ಬಂದೇ ಬಿಡ್ತು Vivo Y300 5G ಫೋನ್; 32MP ಸೆಲ್ಫಿ ಕ್ಯಾಮೆರಾ.. 1000 ಡಿಸ್ಕೌಂಟ್.. ಬೆಲೆಯೂ ಕಡಿಮೆ!
ಕಾಯುವಿಕೆ ಮುಗಿಯಿತು! 32 ಸೆಲ್ಫಿ ಕ್ಯಾಮೆರಾ.. 256GB ಸ್ಟೋರೇಜ್.. 80W ಸ್ಪೀಡ್ ಚಾರ್ಜಿಂಗ್.. ವಿವೋ ಪ್ರಿಯರಿಗೆ ಇದಕ್ಕಿಂತ ಹೆಚ್ಚೇನು ಬೇಕು! ಹೌದು, ವಿವೋ (Vivo) ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದು, ವಿವೋ Y300 5G (Vivo Y300 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ನಿರೀಕ್ಷೆಯಂತೆಯೇ, ಈ ಮೊಬೈಲ್ 22,000 ರೂ.ಗಿಂತಲೂ ಕಡಿಮೆ ಬೆಲೆಯನ್ನು ಹೊಂದಿದೆ. ಬನ್ನಿ, ಹೊಸ ವಿವೋ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ ದೇಶದ ವಿಶ್ವಾಸಾರ್ಹ ಮೊಬೈಲ್ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕಂಪನಿಯು ಇಂದು ಹೊಸ ವಿವೋ Y300 5G ಫೋನನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಇದು 6.7 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದರೊಂದಿಗೆ 16GB RAM, 5000mAh ಬ್ಯಾಟರಿ ಮತ್ತು 80W ವೇಗದ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ.

ವಿವೋ Y300 5G ಫೋನಿನ ಬೆಲೆ
8GB RAM + 128GB ಸ್ಟೋರೇಜ್ ಬೆಲೆ = 21,999 ರೂ.
8GB RAM + 256GB ಸ್ಟೋರೇಜ್ ಬೆಲೆ = 23,999 ರೂ.
ವಿವೋ Y300 5G ಫೋನನ್ನು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 21,999 ರೂ. ಇದೆ. 8GB RAM + 256GB ಸ್ಟೋರೇಜ್ ರೂಪಾಂತರವನ್ನು 23,999 ರೂ.ಗೆ ಪರಿಚಯಿಸಲಾಗಿದೆ. ಈ ಮೊಬೈಲ್ ನವೆಂಬರ್ 27 ರಿಂದ ಮಾರಾಟವಾಗಲಿದೆ.
ನೀವು, ಟೈಟಾನಿಯಂ ಸಿಲ್ವರ್, ಫ್ಯಾಂಟಮ್ ಪರ್ಪಲ್ ಮತ್ತು ಎಮರಾಲ್ಡ್ ಗ್ರೀನ್ ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು. ಕಂಪನಿಯು ವಿವೋ Y300 5G ಫೋನಿನ ಖರೀದಿ ಮೇಲೆ ಆಫರ್‌ಗಳನ್ನು ಸಹ ಘೋಷಿಸಿದೆ. ನೀವು, ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೇಲೆ 2000 ರೂ. ರಿಯಾಯಿತಿ ಪಡೆಯಬಹುದು.
ವಿವೋ Y300 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ Y300 5G ಫೋನ್ 6.7 ಇಂಚಿನ ಪೂರ್ಣ ಹೆಚ್‌ಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಫೋನ್ 2400 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಹೊಂದಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1800 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಜೊತೆಗೆ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು 2.5ಡಿ ಗ್ಲಾಸ್ ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ನೂತನ ವಿವೋ Y300 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ Funtouch ಓಎಸ್ 14ನಲ್ಲಿ ಕೆಲಸ ನಿರ್ವಹಿಸುತ್ತದೆ.

ಕ್ಯಾಮೆರಾ ಸೆಟಪ್
ಹೊಸ ವಿವೋ Y300 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ವಿವೋ Y300 5G ಫೋನನ್ನು 5000mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಫ್ಲಾಶ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ವಿವೋ Y300 5G ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಈ ಫೋನಿನಲ್ಲಿ 8 5G ಬ್ಯಾಂಡ್‌ಗಳು, ಯುಎಸ್‌ಬಿ ಟೈಪ್ ಸಿ ಆಡಿಯೊ ಮತ್ತು ಸ್ಟಿರಿಯೊ ಸ್ಪೀಕರ್‌ಗಳು ಲಭ್ಯವಿವೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5GHz ವೈ-ಫೈ, ಬ್ಲೂಟೂತ್ 5.0, ಡ್ಯುಯಲ್ 4G VoLTE ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








