ಹೊಸ Vivo Y300i ಲಾಂಚ್; 6500mAh ಬಿಗ್ ಬ್ಯಾಟರಿ.. 512GB ಸ್ಟೋರೇಜ್.. ಬೆಲೆಯೂ ಕಡಿಮೆ
ವಿವೋ ಸೈಲೆಂಟ್ ಆಗಿಯೇ ಮತ್ತೊಂದು ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದನ್ನು ಕಳೆದ ವರ್ಷ ಪರಿಚಯಿಸಿದ್ದ ವಿವೋ Y200i (vivo Y200i) ಉತ್ತರಾಧಿಕಾರಿಯಾಗಿ ತರಲಾಗಿದೆ. ಹೌದು, ಕಂಪನಿಯು ತನ್ನ 'Y' ಸರಣಿಯಲ್ಲಿ ವಿವೋ Y300i 5G (vivo Y300i 5G) ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಿದೆ. ಇದು 18 ಸಾವಿರ ರೂ.ಗಳ ಆರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದೇ ಮಾರ್ಚ್ 14 ರಿಂದ ಮಾರಾಟ ಸಹ ಪ್ರಾರಂಭವಾಗಲಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ವಿವೋ Y300i ಮೊಬೈಲ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಸ್ನಾಪ್‌ಡ್ರಾಗನ್ 4 ಜೆನ್ ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ 6.68 ಇಂಚಿನ ಡಿಸ್ಪ್ಲೇ ಹೊಂದಿದೆ. 12GB ವರೆಗೆ RAM ಜೊತೆಗೆ 12GB ವಿಸ್ತೃತ RAM ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 6500mAh ಬ್ಯಾಟರಿಯನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ವಿವೋ Y300i ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವಿವೋ Y300i ಸ್ಮಾರ್ಟ್‌ಫೋನ್ 6.68 ಇಂಚಿನ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 1608×720 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಹಾಗೆಯೇ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ವಿವೋ Y300i ಮೊಬೈಲ್ ಸ್ನಾಪ್‌ಡ್ರಾಗನ್ 4 ಜೆನ್ 2 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ಒರಿಜಿನ್ ಓಎಸ್ ನೊಂದಿಗೆ ಕೆಲಸ ಮಾಡುತ್ತದೆ. ಜೊತೆಗೆ ಗ್ರಾಫಿಕ್ಸ್‌ಗಾಗಿ, ಇದು ಅಡ್ರಿನೊ 613 ಜಿಪಿಯು ಸಹ ಹೊಂದಿದೆ. ಈ ಫೋನ್ 8GB ಮತ್ತು 12GB RAM, 256GB ಮತ್ತು 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಕ್ಯಾಮೆರಾ ಸೆಟಪ್
ವಿವೋ Y300i ಫೋನಿನ ಕ್ಯಾಮೆರಾ ಸೆಟಪ್ ಅದ್ಭುತವಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಅಳವಡಿಸಲಾಗಿದೆ. ಇದು ಎಲ್‌ಇಡಿ ಫ್ಲ್ಯಾಶ್ ಜೊತೆಗೆ ಬರುತ್ತದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಮೊಬೈಲ್, 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ವಿವೋ Y300i ಸ್ಮಾರ್ಟ್‌ಫೋನ್ 6500mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ವಿವೋ Y300i ಮೊಬೈಲ್ IR ಸೆನ್ಸರ್ ಹೊಂದಿದೆ. ಇದು ಡ್ಯುಯಲ್ ಸಿಮ್, ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.1, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ವಿವೋ Y300i ಬೆಲೆ ಮತ್ತು ಲಭ್ಯತೆ
ವಿವೋ Y300i ಫೋನಿನ 8GB + 256GB ಸ್ಟೋರೇಜ್ ರೂಪಾಂತರವನ್ನು 18,001 ರೂ.ಗೆ ಬಿಡುಗಡೆ ಮಾಡಲಾಗಿದೆ. 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 19,200 ರೂ. ಆಗಿದೆ. ಹಾಗೆಯೇ 2GB + 512GB ಸ್ಟೋರೇಜ್ ಮಾದರಿಯನ್ನು 21,600 ರೂ.ಗೆ ಪರಿಚಯಿಸಲಾಗಿದೆ. ಪ್ರಸ್ತುತ, ಈ ಫೋನ್ ಆರ್ಡರ್ ಮಾಡಲು ಲಭ್ಯವಿದೆ. ಇದೇ ಮಾರ್ಚ್ 14 ರಿಂದ ಚೀನಾದಲ್ಲಿ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಶೀಘ್ರದಲ್ಲಿಯೇ ಭಾರತೀಯ ಮಾರುಕಟ್ಟೆಯಲ್ಲಿಯೂ ಇದು ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








