Vivo Y300 5G ಬೆಲೆ ಲೀಕ್! 32MP ಸೆಲ್ಫಿ ಕ್ಯಾಮೆರಾ.. 256GB ಸ್ಟೋರೇಜ್ ಖಚಿತ.. ಯಾವಾಗ ಲಾಂಚ್?
ವಿವೋ (Vivo) ಹೊಸ ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ವಿವೋ Y300 5G (Vivo Y300 5G) ಹೆಸರಿನೊಂದಿಗೆ ಭಾರತಕ್ಕೆ ಲಗ್ಗೆ ಇಡಲಿದೆ. ಹೌದು, ಕಂಪನಿಯು ಕಳೆದ ತಿಂಗಳು ಭಾರತದಲ್ಲಿ ವಿವೋ Y300 ಪ್ಲಸ್ 5G (Vivo Y300+ 5G) ಫೋನನ್ನು ಪರಿಚಯಿಸಿತ್ತು. ಇದೀಗ, ಮತ್ತೊಂದು ಹೊಸ ವಿವೋ Y300 5G ಮೊಬೈಲ್ ಬಿಡುಗಡೆಗೆ ಸಿದ್ಧವಾಗಿದೆ. ಬಿಡುಗಡೆಗೂ ಮೊದಲೇ, ಈ ಮೊಬೈಲ್‌ನ ಬೆಲೆ ಸೋರಿಕೆಯಾಗಿದೆ. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಕಂಪನಿಯು ಶೀಘ್ರದಲ್ಲೇ ವಿವೋ Y300 5G ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಇದು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇರಲಿದೆ. ಇದು ಕ್ವಾಲ್‌ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಈ ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಜೊತೆಗೆ 5000mAh ಬ್ಯಾಟರಿ, 80W ವೇಗದ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜಾಗಿದೆ.

ವಿವೋ Y300 5G ಫೋನಿನ ಬೆಲೆ (ಸೋರಿಕೆ)
8GB RAM + 128GB ಸ್ಟೋರೇಜ್ ಬೆಲೆ = 21,999 ರೂ.
8GB RAM + 256GB ಸ್ಟೋರೇಜ್ ಬೆಲೆ = 23,999 ರೂ.
ಕಂಪನಿಯು ವಿವೋ Y300 5G ಫೋನನ್ನು 8GB RAM ನೊಂದಿಗೆ ಬಿಡುಗಡೆ ಮಾಡಲಿದೆ. ನೀವು, 128GB ಮತ್ತು 256GB ಸ್ಟೋರೇಜ್ ಆಯ್ಕೆಗಳಲ್ಲಿ ಕೊಳ್ಳಬಹುದು. ವರದಿಯ ಪ್ರಕಾರ, 128GB ಸ್ಟೋರೇಜ್ ರೂಪಾಂತರವನ್ನು 21,999 ರೂ.ಗೆ ಬಿಡುಗಡೆ ಮಾಡಲಾಗುವುದು. ಫೋನಿನ 256GB ಸ್ಟೋರೇಜ್ ರೂಪಾಂತರದ ಬೆಲೆ 23,999 ರೂ. ಇರಲಿದೆ. ನೀವು, ಈ ಫೋನನ್ನು ಟೈಟಾನಿಯಂ ಸಿಲ್ವರ್, ಫ್ಯಾಂಟಮ್ ಪರ್ಪಲ್ ಮತ್ತು ಎಮರಾಲ್ಡ್ ಗ್ರೀನ್ ಬಣ್ಣಗಳಲ್ಲಿ ಖರೀದಿಸಬಹುದು.
ವಿವೋ Y300 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮಾಹಿತಿಯ ಪ್ರಕಾರ, ವಿವೋ Y300 5G ಮೊಬೈಲ್ 6.7 ಇಂಚಿನ ಪೂರ್ಣ ಹೆಚ್‌ಡಿ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು ಪಂಚ್ ಹೋಲ್ ಶೈಲಿಯ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1200 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಹೊಂದಿರುತ್ತದೆ. ಈ ಫೋನಿನಲ್ಲಿ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಸ್ಟೀರಿಯೋ ಸ್ಪೀಕರ್‌ಗಳು ಸಹ ಲಭ್ಯವಿರುತ್ತವೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ವಿವೋ Y300 5G ಫೋನನ್ನು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 2 ಆಕ್ಟಾ ಕೋರ್ ಪ್ರೊಸೆಸರ್‌ನೊಂಡಿಗೆ ಬಿಡುಗಡೆ ಮಾಡಲಿದೆ. ಇದು 8 ಕೋರ್ ಪ್ರೊಸೆಸರ್ ಆಗಿದೆ. ಇದನ್ನು 4 ನ್ಯಾನೋಮೀಟರ್ ಪ್ರಕ್ರಿಯೆ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ.
ಕ್ಯಾಮೆರಾ ಸೆಟಪ್
ಮುಂಬರುವ ವಿವೋ Y300 5G ಮೊಬೈಲ್ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಮತ್ತು ಮುಂಭಾಗದಲ್ಲಿ ಒಂದು ಸೆಲ್ಫಿ ಕ್ಯಾಮೆರಾ ಹೊಂದಿರುತ್ತದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿರುತ್ತದೆ. ಇದು ಎಐ (AI) ಔರಾ ಲೈಟ್‌ನೊಂದಿಗೆ ಬರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿರುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ವಿವೋ Y300 5G ಫೋನನ್ನು 5,000mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತದೆ.
ಇತರೆ ವೈಶಿಷ್ಟ್ಯಗಳು
ವಿವೋ Y300 5G ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಈ ಫೋನಿನಲ್ಲಿ ಹಲವು ಎಐ (AI) ಫೀಚರ್ಸ್ ಲಭ್ಯವಿರಲಿದೆ. ಎಐ ಔರಾ ಲೈಟ್ ಪೋರ್ಟ್ರೇಟ್, ಎಐ ಡಾಕ್ಯುಮೆಂಟ್‌ಗಳು, ಎಐ ಅಳಿಸುವಿಕೆ, ಎಐ ಸೂಪರ್‌ಮೂನ್, ಎಐ ವರ್ಧನೆ ಸೇರಿದಂತೆ ಅನೇಕ ಎಐ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ.


Click it and Unblock the Notifications








