ಶಿಯೋಮಿ 11 ಲೈಟ್ 5G NE ಫಸ್ಟ್‌ ಲುಕ್‌: ವೇಗದ ಪ್ರೊಸೆಸರ್‌ ಜೊತೆಗೆ ಸ್ಟೈಲಿಶ್‌ ಫೋನ್‌!

|

ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ 'ಮಿ 11 ಲೈಟ್ 5G NE' ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಅಪ್ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಆಕರ್ಷಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಇದು ಒಳಗೊಂಡಿದೆ. ಇನ್ನು ಈ ಫೋನ್ ಡಿವೈಸ್, ಬಿಗ್ ಬ್ಯಾಟರಿ ಹಾಗೂ ವೇಗದ ಪ್ರೊಸೆಸರ್‌ನಿಂದಲೂ ಗಮನ ಸೆಳೆದಿದೆ.

ವೇರಿಯಂಟ್‌

ಶಿಯೋಮಿ 'ಮಿ 11 ಲೈಟ್ 5G NE' ಸ್ಮಾರ್ಟ್‌ಫೋನ್‌ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,250mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಸ್ನಾಪ್‌ಡ್ರಾಗನ್‌ 780G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ 'ಮಿ 11 ಲೈಟ್ 5G NE' ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು ಜೊತೆಗೆ 90Hz ರಿಫ್ರೆಶ್ ರೇಟ್‌ ಹೊಂದಿದೆ. ಡಿಸ್‌ಪ್ಲೇಯು HDR10+ ಸಪೋರ್ಟ್‌ ಸಹ ಒಳಗೊಂಡಿದೆ. ಇನ್ನು ಈ ಫೋನ್ 158ಗ್ರಾಂ ತೂಕವನ್ನು ಒಳಗೊಂಡಿದ್ದು, 6.81 mm ಥಿಕ್ನೆಸ್ ರಚನೆ ಪಡೆದಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಾಕಾಶ ನೀಡಿದೆ. ಈ ಫೋನಿನ ಪ್ರೊಸೆಸರ್ ವೇಗದ ಗೇಮಿಂಗ್‌ ಆಟಗಳಿಗೆ ಪೂರಕವಾಗಿದೆ.

ಟ್ರಿಪಲ್ ಕ್ಯಾಮೆರಾ ಸೆಟಅಪ್ ರಚನೆ

ಟ್ರಿಪಲ್ ಕ್ಯಾಮೆರಾ ಸೆಟಅಪ್ ರಚನೆ

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಇದು ಕ್ಯಾಮೆರಾ ಪ್ರಿಯರಿಗೆ ಇಷ್ಟವಾಗುವ ಅಂಶಗಳನ್ನು ಕಾಣಬಹುದಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ 2 ಯನ್ನು ಬೆಂಬಲಿಸುತ್ತದೆ. ಹಾಗೆಯೇ ಡಾಲ್ಬಿ ವಿಜನ್, ಸಪೋರ್ಟ್‌ ಒಳಗೊಂಡಿದೆ. ಈ ಫೋನ್ 160.53x75.73x6.81mm ಸುತ್ತಳತೆ ಪಡೆದಿದ್ದು, 158 ಗ್ರಾಂ ತೂಕವನ್ನು ಪಡೆದಿದೆ. ಇತ್ತೀಚಿಗಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳು ಹಾಗೂ ಸೆನ್ಸಾರ್ಗಳು ಈ ಫೋನಿನಲ್ಲಿ ಇವೆ.

ಬೆಲೆ ಮತ್ತು ಲಭ್ಯತೆ?

ಬೆಲೆ ಮತ್ತು ಲಭ್ಯತೆ?

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ವೇರಿಯಂಟ್ ಬೆಲೆಯು 26,999 ರೂ ಆಗಿದೆ. ಅದೇ ರೀತಿ 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್ ಬೆಲೆಯು 28,999ರೂ. ಆಗಿದೆ. ಇನ್ನು ಈ ಫೋನ್ ಡೈಮಂಡ್ ಡಾಜಲ್, ಕೋರಲ್, ಬ್ಲ್ಯಾಕ್ ಮತ್ತು ಜಾಜ್ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Best Mobiles in India

English summary
Xiaomi 11 Lite NE 5G First Look: Powerful Processor With Stylish Design.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X