ಧೂಳೆಬ್ಬಿಸಲು ಬಂತು Vivo X200 Pro ಫೋನ್; 200MP ಕ್ಯಾಮೆರಾ.. 6000mAh ಬ್ಯಾಟರಿ.. ಬೆಲೆ ಇಷ್ಟೊಂದಾ!
ವಿವೋ ಪ್ರಿಯರು ಖುಷಿ ಪಡಲು ಇಷ್ಟು ಸಾಕು! ಎರಡು ಹೊಚ್ಚ ಹೊಸ ವಿವೋ ಫೋನ್ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಹೌದು, ವಿವೋ ತನ್ನ ವಿವೋ X200 (Vivo X200 series) ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ವಿವೋ X200 ಮತ್ತು ವಿವೋ X200 ಪ್ರೊ ಮೊಬೈಲ್‌ಗಳನ್ನು ಪರಿಚಯಿಸಲಾಗಿದೆ. ಈ ಪೈಕಿ ವಿವೋ X200 ಪ್ರೊ (Vivo X200 Pro) ಗ್ರಾಹಕರ ಮನಸ್ಸು ಗೆದ್ದಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ X200 ಪ್ರೊ ಮೊಬೈಲ್ ಕೇವಲ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಈ ಫೋನ್ 200 ಮೆಗಾಪಿಕ್ಸೆಲ್ Zeiss APO ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 512GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ವಿವೋ X200 ಪ್ರೊ ಬೆಲೆ ಮತ್ತು ಲಭ್ಯತೆ
ವಿವೋ X200 ಪ್ರೊ ಫೋನಿನ 16GB + 512GB ಸ್ಟೋರೇಜ್ ರೂಪಾಂತರವನ್ನು 94,999 ರೂ.ಗೆ ಬಿಡುಗಡೆ ಮಾಡಿದೆ. ನೀವು, ಟೈಟಾನಿಯಂ ಗ್ರೇ ಮತ್ತು ಕಾಸ್ಮೊಸ್ ಬ್ಲಾಕ್ ಬಣ್ಣಗಳಲ್ಲಿ ಖರೀದಿಸಬಹುದು. ಇಂದಿನಿಂದ ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಡಿಸೆಂಬರ್ 19 ರಂದು ಅಮೆಜಾನ್, ಫ್ಲಿಪ್‌ಕಾರ್ಟ್, ವಿವೋ ಇಂಡಿಯಾ ಇ-ಸ್ಟೋರ್ ಮೂಲಕ ಮಾರಾಟ ಪ್ರಾರಂಭವಾಗುತ್ತದೆ. ಹೆಚ್‌ಡಿಎಫ್‌ಸಿ ಬ್ಯಾಂಕ್, ಎಸ್‌ಬಿಐ ಮತ್ತು ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ 7,200 ರೂ.ಗಳ ತ್ವರಿತ ರಿಯಾಯಿತಿ ಪಡೆಯಬಹುದು.
ವಿವೋ X200 ಪ್ರೊ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ X200 ಪ್ರೊ ಮೊಬೈಲ್ 6.78 ಇಂಚಿನ 2K ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 4,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಆರ್ಮರ್ ಗ್ಲಾಸ್ ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ವಿವೋ X200 ಪ್ರೊ ಫೋನನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಪ್ರೊಸೆಸರ್ ಹೊಂದಿರುವ ಭಾರತ ಎರಡನೇ ಸ್ಮಾರ್ಟ್‌ಫೋನ್ ಇದಾಗಿದೆ. ಇದು ಆಂಡ್ರಾಯ್ಡ್ 15 ಆಧಾರಿತ FunTouch ಓಎಸ್ 15 ನಲ್ಲಿ ಕೆಲಸ ಮಾಡುತ್ತದೆ.
ಕ್ಯಾಮೆರಾ ಸೆಟಪ್
ವಿವೋ X200 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 200 ಮೆಗಾಪಿಕ್ಸೆಲ್ Zeiss APO ಟೆಲಿಫೋಟೋ ಲೆನ್ಸ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ವಿವೋ X200 ಪ್ರೊ ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 30W ವೈರ್‌ಲೆಸ್ ಚಾರ್ಜಿಂಗ್ ಸಹ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ವಿವೋ X200 ಪ್ರೊ ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP68/69 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಎನ್‌ಎಫ್‌ಸಿ ಮತ್ತು ಸರ್ಕಲ್ ಟು ಸರ್ಚ್ ಸೇರಿದಂತೆ ಹಲವು ವೈಶಿಷ್ಟ್ಯಗಳು ಸಹ ಹೊಂದಿದೆ.


Click it and Unblock the Notifications








