ಭಾರತದಲ್ಲಿ Xiaomi 15 ಲಾಂಚ್; 50MP + 50MP + 32MP ಟ್ರಿಪಲ್ ಕ್ಯಾಮೆರಾ.. ಅಬ್ಬಾ.. ಬೆಲೆ ಇಷ್ಟೊಂದಾ?
ಶಿಯೋಮಿ ತನ್ನ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಎರಡು ಸೊಗಸಾದ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಹೌದು, ಶಿಯೋಮಿ 15 (Xiaomi 15) ಸರಣಿಯು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಇವು ಶಿಯೋಮಿ 15 (Xiaomi 15), ಶಿಯೋಮಿ 15 ಅಲ್ಟ್ರಾ (Xiaomi 15 Ultra) ಹೆಸರಿನೊಂದಿಗೆ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿವೆ. ಈ ಪೈಕಿ ಶಿಯೋಮಿ 15 ಮೊಬೈಲ್ ಗ್ರಾಹಕರ ಮನಸ್ಸು ಗೆದ್ದಿದೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.
Xiaomi 15 Ultra ಜೊತೆಗೆ ಇದೇ ಸರಣಿಯಲ್ಲಿ ಶಿಯೋಮಿ 15 ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50MP + 50MP + 32MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಈ ಮೊಬೈಲ್ 6.36 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 5240mAh ಬ್ಯಾಟರಿ, 90W ವೈರ್ಡ್ ಹೈಪರ್‌ಚಾರ್ಜ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಶಿಯೋಮಿ 15 ಬೆಲೆ ಮತ್ತು ಲಭ್ಯತೆ
ಶಿಯೋಮಿ 15 ಫೋನ್ ಒಂದೇ ಸ್ಟೊರೇಜ್ ಆಯ್ಕೆಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 12GB RAM + 512GB ಸ್ಟೊರೇಜ್ ರೂಪಾಂತರದ ಬೆಲೆ 64,999 ರೂ. ಆಗಿದೆ. ಇದು ಕಪ್ಪು, ಬಿಳಿ ಮತ್ತು ಹಸಿರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಇದೇ ಮಾರ್ಚ್ 19 ರಂದು ಸಂಜೆ 5 ಗಂಟೆಯಿಂದ ಏಪ್ರಿಲ್ 2 ರವರೆಗೆ Mi.com, ಅಮೇಜಾನ್ ಮತ್ತು ಶಿಯೋಮಿ ಚಿಲ್ಲರೆ ಅಂಗಡಿಗಳಲ್ಲಿ ಮುಂಗಡ ಬುಕಿಂಗ್‌ಗೆ ಲಭ್ಯವಿರುತ್ತದೆ. ಕಂಪನಿಯು ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳ ಪಾವತಿ ಮೇಲೆ 5000 ರೂ.ಗಳ ತ್ವರಿತ ರಿಯಾಯಿತಿ ನೀಡಲಿದೆ. ಹಾಗೆಯೇ 5,999 ರೂ. ಮೌಲ್ಯದ ಶಿಯೋಮಿ ಕೇರ್ ಪ್ಲಾನ್ ಪಡೆಯಬಹುದು.
ಶಿಯೋಮಿ 15 ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಶಿಯೋಮಿ 15 ಮೊಬೈಲ್ 6.36 ಇಂಚಿನ OLED ಡಿಸ್ಪ್ಲೇ ಹೊಂದಿದೆ. ಇದು 2,670 × 1,200 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 3,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಶಿಯೋಮಿ ಶೀಲ್ಡ್ ಗ್ಲಾಸ್ ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಹೊಸ ಶಿಯೋಮಿ 15 ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಶಿಯೋಮಿ ಹೈಪರ್‌ಓಎಸ್ 2 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 830 ಜಿಪಿಯು ಹೊಂದಿದೆ. ಈ ಫೋನ್ 12GB RAM + 512GB ಸ್ಟೊರೇಜ್ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್
ಶಿಯೋಮಿ 15 ಸ್ಮಾರ್ಟ್‌ಫೋನ್ ಅದ್ಭುತ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಹೈಪರ್ OIS, LED ಫ್ಲ್ಯಾಶ್, ಲೈಕಾ ಸಮ್ಮಿಲಕ್ಸ್ ಲೆನ್ಸ್‌ನೊಂದಿಗೆ ಬರುತ್ತದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 50 ಮೆಗಾಪಿಕ್ಸೆಲ್ ಇನ್ಫಿನಿಟಿ ಲೈಕಾ ಟೆಲಿಫೋಟೋ ಸೆನ್ಸರ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ನೂತನ ಶಿಯೋಮಿ 15 ಮೊಬೈಲ್ 5,240mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ವೈರ್ಡ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ 50W ವೈರ್‌ಲೆಸ್ ಚಾರ್ಜಿಂಗ್, ಮ್ಯಾಗ್ನೆಟಿಕ್ ಚಾರ್ಜಿಂಗ್ ಮತ್ತು 10W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನ ಒಳಗೊಂಡಿದೆ.
ಇತರೆ ವೈಶಿಷ್ಟ್ಯಗಳು
ಶಿಯೋಮಿ 15 ಫೋನ್ ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್ಫ್ರಾರೆಡ್ ಸೆನ್ಸರ್ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 ರೇಟಿಂಗ್ ಪಡೆದಿದೆ. ಇದರೊಂದಿಗೆ ಯುಎಸ್‌ಬಿ ಟೈಪ್ ಸಿ ಆಡಿಯೋ, ಹೈ ರೆಸ್ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G SA/NSA, ಡ್ಯುಯಲ್ 4G VoLTE, ವೈ-ಫೈ 7, ಬ್ಲೂಟೂತ್ 5.4, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








