ಶಿಯೋಮಿ 11T ಪ್ರೊ 5G ಫಸ್ಟ್‌ ಲುಕ್‌: ಹೈ ಎಂಡ್‌ ಕ್ಯಾಮೆರಾದ ಫ್ಲ್ಯಾಗ್‌ಶಿಪ್ ಫೋನ್‌!

|

ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ 'ಶಿಯೋಮಿ 11T ಪ್ರೊ 5G' ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಆಕರ್ಷಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಇದು ಒಳಗೊಂಡಿದೆ. ಇನ್ನು ಈ ಫೋನ್ ಡಿವೈಸ್, ಬಿಗ್ ಬ್ಯಾಟರಿ ಹಾಗೂ ವೇಗದ ಪ್ರೊಸೆಸರ್‌ನಿಂದಲೂ ಗಮನ ಸೆಳೆದಿದೆ.

ಸಾಮರ್ಥ್ಯ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 8GB + 128GB, 8GB + 256GB ಮತ್ತು 12GB + 256GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ ವೇಗದ ಚಾರ್ಜಿಂಗ್ ಆಯ್ಕೆಯಿಂದಲೂ ಹೆಚ್ಚಿನ ಗಮನ ಸೆಳೆದಿದೆ. ಇನ್ನುಳಿದಂತೆ 'ಶಿಯೋಮಿ 11T ಪ್ರೊ 5G' ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಹೊಂದಿದ್ದು, 10 ಬಿಟ್ ಟ್ರೂಲಿ ಕಲರ್‌ ಫ್ಲಾಟ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಡಾಲ್ಬಿ ವಿಷನ್ ಬೆಂಬಲಿಸಲಿದ್ದು, 480Hz ವರೆಗೆ ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ.

ಪ್ರೊಸೆಸರ್‌ ಕಾರ್ಯ ಹೇಗೆ

ಪ್ರೊಸೆಸರ್‌ ಕಾರ್ಯ ಹೇಗೆ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB + 128GB, 8GB + 256GB ಮತ್ತು 12GB + 256GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಜೊತೆಗೆ 3GB ವರ್ಚುವಲ್ RAM ವಿಸ್ತರಣೆಗೆ ಸಹ ಬೆಂಬಲಿಸಲಿದೆ. ಹೆಚ್ಚಿನ RAM ಬಯಸುವ ಗ್ರಾಹಕರಿಗೆ ಆಕರ್ಷಕ ಎನಿಸಲಿದೆ. ಇನ್ನು ಇದರ ವೇಗದ ಪ್ರೊಸೆಸರ್‌ ಫೋನಿನ ಕಾರ್ಯ ವೈಖರಿಗೆ ಪೂರಕ ಎನಿಸಲಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು

ಕ್ಯಾಮೆರಾ ಸೆನ್ಸಾರ್ ಎಷ್ಟು

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ HM2 ಸೆನ್ಸಾರ್‌ f/1.75 ವೈಡ್ ಆಂಗಲ್ ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್ ಎಫ್/2.2 ಲೆನ್ಸ್‌ 120 ಡಿಗ್ರಿಗಳ ಫೀಲ್ಡ್ ಆಫ್ ವ್ಯೂ (FoV) ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಟೆಲಿಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಟೈಮ್-ಲ್ಯಾಪ್ಸ್, ಸಿನಿಮಾಟಿಕ್ ಫಿಲ್ಟರ್‌ಗಳು ಮತ್ತು ಆಡಿಯೊ ಜೂಮ್‌ನಂತಹ 50 ಕ್ಕೂ ಹೆಚ್ಚು ಡೈರೆಕ್ಟರ್ ಮೋಡ್‌ಗಳೊಂದಿಗೆ ಪ್ರೀ ಲೋಡ್ ಆಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇದು ಕ್ಯಾಮೆರಾ ಪ್ರಿಯರಿಗೆ ಇಷ್ಟವಾಗುವ ಅಂಶಗಳನ್ನು ಕಾಣಬಹುದಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು ಏನಿವೆ

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು ಏನಿವೆ

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ಹೈಪರ್‌ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS/ NavIC, NFC, ಇನ್ಫ್ರಾರೆಡ್ (IR) ಬ್ಲಾಸ್ಟರ್, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬ್ಯಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟಿಕ್ ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಸೇರಿವೆ. ಈ ಫೋನ್ ವೇಗದ ಚಾರ್ಜಿಂಗ್ ಸೌಲಭ್ಯ ಬಯಸುವ ಗ್ರಾಹಕರ ಗಮನ ಸೆಳೆಯುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ 11T ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 39,999ರೂ.ಬೆಲೆ ಹೊಂದಿದೆ. ಇನ್ನು 8GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 41,999ರೂ. ಬೆಲೆ ಹೊಂದಿದ್ದು, 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 43,999ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸೆಲೆಸ್ಟಿಯಲ್ ಮ್ಯಾಜಿಕ್, ಮೆಟಿಯೊರೈಟ್ ಗ್ರೇ ಮತ್ತು ಮೂನ್‌ಲೈಟ್ ವೈಟ್ ಬಣ್ಣಗಳಲ್ಲಿ ಮಾರಾಟವಾಗಲಿದೆ.

Best Mobiles in India

English summary
Xiaomi 11T Pro 5G First Look: Flagship Features With High End Camera.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X