3500 ಡಿಸ್ಕೌಂಟ್! 50MP ಕ್ಯಾಮೆರಾ.. ದೊಡ್ಡ ಬ್ಯಾಟರಿ.. ಸಸ್ತಾ ಬೆಲೆಗೆ Vivo ಫೋನ್ ಸೇಲ್
ವಿವೋ ಮೊಬೈಲ್‌ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಾರೆ. ಕಂಪನಿಯು ಸಹ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಜೊತೆಗೆ, ಹಲವು ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಆಫರ್ ನೀಡುತ್ತಿದೆ. ಪ್ರಸ್ತುತ, ವಿವೋ Y200e 5G (Vivo Y200e 5G) ಮೊಬೈಲ್ ಖರೀದಿ ಮೇಲೆ 3,500 ರೂ. ಡಿಸ್ಕೌಂಟ್ ಘೋಷಿಸಿದೆ. ಜೊತೆಗೆ, ಬ್ಯಾಂಕ್ ಆಫರ್, ನೋ ಕಾಸ್ಟ್ ಇಎಂಐ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ನೀವು, ಕಡಿಮೆ ಬೆಲೆಗೆ ಈ 5G ಫೋನ್ ಕೊಳ್ಳಬಹುದು. ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಕಂಪನಿಯು ವಿವೋ Y200e 5G ಮೊಬೈಲ್ ಅನ್ನು ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡಿತ್ತು. ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡುತ್ತಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಇದು ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 5000mAh ಬ್ಯಾಟರಿ ಮತ್ತು 44W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ವಿವೋ Y200e 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ವಿವೋ Y200e 5G ಫೋನಿನ ಎರಡು ಸ್ಟೋರೇಜ್ ಆಯ್ಕೆಗಳ ಮೇಲೆ 3,500 ರೂ.ಗಳ ವರೆಗೆ ರಿಯಾಯಿತಿ ಘೋಷಿಸಿದೆ. ಕಂಪನಿಯು 6GB RAM + 128GB ಸ್ಟೋರೇಜ್ ರೂಪಾಂತರವನ್ನು 19,999 ರೂ.ಗೆ ಬಿಡುಗಡೆ ಮಾಡಿತ್ತು. ಇದರ ಮೇಲೆ 2,000 ರೂ. ಕೂಪನ್ ರಿಯಾಯಿತಿ ಮತ್ತು 1,500 ರೂ. ಬ್ಯಾಂಕ್ ಆಫರ್ ಲಭ್ಯವಿದೆ. ಡಿಸ್ಕೌಂಟ್ ಬಳಿಕ 16,499 ರೂ.ಗೆ ಖರೀದಿಸಬಹುದು.
ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 20,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, 1,500 ರೂ. ಕೂಪನ್ ರಿಯಾಯಿತಿ ಮತ್ತು 1,500 ರೂ. ಬ್ಯಾಂಕ್ ಆಫರ್ ಲಭ್ಯವಿದೆ. ಡಿಸ್ಕೌಂಟ್‌ನೊಂದಿಗೆ 17,999 ರೂ.ಗೆ ಖರೀದಿಸಬಹುದು. ಕಂಪನಿಯು 3 ರಿಂದ 6 ತಿಂಗಳ ನೋ ಕಾಸ್ಟ್ ಇಎಂಐ ಆಯ್ಕೆ ನೀಡುತ್ತಿದೆ. ಜೊತೆಗೆ 19,600 ರೂ.ಗಳ ಎಕ್ಸ್‌ಚೇಂಜ್ ಆಫರ್ ಲಭ್ಯವಿದೆ. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು. ನೀವು, ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ಸ್ಟೋರ್‌ಗಳಲ್ಲಿಯೂ ಖರೀದಿಸಬಹುದು.
ವಿವೋ Y200e 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ Y200e 5G ಮೊಬೈಲ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 1,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ವಿವೋ Y200e 5G ಫೋನನ್ನು ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6GB ಮತ್ತು 8GB RAM, 8GB ವರೆಗೆ ವರ್ಚುವಲ್ RAM ಮತ್ತು 128GB ಸ್ಟೋರೇಜ್ ಲಭ್ಯವಿದೆ.
ಕ್ಯಾಮೆರಾ ಸೆಟಪ್
ವಿವೋ Y200e 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ, ಫ್ಲಿಕರ್ ಸಂವೇದಕ ಮತ್ತು ಎಲ್ಇಡಿ ಫ್ಲ್ಯಾಷ್ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ವಿವೋ Y200e 5G ಫೋನಿನಲ್ಲಿ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 44W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ವಿವೋ Y200e 5G ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, 4G, ವೈ-ಫೈ, ಬ್ಲೂಟೂತ್ 5.0 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








