ಮಾರುಕಟ್ಟೆಗೆ ಬಂತು ಅಗ್ಗದ Vivo ಮೊಬೈಲ್; 6500mAh ಬ್ಯಾಟರಿ.. 50MP ಕ್ಯಾಮೆರಾ.. ಯಾವ ಫೋನ್?
ವಿವೋ ಸೈಲೆಂಟ್ ಆಗಿಯೇ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದು 8GB RAM ಹೊಂದಿರುವ ಅಗ್ಗದ ಮೊಬೈಲ್ ಆಗಿದೆ. ಹೌದು, ಕಂಪನಿಯು ಎರಡು ತಿಂಗಳ ಹಿಂದೆ ಕಡಿಮೆ ಬಜೆಟ್‌ನಲ್ಲಿ Vivo Y29 5G ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಇದು ಕೇವಲ 13,999 ರೂ.ಗೆ ಮಾರಾಟವಾಗುತ್ತಿದೆ. ಇದೀಗ, ಕಂಪನಿಯು ಈ 5G ವಿವೋ ಫೋನಿನ 4G ರೂಪಾಂತರವನ್ನು ಜಾಗತಿಕ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಅಂದರೆ, ಇದು ವಿವೋ Y29 4G (Vivo Y29 4G) ಹೆಸರಿನೊಂದಿಗೆ ರಿಲೀಸ್ ಆಗಿದೆ.
ವಿವೋ Y29 4G ಫೋನನ್ನು ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 685 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಇದು 6.68 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 6500mAh ಸಾಮರ್ಥ್ಯದ ಶಕ್ತಿಶಾಲಿ ಬ್ಯಾಟರಿ ಮತ್ತು 44W ವೇಗದ ಚಾರ್ಜಿಂಗ್ ಒಳಗೊಂಡಿದೆ. ಜೊತೆಗೆ 8GB RAM + 256GB ಸ್ಟೋರೇಜ್, 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ.

ವಿವೋ Y29 4G ಬೆಲೆ
ವಿವೋ Y29 4G ಫೋನಿನ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 14,330 ರೂ. ಆಗಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್ 14,790 ರೂ. ಬೆಲೆಗೆ ಬಿಡುಗಡೆಯಾಗಿದೆ. ಮತ್ತು 8GB RAM + 256GB ಸ್ಟೋರೇಜ್ ಆಯ್ಕೆಯು 17,190 ರೂ.ಗೆ ಮಾರಾಟವಾಗಲಿದೆ. ಈ ಫೋನನ್ನು ಎಲಿಗಂಟ್ ವೈಟ್ ಮತ್ತು ನೋಬಲ್ ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ (ಬಾಂಗ್ಲಾದೇಶ) ಮಾರಾಟವಾಗಲಿದೆ. ಭಾರತೀಯ ಮಾರುಕಟ್ಟೆಗೆ ಯಾವಾಗ ಬರುತ್ತದೆ ಎಂದು ಕಂಪನಿ ಮಾಹಿತಿ ನೀಡಿಲ್ಲ.
ವಿವೋ Y29 4G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ Y29 4G ಸ್ಮಾರ್ಟ್‌ಫೋನ್ 6.68 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 1608 × 720 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ, 1000 ನಿಟ್ಸ್ ಹೊಳಪು ಮತ್ತು 264ppi ನಂತಹ ವೈಶಿಷ್ಟ್ಯಗಳನ್ನು ಬೆಂಬಲಿಸುವ LCD ಡಿಸ್ಪ್ಲೇ ಆಗಿದೆ.
ಪ್ರೊಸೆಸರ್ ಸಾಮರ್ಥ್ಯ
ಹೊಸ ವಿವೋ Y29 4G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 685 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಅನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ Funtouch OS 15 ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6GB RAM ಮತ್ತು 8GB RAM ಹೊಂದಿದೆ. ಜೊತೆಗೆ 128GB ಸ್ಟೋರೇಜ್ ಮತ್ತು 256GB ಲಭ್ಯವಿದೆ.
ಕ್ಯಾಮೆರಾ ಸೆಟಪ್
ವಿವೋ Y29 4G ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಒಳಗೊಂಡಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ನೂತನ ವಿವೋ Y29 4G ಸ್ಮಾರ್ಟ್‌ಫೋನ್ 6500mAh ಸಾಮರ್ಥ್ಯದ ಬಿಗ್ ಬ್ಯಾಟರಿ ಹೊಂದಿದೆ. ಈ ಶಕ್ತಿಶಾಲಿ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಈ ಸ್ಮಾರ್ಟ್‌ಫೋನ್ 45W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿದೆ. Vivo Y29 5G ಮೊಬೈಲ್ 5500mAh ಬ್ಯಾಟರಿ ಹೊಂದಿದೆ.


Click it and Unblock the Notifications








