Home
ಮೊಬೈಲ್

ಭಾರತಕ್ಕೆ Vivo X200 ಗ್ರ್ಯಾಂಡ್ ಎಂಟ್ರಿ; 512GB ಸ್ಟೋರೇಜ್.. 5800mAh ಬ್ಯಾಟರಿ.. 7200 ಡಿಸ್ಕೌಂಟ್!

ವಿವೋ ಪ್ರಿಯರ ಕಾಯುವಿಕೆ ಮುಗಿಯಿತು! ಬಹುನಿರೀಕ್ಷಿತ ವಿವೋ X200 Vivo X200) ಫೋನ್ ಬಿಡುಗಡೆಯಾಗಿದೆ. ಹೌದು, ಕಂಪನಿಯು Vivo X200 ಸರಣಿಯನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸರಣಿಯಲ್ಲಿ ವಿವೋ X200 (Vivo X200) ಮತ್ತು ವಿವೋ X200 ಪ್ರೊ (Vivo X200 Pro) ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಪೈಕಿ ವಿವೋ X200 ಮೊಬೈಲ್ ಸ್ಟೈಲಿಶ್ ಲುಕ್ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ವಿವೋ X200 5G ಮೊಬೈಲ್ ಎರಡು ಸ್ಟೋರೇಜ್‌ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟಿಪಲ್ ಕ್ಯಾಮೆರಾ ಸೆಟಪ್ ಇದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ 16GB + 512GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 90W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Vivo X200 ಲಾಂಚ್; 512GB ಸ್ಟೋರೇಜ್.. 5800mAh ಬ್ಯಾಟರಿ.. ಬೆಲೆ ಎಷ್ಟು?

ವಿವೋ X200 ಫೋನಿನ ಬೆಲೆ

12GB + 256GB ಸ್ಟೋರೇಜ್‌ = 65,999 ರೂ.
16GB + 512GB ಸ್ಟೋರೇಜ್ = 71,999 ರೂ.

ಕಂಪನಿಯು ವಿವೋ X200 ಫೋನನ್ನು ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಫೋನಿನ 12GB + 256GB ಸ್ಟೋರೇಜ್‌ ರೂಪಾಂತರದ ಬೆಲೆ 65,999 ರೂ. ಆಗಿದೆ. 16GB + 512GB ಸ್ಟೋರೇಜ್ ಆಯ್ಕೆಯು 71,999 ರೂ.ಗೆ ಬಿಡುಗಡೆಯಾಗಿದೆ. ಈ ಮೊಬೈಲ್ ಕಾಸ್ಮೊಸ್ ಬ್ಲಾಕ್ ಮತ್ತು ನ್ಯಾಚುರಲ್ ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ.

ನೀವು, ಅಮೆಜಾನ್, ಫ್ಲಿಪ್‌ಕಾರ್ಟ್‌, ವಿವೋ ಇಂಡಿಯಾ ಇ-ಸ್ಟೋರ್ ಮೂಲಕ ಖರೀದಿಸಬಹುದು. ಇಂದು ಮಧ್ಯಾಹ್ನ 3 ಗಂಟೆಗೆ ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಡಿಸೆಂಬರ್ 19 ರಂದು ಮಾರಾಟವಾಗುತ್ತದೆ. ನೀವು, ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸ್‌ಬಿಐ ಮತ್ತು ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ 7,200 ರೂ.ಗಳ ತ್ವರಿತ ರಿಯಾಯಿತಿ ಪಡೆಯಬಹುದು.

ವಿವೋ X200 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ X200 ಮೊಬೈಲ್ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ಡೈನಾಮಿಕ್ ರಿಫ್ರೆಶ್ ದರ ಮತ್ತು 4500 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಪಡೆದಿದೆ. ಜೊತೆಗೆ ಆಪ್ಟಿಕಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ X200 ಫೋನನ್ನು ಮೀಡಿಯಾಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 15 ಆಧಾರಿತ FunTouch ಓಎಸ್‌ 15 ನಲ್ಲಿ ಕೆಲಸ ನಿರ್ವಹಿಸುತ್ತದೆ. ಫೋನಿನಲ್ಲಿ 16GB RAM ಮತ್ತು 512GB ಸ್ಟೋರೇಜ್‌ ಲಭ್ಯವಿದೆ.

ಕ್ಯಾಮೆರಾ ಸೆಟಪ್

ವಿವೋ X200 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 50 ಮೆಗಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೋನಿ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ X200 ಫೋನ್ 5800mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರ ವೈಶಿಷ್ಟ್ಯಗಳು

ವಿವೋ X200 ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68/69 ರೇಟಿಂಗ್ ಪಡೆದಿದೆ. ಜೊತೆಗೆ, ಸರ್ಕಲ್ ಟು ಸರ್ಚ್, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್, ಎನ್‌ಎಫ್‌ಸಿ, ವೈ-ಫೈ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Vivo X200 Launched in india: know price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+