Home
ಮೊಬೈಲ್

Xiaomi 15 Ultra: 200MP ಕ್ಯಾಮೆರಾ.. 6000mAh ಬ್ಯಾಟರಿ.. ಆಪಲ್ ಮತ್ತು ಸ್ಯಾಮ್‌ಸಂಗ್‌ಗೆ ಪೈಪೋಟಿ ಖಚಿತ!

ಶಿಯೋಮಿ ಸಂಸ್ಥೆಯ ಶಕ್ತಿಶಾಲಿ ಸ್ಮಾರ್ಟ್‌ಫೋನ್ ಈ ತಿಂಗಳು ಬಿಡುಗಡೆಯಾಗಲು ಸಜ್ಜಾಗಿದೆ. ಇದು ಶಿಯೋಮಿ 15 ಅಲ್ಟ್ರಾ (Xiaomi 15 Ultra) ಎಂಬ ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಹೌದು, ಈಗಾಗಲೇ Xiaomi 15 ಮತ್ತು Xiaomi 15 Pro ಭಾರತೀಯ ಮಾರುಕಟ್ಟೆಗೆ ಬಂದಿವೆ. ಮತ್ತು ಇದೀಗ ಕಂಪನಿಯು ತನ್ನ ಶಿಯೋಮಿ 15 ಅಲ್ಟ್ರಾ ಫೋನನ್ನು ಶೀಘ್ರದಲ್ಲೇ ಪರಿಚಯಿಸಲಿದೆ. ಆದರೆ, ಭಾರತದ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ. ಕಂಪನಿಯ ಘೋಷಣೆಗೂ ಮೊದಲೇ, ಶಿಯೋಮಿ 15 ಅಲ್ಟ್ರಾ ವಿಶೇಷತೆಗಳು ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿವೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಶಿಯೋಮಿ 15 ಅಲ್ಟ್ರಾ ಸ್ಮಾರ್ಟ್‌ಫೋನ್‌ 200MP + 50MP + 50MP + 50MP ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ 32MP ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.8 ಇಂಚಿನ ಅಮೋಲೆಡ್ ಡಿಸ್ಪ್ಲೇ ಇದೆ. ಜೊತೆಗೆ 512GB ಸ್ಟೋರೇಜ್, 6000mAh ಬ್ಯಾಟರಿ, 90W ವೈರ್ಡ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

Xiaomi 15 Ultra: 200MP ಕ್ಯಾಮೆರಾ.. 6000mAh ಬ್ಯಾಟರಿ.. ಆಪಲ್‌ಗೆ ಪೈಪೋಟಿ

ಶಿಯೋಮಿ 15 ಅಲ್ಟ್ರಾ ಬೆಲೆ (ನಿರೀಕ್ಷಿತ)

ಶಿಯೋಮಿ 15 ಅಲ್ಟ್ರಾ ಬಿಡುಗಡೆ ದಿನಾಂಕದ ಬಗ್ಗೆ ಕಂಪನಿ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಹೀಗಾಗಿ ಬೆಲೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಆದಾಗ್ಯೂ, Xiaomi 14 Ultra ಫೋನಿನ 16GB RAM + 512GB ಸ್ಟೋರೇಜ್ ರೂಪಾಂತರವು ಭಾರತದಲ್ಲಿ 99,999 ರೂ.ಗೆ ಬಿಡುಗಡೆಯಾಗಿದೆ. ಇದನ್ನು ನೋಡಿದರೆ ಶಿಯೋಮಿ 15 ಅಲ್ಟ್ರಾ ಸ್ಮಾರ್ಟ್‌ಫೋನ್ ಬೆಲೆಯ ಬಗ್ಗೆ ಸುಳಿವು ಸಿಗುತ್ತದೆ. ಇದು ಸ್ಟೋರೇಜ್, ಡಿಸ್ಪ್ಲೇ ಮತ್ತು ಕ್ಯಾಮೆರಾದ ವಿಷಯದಲ್ಲಿ ಸುಧಾರಣೆ ಹೊಂದಿರುತ್ತದೆ. ಹೀಗಾಗಿ, ಇದರ ಬೆಲೆ ಸ್ವಲ್ಪ ಹೆಚ್ಚಿರುವ ಸಾಧ್ಯತೆಯಿದೆ.

ಶಿಯೋಮಿ 15 ಅಲ್ಟ್ರಾ ವೈಶಿಷ್ಟ್ಯಗಳು (ಸೋರಿಕೆ)

ಡಿಸ್ಪ್ಲೇ ವಿವರ

ಶಿಯೋಮಿ 15 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿರುತ್ತದೆ. ಇದು 2K ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲ ಹೊಂದಿರಲಿದೆ. ಈ ಫೋನ್‌ನಲ್ಲಿ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ ಸಹ ಒಳಗೊಂಡಿದೆ.

ಪ್ರೊಸೆಸರ್ ಸಾಮರ್ಥ್ಯ

ಶಿಯೋಮಿ 15 ಅಲ್ಟ್ರಾ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್‌ನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದು ಇತ್ತೀಚಿನ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಅಡ್ರಿನೊ 830 ಜಿಪಿಯು ಸಹ ಹೊಂದಿದೆ.

Xiaomi 15 Ultra: 200MP ಕ್ಯಾಮೆರಾ.. 6000mAh ಬ್ಯಾಟರಿ.. ಆಪಲ್‌ಗೆ ಪೈಪೋಟಿ

200 ಮೆಗಾಪಿಕ್ಸೆಲ್ ಕ್ಯಾಮೆರಾ

ಶಿಯೋಮಿ 15 ಅಲ್ಟ್ರಾ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಮೊಬೈಲ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 200 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್, 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಒಳಗೊಂಡಿದೆ. ಇದು 4.3x ಆಪ್ಟಿಕಲ್ ಜೂಮ್ ಸಾಮರ್ಥ್ಯವನ್ನು ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಶಿಯೋಮಿ 15 ಅಲ್ಟ್ರಾ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಈ ಫೋನ್ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಜೊತೆಗೆ 50W ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು.

ಇತರೆ ವೈಶಿಷ್ಟ್ಯಗಳು

ಶಿಯೋಮಿ 15 ಅಲ್ಟ್ರಾ ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗೆ IP68 + IP69 ರೇಟಿಂಗ್‌ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ವೈ-ಫೈ 7, ಬ್ಲೂಟೂತ್ 5.4, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್ ಸಿ 3.2 ಪೋರ್ಟ್, ಡ್ಯುಯಲ್ ಸ್ಟೀರಿಯೊ ಸ್ಪೀಕರ್‌ ಸೇರಿದಂಗೆ ಹಲವು ಸೌಲಭ್ಯಗಳನ್ನು ಒಳಗೊಂಡಿರುತ್ತದೆ.

Best Mobiles in India

English summary
Xiaomi 15 Ultra launch date in india and specifications leaked: know details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+