ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಬೆಸ್ಟ್ ವಿವೋ ಫೋನ್‌ಗಳು
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ ಕಂಪನಿಯು ಭಿನ್ನ ಮೊಬೈಲ್‌ಗಳ ಸರಣಿಯ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ವಿವೋ ಬಜೆಟ್ ಬೆಲೆಯ ಗ್ರಾಹಕರನ್ನು ಆಕರ್ಷಿಸುವುದರ ಜೊತೆಗೆ ಮೀಡ್‌ರೇಂಜ್ ವಿಭಾಗದ ಗ್ರಾಹಕರನ್ನು ತನ್ನತ್ತ ಗಮನ ಸೆಳೆದುಕೊಂಡಿದೆ. ಅದಾಗ್ಯೂ, ಸಂಸ್ಥೆಯ ಬಜೆಟ್ ಬೆಲೆಯ ಕೆಲವು ಮೊಬೈಲ್‌ಗಳು ಮಾತ್ರ ಅಧಿಕ ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ.
ಹೌದು, ವಿವೋ ಸಂಸ್ಥೆಯು ಬಜೆಟ್ ಪ್ರೈಸ್‌ಟ್ಯಾಗ್ ನಿಂದ ಹೈ ಎಂಡ್ ದರದ ಮೊಬೈಲ್ ಆಯ್ಕೆಯನ್ನು ಒಳಗೊಂಡಿದ್ದು, ಜೊತೆಗೆ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಅಟ್ರ್ಯಾಕ್ಟ್ ಮಾಡಿದೆ. ಇನ್ನು ತನ್ನ ವರ್ಷಗದಲ್ಲೇ ವಿವೋ ಸಂಸ್ಥೆಯು ಮುಖ್ಯವಾಗಿ ರೆಡ್ಮಿ, ರಿಯಲ್‌ಮಿ, ಒಪ್ಪೋ ಸಂಸ್ಥೆಯ ಮೊಬೈಲ್‌ಗಳೊಂದಿಗೆ ನೇರ ಪೈಪೋಟಿ ಯೊಂದಿಗೆ ಗುರುತಿಸಿಕೊಂಡಿದೆ. ಸಂಸ್ಥೆಯ ಫೋನ್‌ಗಳು ಆಕರ್ಷಕ ಡಿಸೈನ್, ಉತ್ತಮ ಕ್ಯಾಮೆರಾ ಆಯ್ಕೆ, ಉತ್ತಮ ಪ್ರೊಸೆಸರ್, ಬಿಗ್ ಬ್ಯಾಟರಿ ಗಳಂತಹ ಫೀಚರ್ಸ್‌ಗಳನ್ನು ಒಳಗೊಂಡಿವೆ.

ಕಡಿಮೆ ಪ್ರೈಸ್ ಟ್ಯಾಗ್‌ನಲ್ಲಿ ವಿವೋ ಮೊಬೈಲ್ ಖರೀದಿಸುವ ಯೋಚನೆ ಇದ್ರೆ, ಈ ಲೇಖನದಲ್ಲಿ ನೀಡಲಾಗಿರುವ ಕೆಲವು ವಿವೋ ಫೋನ್‌ಗಳ ಮಾಹಿತಿ ನಿಮಗೆ ಉಪಯುಕ್ತ ಆಗಲಿದೆ. ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿರಿ.
ವಿವೋ T1x ಮೊಬೈಲ್ ಫೀಚರ್ಸ್ ಮಾಹಿತಿ : ವಿವೋ T1x ಮೊಬೈಲ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇ 1,080 x 2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪವರ್ ಸಾಮರ್ಥ್ಯ ಪಡೆದುಕೊಂಡಿದೆ.
ಹಾಗೆಯೇ ಈ ಮೊಬೈಲ್ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಅನ್ನು ಪಡೆದಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇದರ ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ.
ವಿವೋ Y15C ಮೊಬೈಲ್ ಫೀಚರ್ಸ್ ಮಾಹಿತಿ ಇಲ್ಲಿದೆ : ವಿವೋ Y15C ಮೊಬೈಲ್ 6.51 ಇಂಚಿನ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ P35 ಆಕ್ಟಾ ಕೋರ್ ಪ್ರೊಸೆಸರ್ ಸಾಮರ್ಥ್ಯ ಅನ್ನು ಹೊಂದಿದೆ. ಅಲ್ಲದೇ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಇದರ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅನ್ನು ಪಡೆದಿದೆ.
ವಿವೋ Y21G ಮೊಬೈಲ್ ಫೀಚರ್ಸ್ ಮಾಹಿತಿ : ವಿವೋ Y21G ಮೊಬೈಲ್ 15,000ರೂ. ಒಳಗೆ ಲಭ್ಯವಾಗುವ ಕೆಲವು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದು ಒಂದಾಗಿದೆ. ಈ ಮೊಬೈಲ್ ಫೋನ್ 6.51 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, ಮೀಡಿಯಾಟೆಕ್ ಹಿಲಿಯೋ G70 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ.
ಹಾಗೆಯೇ ಈ ಫೋನ್ 4GB RAM ಮತ್ತು 64GB ಆಂತರೀಕ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನಿನ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ವಿವೋ U20 ಮೊಬೈಲ್ ಫೀಚರ್ಸ್ ಮಾಹಿತಿ : ವಿವೋ U20 ಮೊಬೈಲ್ ಫೋನ್ 6.53 ಇಂಚಿನ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 675 AIE ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದರ ಪ್ರಾಥಮಿಕ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಅಲ್ಲದೇ ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ.
ವಿವೋ Y21 ಮೊಬೈಲ್ ಫೀಚರ್ಸ್ ಮಾಹಿತಿ : ವಿವೋ Y21 ಮೊಬೈಲ್ 6.51 ಇಂಚಿನ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ P35 (MT 6765) ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇಲ್ಲದೇ ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, ವೇಗದ ಚಾರ್ಜಿಂಗ್ ಸಪೋರ್ಟ್ ಮಾಡಲಿದೆ.


Click it and Unblock the Notifications








