಡಿಂಗ್ ಮಾಡಬಹುದು.

ವಿವೋ V40e 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ V50e ಸ್ಮಾರ್ಟ್‌ಫೋನ್ 5600mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ. ಇದು ಕೇವಲ 42 ನಿಮಿಷಗಳಲ್ಲಿ ಶೇ.20 ರಿಂದ ಶೇ.100 ರಷ್ಟು ಸಂಪೂರ್ಣ ಚಾರ್ಜ್ ಆಗಿಲಿದೆ. ವಿವೋ V40e 5G ಫೋನ್ 5500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.

ಇತರೆ ವೈಶಿಷ್ಟ್ಯಗಳು

ವಿವೋ V50e ಮೊಬೈಲ್ ಅಂಡರ್ ವಾಟರ್ ಫೋಟೋಗ್ರಫಿ ಹೊಂದಿದೆ. ಇದು ಸ್ಮಾರ್ಟ್ ಎಐ (AI) ವೈಶಿಷ್ಟ್ಯಗಳನ್ನು ಹೊಂದಿದೆ. ಎಐ ಟ್ರಾನ್ಸ್‌ಸ್ಕ್ರಿಪ್ಟ್ ಅಸಿಸ್ಟ್, ವಿವೋ ಲೈವ್ ಕಾಲ್ ಟ್ರಾನ್ಸ್‌ಲೇಷನ್, ಸರ್ಕಲ್ ಟು ಸರ್ಚ್ ಸೇರಿದಂತೆ ಹಲವು ಉತ್ತಮ ಎಐ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗೆ IP64 ರೇಟಿಂಗ್ ಪಡೆದಿದೆ. ಹಾಗೆಯೇ ಡ್ಯುಯಲ್ ಸಿಮ್, 5G, 4G, ವೈ-ಫೈ, ಬ್ಲೂಟೂತ್ 5.4 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ. ಇನ್ನು ವಿವೋ V40e 5G ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗೆ IP64 ರೇಟಿಂಗ್ ಪಡೆದಿದೆ. ಹಾಗೆಯೇ ಡ್ಯುಯಲ್ ಸಿಮ್, 5G, 4G, ವೈ-ಫೈ, ಬ್ಲೂಟೂತ್ 5.4 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ವಿವೋ V50e 5G ಮತ್ತು ವಿವೋ V40e 5G ಬೆಲೆ

ವಿವೋ V50e 5G ಫೋನಿನ 8GB RAM + 128GB ಸ್ಟೋರೇಜ್ ಬೆಲೆ 28,999 ರೂ. ಆಗಿದೆ. 8GB RAM + 256GB ಸ್ಟೋರೇಜ್ ಬೆಲೆ 30,999 ರೂ. ಇದೆ. ಈ ಮೊಬೈಲ್ ನೀಲಿ ಮತ್ತು ಪರ್ಲ್ ವೈಟ್ ಬಣ್ಣಗಳಲ್ಲಿ ಬರುತ್ತದೆ. ಇದೇ ಏಪ್ರಿಲ್ 17 ರಿಂದ ಈ ವಿವೋ 5G ಫೋನಿನ ಮೊದಲ ಮಾರಾಟ ಪ್ರಾರಂಭವಾಗಲಿದೆ. ಹೆಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಎಸ್‌ಬಿಐ ಕಾರ್ಡ್ ವಹಿವಾಟುಗಳಿಗೆ ಶೇ.10 ರಷ್ಟು ತ್ವರಿತ ರಿಯಾಯಿತಿ ಲಭ್ಯವಿದೆ. ಹಾಗೆಯೇ ಶೇ.10 ರಷ್ಟು ಎಕ್ಸ್‌ಚೇಂಜ್ ಬೋನಸ್ ನೀಡಲಾಗುವುದು. ಜೊತೆಗೆ 6 ತಿಂಗಳ ನೋ ಕಾಸ್ಟ್ ಇಎಂಐ ಆಯ್ಕೆ ಲಭ್ಯವಿದೆ. ಇನ್ನು ಈ ವಿವೋ V50e ಖರೀದಿಯ ಮೇಲೆ ಕೇವಲ 1,499 ರೂ.ಗಳ ವಿಶೇಷ ಬಂಡಲ್ ಬೆಲೆಯಲ್ಲಿ vivo TWS ಇಯರ್‌ಬಡ್‌ಗಳನ್ನು ಪಡೆಯಬಹುದು.

ವಿವೋ V40e 5G ಬೆಲೆ

ವಿವೋ V40e 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 28,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್ ಈ ಫೋನನ್ನು 2,000 ರೂ.ಗಳ ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ಡಿಸ್ಕೌಂಟ್ ಬಳಿಕ, ಇದರ ಬೆಲೆ 26,999 ರೂ.ಗೆ ಇಳಿಕೆಯಾಗಲಿದೆ. ಈ ಆಫರ್ ಅನ್ನು ಎಲ್ಲಾ ಗ್ರಾಹಕರು ಪಡೆಯಬಹುದು. ಈ ಫೋನ್ ಮೇಲೆ 2,000 ರೂ.ಗಳ ರಿಯಾಯಿತಿಯ ಜೊತೆಗೆ, ಫ್ಲಿಪ್‌ಕಾರ್ಟ್ 1500 ರೂ.ಗಳ ಕ್ರೆಡಿಟ್ ಕಾರ್ಡ್ ಆಫರ್ ಸಹ ನೀಡುತ್ತಿದೆ.

ಎಚ್‌ಡಿಎಫ್‌ಸಿ, ಎಸ್‌ಬಿಐ ಮತ್ತು ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿಕೊಂಡು ಇಎಂಐ ಮಾಡಿದರೆ, 1500 ರೂ. ಹೆಚ್ಚುವರಿ ರಿಯಾಯಿತಿ ಲಭ್ಯವಿದೆ. ಈ ಡಿಸ್ಕೌಂಟ್ ಬಳಿಕ, ಈ ವಿವೋ 5G ಫೋನಿನ ಬೆಲೆ 25,499 ರೂ.ಗೆ ಕಡಿತವಾಗಲಿದೆ. ಒಟ್ಟಾರೆಯಾಗಿ ಈ ಮೊಬೈಲ್‌ ಅನ್ನು 3,500 ರೂ.ಗಳ ರಿಯಾಯಿತಿಯೊಂದಿಗೆ 25,499 ರೂ.ಗೆ ನಿಮ್ಮದಾಗಿಸಿಕೊಳ್ಳಬಹುದು. ವಿಶೇಷವೆಂದರೆ, ಈ ಫೋನಿಗೆ ಲಭ್ಯವಿರುವ ಬ್ಯಾಂಕ್ ಆಫರ್ ಈ ತಿಂಗಳು (ಏಪ್ರಿಲ್ 30 ರವರೆಗೆ) ಮಾತ್ರ ಇರುತ್ತದೆ.

Best Mobiles in India

English summary
Vivo V50e 5G vs Vivo V40e 5G Detailed Comparison: Which Smartphone Should You Buy?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+