Home
ಮೊಬೈಲ್

Vivo: 200MP ಕ್ಯಾಮೆರಾ.. 6000mAh ಬ್ಯಾಟರಿ.. ಧೂಳೆಬ್ಬಿಸಲಿವೆ ಎರಡು ಹೊಸ ಫೋನ್!

ವಿವೋ ಪ್ರಿಯರಿಗೆ ಡಬಲ್‌ ಖುಷಿ ಸುದ್ದಿ ಇದೆ. ಶೀಘ್ರದಲ್ಲೇ ಎರಡು ಹೊಸ ಫೋನ್‌ಗಳು ಗ್ರಾಹಕರ ಕೈ ಸೇರುವುದು ಖಚಿತವಾಗಿದೆ. ಹೌದು, ಕಂಪನಿಯು ಭಾರತದಲ್ಲಿ ವಿವೋ X200 (Vivo X200) ಸರಣಿಯನ್ನು ಬಿಡುಗಡೆ ಮಾಡಲಿದೆ. ಈ ಸರಣಿಯ ಅಡಿಯಲ್ಲಿ, ವಿವೋ X200 (Vivo X200) ಮತ್ತು ವಿವೋ X200 ಪ್ರೊ (Vivo X200 Pro) ಮೊಬೈಲ್‌ಗಳು ಮಾರುಕಟ್ಟೆಗೆ ಲಗ್ಗೆ ಇಡಲಿವೆ. ವಿಶೇಷವೆಂದರೆ, ಈ ಸರಣಿಯು 200 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿರಲಿದೆ. ಬನ್ನಿ, ಈ ಫೋನ್‌ಗಳ ವಿಶೇಷತೆಗಳನ್ನು ತಿಳಿಯೋಣ.

ಕಂಪನಿಯು ವಿವೋ X200 ಸರಣಿಯನ್ನು ಈ ತಿಂಗಳು (ಡಿಸೆಂಬರ್) ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈಗಾಗಲೇ ಚೀನಾದಲ್ಲಿ ರಿಲೀಸ್ ಮಾಡಲಾಗಿದೆ. ವಿವೋ ಇಂಡಿಯಾ ವೆಬ್‌ಸೈಟ್‌ನಲ್ಲಿ ಮೈಕ್ರೋಸೈಟ್‌ ಲೈವ್ ಮಾಡಲಾಗಿದೆ. ಎರಡೂ ಫೋನ್‌ಗಳಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿರಲಿದೆ. ಇವು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿವೆ. ಈ ಫೋನ್ 6.78 ಇಂಚಿನ ಡಿಸ್ಪ್ಲೇ, 6000mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಡಲಿವೆ.

Vivo: 200MP ಕ್ಯಾಮೆರಾ.. 6000mAh ಬ್ಯಾಟರಿ.. ಧೂಳೆಬ್ಬಿಸಲಿವೆ 2 ಹೊಸ ಫೋನ್!

ವಿವೋ X200 ಸರಣಿಯ ಬಣ್ಣ ಮತ್ತು ಲಭ್ಯತೆ

ವಿವೋ X200 ಪ್ರೊ ಮೊಬೈಲ್ ಟೈಟಾನಿಯಂ ಗ್ರೇ ಮತ್ತು ವಿವೋ X200 ಹಸಿರು ಬಣ್ಣದಲ್ಲಿ ಬರಲಿದೆ. ಈ ಫೋನ್‌ 16GB + 512GB ಸ್ಟೋರೇಜ್ ಮತ್ತು ವಿವೋ X200 ಮೊಬೈಲ್ 12GB + 256GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ಗಳು ಫ್ಲಿಪ್‌ಕಾರ್ಟ್, ವಿವೋ ಇಂಡಿಯಾದ ಆನ್‌ಲೈನ್ ಸ್ಟೋರ್ ಮತ್ತು ವಿವೋ ಸ್ಟೋರ್‌ಗಳ ಮೂಲಕ ಮಾರಾಟವಾಗಲಿವೆ.

ವಿವೋ X200 ಸರಣಿಯ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ X200 ಸರಣಿಯ ಫೋನ್‌ಗಳು ಕ್ವಾಡ್ ಕರ್ವ್ ಡಿಸ್ಪ್ಲೇ ಹೊಂದಿರಲಿವೆ. ವಿವೋ X200 5G ಫೋನ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 2800 x 1260 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರಲಿದೆ. ವಿವೋ X200 ಪ್ರೊ ಮೊಬೈಲ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಈ ಎರಡೂ ಫೋನ್‌ಗಳು 120Hz ರಿಫ್ರೆಶ್ ದರ ಮತ್ತು 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿವೆ.

ಪ್ರೊಸೆಸರ್ ಸಾಮರ್ಥ್ಯ

ವಿವೋ X200 ಮತ್ತು ವಿವೋ X200 ಪ್ರೊ ಸ್ಮಾರ್ಟ್‌ಫೋನ್‌ಗಳು ಮೀಡಿಯಾ ಟೆಕ್ ಡೈಮೆನ್ಸಿಟಿ 9400 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಲಿವೆ. ಈ ಪ್ರೊಸೆಸರ್‌ ಅನ್ನು 3 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಜೊತೆಗೆ V3+ ಇಮೇಜಿಂಗ್ ಚಿಪ್ ಸಹ ಹೊಂದಿದೆ.

ಕ್ಯಾಮೆರಾ ಸೆಟಪ್

ವಿವೋ X200 ಪ್ರೊ ಮೊಬೈಲ್‌ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 200 ಮೆಗಾಪಿಕ್ಸೆಲ್ ZEISS APO ಟೆಲಿಫೋಟೋ ಕ್ಯಾಮೆರಾ ಹೊಂದಿದೆ. ಇದು 200 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿರುವ ಭಾರತದ ಮೊದಲ ಫೋನ್ ಎಂಬ ಹೆಗ್ಗಳಿಕೆ ಪಡೆದಿದೆ. ಇದರೊಂದಿಗೆ 1X ರಿಂದ 20X ಹೈಪರ್‌ಜೂಮ್, ದ್ವಿತೀಯ ಮತ್ತು ತೃತೀಯ ಕ್ಯಾಮೆರಾ ಸಹ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಎರಡೂ ಫೋನ್‌ಗಳು 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿವೆ.

ಬ್ಯಾಟರಿ ಮತ್ತು ಚಾರ್ಜಿಂಗ್

ವಿವೋ X200 ಮತ್ತು ವಿವೋ X200 ಪ್ರೊ ಫೋನ್‌ಗಳು ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿವೆ ಎಂದು ಕಂಪನಿ ತಿಳಿಸಿದೆ. ವಿವೋ X200 5G ಮೊಬೈಲ್ 5800mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ. ವಿವೋ X200 ಪ್ರೊ ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿರಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು. ವಿವೋ X200 ಪ್ರೊ ಫೋನಿನಲ್ಲಿ 30W ವೈರ್‌ಲೆಸ್ ವೇಗದ ಚಾರ್ಜಿಂಗ್ ಸೌಲಭ್ಯ ಸಹ ಇರಲಿದೆ.

Best Mobiles in India

English summary
Vivo X200 Series confirmed to launch in india with 200MP Camera: check details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+