'ರೆಡ್‌ಮಿ ನೋಟ್ 7 ಪ್ರೊ' ಖರೀದಿಗೆ ಶಿಯೋಮಿಯಿಂದ ‘ವಿಶೇಷ ಕೊಡುಗೆ’!

|

ಭಾರತದಲ್ಲಿ ಇತ್ತೀಚಿಗೆ ಬಿಡುಗಡೆಯಾಗಿದ್ದ ಶಿಯೋಮಿ ರೆಡ್ಮಿ ನೋಟ್ ಸರಣಿಯಲ್ಲಿ ರೆಡ್‌ಮಿ ನೋಟ್ 7, ನೋಟ್ 7 ಪ್ರೊ ಹಾಗೂ ನೋಟ್ 7ಎಸ್ ಸ್ಮಾರ್ಟ್‌ಫೋನ್‌ಗಳಲ್ಲಿ 48ಎಂಪಿ ಕ್ಯಾಮೆರಾ ಸಾಮರ್ಥ್ಯದ ರೆಡ್‌ಮಿ ನೋಟ್ 7 ಪ್ರೊ ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿದೆ. ಹಾಗಾಗಿ, ಬಿಡುಗಡೆಯಾಗಿ ಮೂರು ತಿಂಗಳುಗಳೇ ಕಳೆದರೂ ಈಗಲೂ ರೆಡ್‌ಮಿ ನೋಟ್ 7 ಪ್ರೊ ಸ್ಮಾರ್ಟ್‌ಫೋನ್ ಖರೀದಿಗಾಗಿ ಫ್ಲಾಶ್‌ಸೇಲ್ ಮಾರಾಟವನ್ನು ಕಾಯಬೇಕಿತ್ತು.!

'ರೆಡ್‌ಮಿ ನೋಟ್ 7 ಪ್ರೊ' ಖರೀದಿಗೆ ಶಿಯೋಮಿಯಿಂದ ‘ವಿಶೇಷ ಕೊಡುಗೆ’!

ಆದರೆ, ಗ್ರಾಹಕರಿಗೆ ಇದೀಗ ಅಂತಹ ಸಮಸ್ಯೆ ಇಲ್ಲ. ಏಕೆಂದರೆ, ದೇಶದಲ್ಲಿ ಭರ್ಜರಿ ಮಾರಾಟ ಕಾಣುತ್ತಿರುವ ರೆಡ್‌ಮಿ ನೋಟ್ 7 ಪ್ರೊ ಸ್ಮಾರ್ಟ್‌ಫೋನನ್ನು ಶಿಯೋಮಿ ಸೀಮಿತ ಅವಧಿಗೆ ಓಪನ್‌ ಸೇಲ್‌ನಲ್ಲಿ ಮಾರಾಟಕ್ಕೆ ಇಟ್ಟಿದೆ. 6 GB RAM ಮತ್ತು 128 GB ಮಾದರಿಯ ರೆಡ್‌ಮಿ ನೋಟ್ 7 ಸ್ಮಾರ್ಟ್‌ಫೋನ್ ಇದೇ ಜೂನ್ 30ರವರೆಗೆ ಓಪನ್ ಸೇಲ್‌ನಲ್ಲಿ ಖರೀದಿಗೆ ಲಭ್ಯವಿದೆ ಎಂದು ಶಿಯೋಮಿ ಕಂಪೆನಿ ತನ್ನ ಅಭಿಮಾನಿಗಳಿಗೆ ತಿಳಿಸಿದೆ.

ಶಿಯೋಮಿಯ ಅಫಿಷಿಯಲ್ ವೆಬ್‌ಸೈಟ್ ಎಂಐ ಡಾಟ್ ಕಾಮ್ ಹಾಗೂ ಫ್ಲಿಪ್‌ಕಾರ್ಟ್ ಮೂಲಕ ಈ ಓಪಲ್ ಸೇಲ್ ಆಫರ್ ಲಭ್ಯವಿದ್ದು, 16,999 ರೂ.ಬೆಲೆಯ 6 GB RAM ಹಾಗೂ 128 GB ಮಾದರಿ ಸ್ಮಾರ್ಟ್‌ಫೋನನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಾದರೆ, ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಶಿಯೋಮಿಯ ರೆಡ್ಮಿ ನೋಟ್ 7 ಸ್ಮಾರ್ಟ್‌ಫೋನ್ ಹೇಗಿದೆ?, ಏನೆಲ್ಲಾ ಫೀಚರ್ಸ್ ಹೊಂದಿದೆ ಎಂಬುದನ್ನು ಮುಂದೆ ಓದಿ ತಿಳಿಯಿರಿ.

'ರೆಡ್‌ಮಿ ನೋಟ್ 7 ಪ್ರೊ' ಡಿಸ್‌ಪ್ಲೇ.

'ರೆಡ್‌ಮಿ ನೋಟ್ 7 ಪ್ರೊ' ಡಿಸ್‌ಪ್ಲೇ.

'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ FHD + ರೆಸಲ್ಯೂಶನ್ ಮತ್ತು 19.5:9ರ ಆಕಾರ ಅನುಪಾತದೊಂದಿಗೆ 6.3-ಇಂಚಿನ LTPS ಎಲ್‌ಸಿಡಿ ಪ್ರದರ್ಶನದೊಂದಿಗೆ ಬಿಡುಗಡೆಯಾಗಿದೆ. ಕಣ್ಣಿನ ಒತ್ತಡವನ್ನು ತಪ್ಪಿಸಲು ಸನ್‌ಲೈಟ್ ಡಿಸ್‌ಪ್ಲೇ ಮತ್ತು ಓದುವಿಕೆ ವಿಶೇಷ ಮೋಡ್ ಅನ್ನು ಹೊಂದಿರುವ ಫೋನ್ ಭಾಗಶಃ ಪೂರ್ಣ ಪ್ರಮಾಣದ ಸ್ಕ್ರೀನ್ ಡಿಸ್‌ಪ್ಲೇಯಂತೆ ಹೊಂದಿದೆ.

'ರೆಡ್‌ಮಿ ನೋಟ್ 7 ಪ್ರೊ' ಪ್ರೊಸೆಸರ್

'ರೆಡ್‌ಮಿ ನೋಟ್ 7 ಪ್ರೊ' ಪ್ರೊಸೆಸರ್

ಆಕ್ಟಕೋರ್ ಸ್ನಾಪ್‌ಡ್ರಾಗನ್ 675 SoC ಪ್ರೊಸೆಸರ್ ಜೊತೆಗೆ 6GB LPDDR4X RAM ಮತ್ತು 128GB ಆಂತರಿಕ ಮೆಮೊರಿಯನ್ನು 'ರೆಡ್‌ಮಿ ನೋಟ್ 7 ಪ್ರೊ'ನಲ್ಲಿ ನೋಡಬಹುದು. ರೆಡ್‌ಮಿ ಫೋನಿನಲ್ಲಿ ಇದೇ ಮೊದಲ ಬಾರಿಗೆ 128GB ಮೆಮೊರಿಯನ್ನು ತರಲಾಗಿದ್ದು, ಅಡ್ರಿನೋ 612 ಜಿಪಿಯು ಜೊತೆಗೆ MIUI 10 ಟಾಪ್ ಆಂಡ್ರಾಯ್ಡ್ ಪೈನಲ್ಲಿ ಸ್ಮಾರ್ಟ್‌ ಕಾರ್ಯನಿರ್ವಹಣೆ ನೀಡಲಿದೆ.

'ರೆಡ್‌ಮಿ ನೋಟ್ 7 ಪ್ರೊ' ರಿಯರ್ ಕ್ಯಾಮೆರಾ

'ರೆಡ್‌ಮಿ ನೋಟ್ 7 ಪ್ರೊ' ರಿಯರ್ ಕ್ಯಾಮೆರಾ

ರೆಡ್‌ಮಿ ನೋಟ್ 7 ಪ್ರೊನಲ್ಲಿ 48MP ಪ್ರಾಥಮಿಕ ಸಂವೇದಕ ಮತ್ತು 5 MP ಸೆಕೆಂಡರಿ ಸಂವೇದಕಗಳನ್ನು ನೀಡಲಾಗಿದೆ. 48MP ಕ್ಯಾಮರಾವು ಸೋನಿ IMX586 ಸಂವೇದಕವನ್ನು ಬಳಸುತ್ತಿದ್ದು, ಇದು ಸ್ಮಾರ್ಟ್ಫೋನ್ಗಳಿಗಾಗಿ ಅತ್ಯುನ್ನತ ರೆಸಲ್ಯೂಶನ್ ಸಂವೇದಕವಾಗಿದ್ದು ಉತ್ತಮ ಫೋಟೋಗಳಿಗಾಗಿ 4x ಡೈನಾಮಿಕ್ ಶ್ರೇಣಿಯನ್ನು ಬೆಂಬಲಿಸಲಿದೆ.

'ರೆಡ್‌ಮಿ ನೋಟ್ 7 ಪ್ರೊ' ಕ್ಯಾಮೆರಾ ತಂತ್ರಜ್ಞಾನ!

'ರೆಡ್‌ಮಿ ನೋಟ್ 7 ಪ್ರೊ' ಕ್ಯಾಮೆರಾ ತಂತ್ರಜ್ಞಾನ!

ರೆಡ್‌ಮಿ ನೋಟ್ 7 ಪ್ರೊ ಸಂವೇದಕವು 4 ಪಿಕ್ಸೆಲ್‌ಗಳನ್ನು 1 ಸೂಪರ್ ಪಿಕ್ಸೆಲ್‌ಗೆ ವಿಲೀನಗೊಳಿಸುವ ಮೂಲ ಕಡಿಮೆ ಬೆಳಕಿನಲ್ಲೂ ಅತ್ಯುತ್ತಮ ಚಿತ್ರಗಳನ್ನು ಚಿತ್ರಿಸಲಿದೆ. ಕೃತಕ ಬುದ್ದಿಮತ್ತೆ ಸಹಾಯದಿಂದ ರಾತ್ರಿ ಸಮಯದಲ್ಲೂ ಛಾಯಾಗ್ರಹಣಕ್ಕೆ ಶಕ್ತವಾಗಿದೆ. AI ಪೋರ್ಟ್ರೇಟ್ 2.0 ಹೊಂದಿರುವ ಕ್ಯಾಮೆರಾ ಬೊಕೆ ಚಿತ್ರಗಳು, 4K ವೀಡಿಯೋ ರೆಕಾರ್ಡಿಂಗ್ ಫೀಚರ್ಸ್ ಹೊಂದಿದೆ

'ರೆಡ್‌ಮಿ ನೋಟ್ 7 ಪ್ರೊ' ಸೆಲ್ಫೀ ಕ್ಯಾಮೆರಾ!

'ರೆಡ್‌ಮಿ ನೋಟ್ 7 ಪ್ರೊ' ಸೆಲ್ಫೀ ಕ್ಯಾಮೆರಾ!

'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನಿನಲ್ಲಿ 13 ಎಂಪಿ ಎಐ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ. ಎಐ ಭಾವಚಿತ್ರ ಸೆಲ್ಫಿ, ಸ್ಟುಡಿಯೋ ಲೈಟಿಂಗ್ ಸೆಲ್ಫಿ, ಎಐ ಫೇಸ್ ಅನ್ಲಾಕ್, ಎಐ ಬ್ಯೂಟಿಗಳೊಂದಿಗೆ 13 ಎಂಪಿ ಎಐ ಸೆಲ್ಫ್ ಕ್ಯಾಮರಾ ಅದ್ಬುತವಾಗಿದೆ. ನಿರ್ದಿಷ್ಟ ಆಪ್ಟಿಮೈಸೇಶನ್ಗಳೊಂದಿಗೆ AI ದೃಶ್ಯ ಪತ್ತೆಹಚ್ಚುವಿಕೆ ತಂತ್ರಜ್ಞಾನ ಹೊಂದಿರುವುದು ಇದರ ವಿಶೇಷತೆ.

'ರೆಡ್‌ಮಿ ನೋಟ್ 7 ಪ್ರೊ' ಬ್ಯಾಟರಿ

'ರೆಡ್‌ಮಿ ನೋಟ್ 7 ಪ್ರೊ' ಬ್ಯಾಟರಿ

'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಪೋನಿನಲ್ಲಿ ಎರಡು ದಿನಗಳ ಬ್ಯಾಟರಿ ಬಾಳಿಕೆ ಬರುವಂತಹ 4000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ನೀಡಲಾಗಿದೆ. ಇದು ವೇಗವಾಗಿ ಚಾರ್ಜಿಂಗ್ ಆಗಲು ಕ್ವಾಲ್ಕಾಮ್ ಕ್ವಿಕ್ ಚಾರ್ಜ್ 4.0 ಅನ್ನು ಬೆಂಬಲಿಸುತ್ತದೆ ಎಂದು ಶಿಯೋಮಿ ತಿಳಿಸಿದೆ. ಶಿಯೋಮಿ ರೆಡ್‌ಮಿ ನೋಟ್ 6 ನಲ್ಲಿ ಕ್ವಿಕ್ ಚಾರ್ಜ್ 3.0 ತಂದಿದನ್ನು ನಾವಿಲ್ಲಿ ನೋಡಬಹುದು.

'ರೆಡ್‌ಮಿ ನೋಟ್ 7 ಪ್ರೊ' ಬೆಲೆಗಳು

'ರೆಡ್‌ಮಿ ನೋಟ್ 7 ಪ್ರೊ' ಬೆಲೆಗಳು

'ರೆಡ್‌ಮಿ ನೋಟ್ 7 ಪ್ರೊ' ಸ್ಮಾರ್ಟ್‌ಫೋನ್ ಎರಡು ವೆರಿಯಂಟ್‌ಗಳಲ್ಲಿ ಮೊಬೈಲ್ ಮಾರುಕಟ್ಟೆಗೆ ಲಾಂಚ್ ಆಗಿದ್ದು, 4GB RAM ಮತ್ತು 64GB ಆಂತರಿಕ ಮೆಮೊರಿಯನ್ನು ಹೊಂದಿರುವ 'ರೆಡ್‌ಮಿ ನೋಟ್ 7 ಪ್ರೊ' ಫೋನಿನ ಬೆಲೆ 13,999 ರೂ.ಗಳಾಗಿವೆ. ಹಾಗೆಯೇ, 6GB RAM ಮತ್ತು 128GB ಆಂತರಿಕ ಮೆಮೊರಿಯ ನೋಟ್ 7 ಪ್ರೊ ಫೋನ್ ಬೆಲೆ 16,999 ರೂ.ಗಳಾಗಿವೆ.

Best Mobiles in India

English summary
6GB RAM + 128GB variant of the Redmi Note 7 Pro will be available ‘anytime’ till June 30. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X