ಇವರೆಲ್ಲ ಧೂಳಿಪಟ..! ಮಾರುಕಟ್ಟೆಗೆ 2 ಸೊಗಸಾದ Vivo ಫೋನ್ ಎಂಟ್ರಿ; 200MP ಕ್ಯಾಮೆರಾ.. 6200mAh ಬ್ಯಾಟರಿ.. ಬೆಲೆ ಎಷ್ಟು?
ವಿವೋ ಒಂದೇ ದಿನ ಎರಡು ಸೊಗಸಾದ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳು ವಿವೋ X200 ಅಲ್ಟ್ರಾ (vivo X200 Ultra) ಮತ್ತು ವಿವೋ X200s (vivo X200s) ಎಂಬ ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಎರಡೂ ಸಹ ಸ್ಮಾರ್ಟ್‌ಫೋನ್ ಕ್ಷೇತ್ರವನ್ನೇ ಬೆಚ್ಚಿಬೀಳಿಸುವ ವೈಶಿಷ್ಟ್ಯಗಳನ್ನು ಹೊಂದಿವೆ. ವಿವೋ X200 ಅಲ್ಟ್ರಾ ಮೊಬೈಲ್ ಏಪ್ರಿಲ್ 29 ರಂದು ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ವಿವೋ V200S ಫೋನ್ ಏಪ್ರಿಲ್ 25 ರಿಂದ ಮಾರಾಟ ಶುರುವಾಗಲಿದೆ. ಈ ಹೊಸ ಮೊಬೈಲ್‌ಗಳ ಬೆಲೆ ಮತ್ತು ವೈಶಿಷ್ಟ್ಯಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ವಿವೋ X200 ಅಲ್ಟ್ರಾ ಸ್ಮಾರ್ಟ್‌ಫೋನ್ 6.82 ಇಂಚಿನ ಡಿಸ್ಪ್ಲೇ ಹೊಂದಿದೆ. ವಿವೋ X200s ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ವಿವೋ X200 ಅಲ್ಟ್ರಾ ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ವಿವೋ X200s ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9400+ ಪ್ರೊಸೆಸರ್ ಹೊಂದಿದೆ. ವಿವೋ X200 ಅಲ್ಟ್ರಾ ಸ್ಮಾರ್ಟ್‌ಫೋನ್ 200MP ಟೆಲಿಫೋಟೋ ಕ್ಯಾಮೆರಾ ಒಳಗೊಂಡಿದೆ. ವಿವೋ X200s ಮೊಬೈಲ್ 50MP + 50MP + 50MP ಕ್ಯಾಮೆರಾ ಸೆಟಪ್ ಒಳಗೊಂಡಿದೆ. ಈ ಫೋನಿನ ಇನ್ನಿತರ ವೈಶಿಷ್ಟ್ಯಗಳು ಈ ಕೆಳಗಿನಂತಿವೆ.

ವಿವೋ X200 ಅಲ್ಟ್ರಾ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ X200 ಅಲ್ಟ್ರಾ ಸ್ಮಾರ್ಟ್‌ಫೋನ್ 6.82 ಇಂಚಿನ 2K LTPO ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 3168 x 1440 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು HDR10+, 120Hz ರಿಫ್ರೆಶ್ ದರ, 2160Hz PWM ಡಿಮ್ಮಿಂಗ್ ಮತ್ತು ಆರ್ಮರ್ ಗ್ಲಾಸ್ ರಕ್ಷಣೆ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ವಿವೋ X200 ಅಲ್ಟ್ರಾ ಮೊಬೈಲ್ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 3 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಮೂಲ OS 5 ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 830 ಜಿಪಿಯು ಸಹ ಹೊಂದಿದೆ. ಈ ಮೊಬೈಲ್ 12GB ಮತ್ತು 16GB RAM ನೊಂದಿಗೆ ಬರುತ್ತದೆ. ಇದರೊಂದಿಗೆ 256GB, 512GB ಮತ್ತು 1TB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ವಿವೋ X200 ಅಲ್ಟ್ರಾ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಇದಲ್ಲದೆ 200 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HP9 ZEISS APO ಟೆಲಿಫೋಟೋ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಅಳವಡಿಸಲಾಗಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ವಿವೋ X200 ಅಲ್ಟ್ರಾ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಈ ಮೊಬೈಲ್ 90W ಅಲ್ಟ್ರಾ ಫಾಸ್ಟ್ ಫ್ಲ್ಯಾಶ್ ಚಾರ್ಜಿಂಗ್, 40W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ವಿವೋ X200 ಅಲ್ಟ್ರಾ ಮೊಬೈಲ್ ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್ಫ್ರಾರೆಡ್ ಸೆನ್ಸರ್ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು, ಹೈ-ಫೈ ಆಡಿಯೋ ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G SA/NSA, ಡ್ಯುಯಲ್ ಸಿಮ್, ಡ್ಯುಯಲ್ 4G VoLTE, ವೈ-ಫೈ 7, ಬ್ಲೂಟೂತ್ 5.4, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಮತ್ತು ಯುಎಸ್‌ಬಿ ಟೈಪ್ ಸಿ ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ವಿವೋ X200s ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ X200s ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2800 × 1260 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 2160Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್, 120Hz ರಿಫ್ರೆಶ್ ದರ, 5000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ವಿವೋ X200s ಮೊಬೈಲ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 9400+ ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 3 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಓಎಸ್ 5 ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಇಮ್ಮಾರ್ಟಲಿಸ್-G925 ಜಿಪಿಯು ಸಹ ಹೊಂದಿದೆ. ಈ ಮೊಬೈಲ್ 12GB ಮತ್ತು 16GB RAM ನೊಂದಿಗೆ ಬರುತ್ತದೆ. ಇದರೊಂದಿಗೆ 256GB, 512GB ಮತ್ತು 1TB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ವಿವೋ X200s ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಜೊತೆಗೆ 50 ಮೆಗಾಪಿಕ್ಸೆಲ್ 3X ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಅಳವಡಿಸಲಾಗಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ವಿವೋ X200s ಸ್ಮಾರ್ಟ್‌ಫೋನ್ 6200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಈ ಮೊಬೈಲ್ 90W ಅಲ್ಟ್ರಾ ಫಾಸ್ಟ್ ಫ್ಲ್ಯಾಶ್ ಚಾರ್ಜಿಂಗ್ ಮತ್ತು 40W ವೈರ್‌ಲೆಸ್ ಚಾರ್ಜಿಂಗ್ ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ವಿವೋ X200s ಮೊಬೈಲ್ ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್ಫ್ರಾರೆಡ್ ಸೆನ್ಸರ್ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G SA/NSA, ಡ್ಯುಯಲ್ ಸಿಮ್, ಡ್ಯುಯಲ್ 4G VoLTE, ವೈ-ಫೈ 7, ಬ್ಲೂಟೂತ್ 5.4, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಮತ್ತು ಯುಎಸ್‌ಬಿ ಟೈಪ್ ಸಿ ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ವಿವೋ X200 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ವಿವೋ X200 ಅಲ್ಟ್ರಾ ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವು 76,020 ರೂ.ಗೆ ಬಿಡುಗಡೆಯಾಗಿದೆ. 16GB RAM + 512GB ಸ್ಟೋರೇಜ್ ಬೆಲೆ 81,870 ರೂ. ಆಗಿದೆ. 16GB RAM + 1TB (ಸ್ಯಾಟಲೈಟ್ ಕಮ್ಯುನಿಕೇಷನ್ ಆವೃತ್ತಿ) ಸ್ಟೋರೇಜ್ ವೇರಿಯಂಟ್ 93,565 ರೂ. ಬೆಲೆ ಹೊಂದಿದೆ. 16GB RAM + 1TB (ಸ್ಯಾಟಲೈಟ್ ಕಮ್ಯುನಿಕೇಷನ್ ಎಡಿಷನ್ ಜೊತೆಗೆ ಫೋಟೋಗ್ರಾಫರ್ ಕಿಟ್) ಸ್ಟೋರೇಜ್ ಮಾದರಿಯ ಬೆಲೆ 1,13,450 ರೂ. ಇದೆ. ಪ್ರಸ್ತುತ ಈ ಮೊಬೈಲ್ ಮುಂಗಡ ಬುಕಿಂಗ್‌ಗೆ ಲಭ್ಯವಿದೆ. ಇದೇ ಏಪ್ರಿಲ್ 29 ರಿಂದ ಚೀನಾದಲ್ಲಿ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.
ವಿವೋ X200s ಬೆಲೆ ಮತ್ತು ಲಭ್ಯತೆ
ವಿವೋ X200s ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವು 49,115 ರೂ.ಗೆ ಬಿಡುಗಡೆಯಾಗಿದೆ. 16GB RAM + 256GB ಸ್ಟೋರೇಜ್ ಬೆಲೆ 51,455 ರೂ. ಆಗಿದೆ. 12GB RAM + 512GB ಸ್ಟೋರೇಜ್ ಮಾದರಿಯನ್ನು 54,965 ರೂ.ಗೆ ಪರಿಚಯಿಸಲಾಗಿದೆ. 16GB RAM + 512GB ಸ್ಟೋರೇಜ್ ವೇರಿಯಂಟ್ 58,475 ರೂ.ಗೆ ಲಾಂಚ್ ಆಗಿದೆ. ಇನ್ನು 16GB RAM + 1TB ಸ್ಟೋರೇಜ್ ಆಯ್ಕೆಯ 64,320 ರೂ.ಗೆ ಲಭ್ಯವಿದೆ. ಈ ಫೋನ್ ಪ್ರಸ್ತುತ ಮುಂಗಡ ಆರ್ಡರ್ ಮಾಡಲು ಲಭ್ಯವಿದೆ. ಮತ್ತು ಇದೇ ಏಪ್ರಿಲ್ 25 ರಿಂದ ಚೀನಾದಲ್ಲಿ ಮಾರಾಟವಾಗಲಿದೆ.


Click it and Unblock the Notifications








