Home
ಮೊಬೈಲ್

Vivo: ದೈತ್ಯ ಫೋನಿನ ಬೆಲೆ ಇಳಿಕೆ; 5100 ಡಿಸ್ಕೌಂಟ್.. 5% ಕ್ಯಾಶ್‌ಬ್ಯಾಕ್.. ಇಷ್ಟೊಂದಾ ಬೆಲೆ?

ವಿವೋ ಪ್ರಿಯರಿಗೆ ಇಲ್ಲಿದೆ ಖುಷಿ ಸುದ್ದಿ! ಶೀಘ್ರದಲ್ಲೇ ವಿವೋ X200 (Vivo X200) ಸರಣಿ ಬಿಡುಗಡೆಯಾಗಲಿದೆ. ಇದಕ್ಕೂ ಮೊದಲೇ, ವಿವೋ X90 5G (Vivo X90 5G) ಫೋನಿನ ಬೆಲೆ ಭಾರೀ ಇಳಿಕೆಯಾಗಿದೆ. ಹೌದು, ಕಂಪನಿಯು ಅದ್ಭುತ ಕ್ಯಾಮೆರಾ ಹೊಂದಿರುವ ಈ ಫೋನಿನ ಖರೀದಿ ಮೇಲೆ 5000 ರೂ. ಗಿಂತ ಹೆಚ್ಚು ಡಿಸ್ಕೌಂಟ್ ಘೋಷಿಸಿದೆ. ಜೊತೆಗೆ, ನೀವು ಬ್ಯಾಂಕ್ ಆಫರ್‌, ಕ್ಯಾಶ್‌ಬ್ಯಾಕ್ ಮತ್ತು ಎಕ್ಸ್‌ಚೇಂಜ್ ಆಫರ್‌ ಸಹ ಲಭ್ಯವಿದೆ. ಬನ್ನಿ, ವಿವೋ X90 5G ಫೋನಿನ ಹೊಸ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.

ಫೋಟೋಗ್ರಫಿ ಪ್ರಿಯರಿಗೆ ವಿವೋ X90 5G ಪರ್ಫೆಕ್ಟ್‌ ಆಯ್ಕೆಯಾಗಿದೆ. ಕಂಪನಿಯು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಶನ್ 9200 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದರಲ್ಲಿ 6.78 ಇಂಚಿನ ಡಿಸ್ಪ್ಲೇ ಇದೆ. ಜೊತೆಗೆ 4810mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Vivo: 5G ಫೋನಿನ ಬೆಲೆ ಇಳಿಕೆ; 5100 ಡಿಸ್ಕೌಂಟ್.. 5% ಕ್ಯಾಶ್‌ಬ್ಯಾಕ್.. ಹೇಗಿದೆ?

ವಿವೋ X90 5G ಬೆಲೆ ಮತ್ತು ಆಫರ್‌ಗಳು

ಕಂಪನಿಯು ವಿವೋ X90 5G ಫೋನಿನ 8GB RAM + 256GB ಸ್ಟೋರೇಜ್‌ ರೂಪಾಂತರವನ್ನು 59,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ಇದರ ಮೇಲೆ 5,100 ರೂ.ಗಳ ರಿಯಾಯಿತಿ ಘೋಷಿಸಿದೆ. ನೀವು 54,899 ರೂ.ಗೆ ಖರೀದಿಸಬಹುದು. ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಸ್ಮಾರ್ಟ್‌ಫೋನ್ ಖರೀದಿಸಿದರೆ, ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಈ ಫೋನ್‌ ಬ್ರೀಜ್ ಬ್ಲೂ ಮತ್ತು ಆಸ್ಟರಾಯ್ಡ್ ಬ್ಲ್ಯಾಕ್‌ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಹುದು.

ವಿವೋ X90 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ವಿವೋ X90 5G ಮೊಬೈಲ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 300Hz ಟಚ್ ಡ್ಯಾಶ್‌ಬೋರ್ಡ್ ಮತ್ತು 2,800×1,260 ರೆಸಲ್ಯೂಶನ್ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ವಿವೋ X90 5G ಅನ್ನು ಮೀಡಿಯಾಟೆಕ್ ಡೈಮೆನ್ಸಿಟಿ 9200 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಗ್ರಾಫಿಕ್ಸ್‌ಗಾಗಿ, ಇಮ್ಮಾರ್ಟಲಿಸ್ G715 ಜಿಪಿಯು ಹೊಂದಿದೆ. ಈ ಮೊಬೈಲ್ 12GB RAM ಮತ್ತು 256GB ಸ್ಟೋರೇಜ್‌ ಹೊಂದಿದೆ. ಈ ಫೋನ್‌ ಆಂಡ್ರಾಯ್ಡ್‌ 13 ಆಧಾರಿತ FanTouch ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ.

ಕ್ಯಾಮೆರಾ ಸೆಟಪ್

ವಿವೋ X90 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದು OIS, EIS ಮತ್ತು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಜೊತೆಗೆ 12 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 12 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ವಿವೋ X90 5G ಅನ್ನು 4810mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.

ಇತರೆ ವೈಶಿಷ್ಟ್ಯಗಳು

ವಿವೋ X90 5G ಫೋನಿನಲ್ಲಿ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್‌ ಸಂವೇದಕ, ಸ್ಟೀರಿಯೋ ಸ್ಪೀಕರ್‌ಗಳು, ಆಪ್ಟಿಎಕ್ಸ್ ಎಚ್‌ಡಿ ಮತ್ತು ಹೈ ರೆಸ್ ಆಡಿಯೋ ಸೌಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ 6 ಮತ್ತು ಬ್ಲೂಟೂತ್ 5.2 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Vivo X90 5G available with Rs 5000 discount on flipkart: know new price, offers, availability specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+