ಶಿಯೋಮಿ ಮಿ 10i ಫಸ್ಟ್‌ ಲುಕ್: ಬಜೆಟ್‌ ಬೆಲೆಯಲ್ಲಿ ಆಕರ್ಷಕ ಕ್ಯಾಮೆರಾ ಫೋನ್!

|

ಶಿಯೋಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ಮಿ 10i ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌ ಸಾಮರ್ಥ್ಯದ ಪಡೆದಿದೆ. ಹಾಗೆಯೇ ಮೂರು ಆಕರ್ಷಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಇದು ಒಳಗೊಂಡಿದೆ. ಇನ್ನು ಬ್ಯಾಟರಿ ಹಾಗೂ ಪ್ರೊಸೆಸರ್‌ನಿಂದಲೂ ಗಮನ ಸೆಳೆದಿದೆ.

ಸ್ಮಾರ್ಟ್‌ಫೋನ್‌

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಆಂತರಿಕ ಸ್ಟೋರೇಜ್‌ಗೂ ಪ್ರಾಮುಖ್ಯತೆ ನೀಡಿದ್ದು, 4GB + 64GB, 4GB RAM + 128GB ಮತ್ತು 8GB RAM+128GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,820mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿಯ ಬಗ್ಗೆ ಹಾಗೂ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದಿನ ಸ್ಲೈಡರ್‌ಗಳನ್ನು ಓದಿರಿ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ

ಡಿಸ್‌ಪ್ಲೇ ವಿನ್ಯಾಸ ಹೇಗಿದೆ

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇ ಹೊಂದಿದೆ. ಫೋನಿನ ಡಿಸ್‌ಪ್ಲೇ 125Hz ರಿಫ್ರೆಶ್‌ ರೇಟ್‌ ಜೊತೆಗೆ 450 ನಿಟ್ಸ್‌ ಬ್ರೈಟ್‌ನೆಶ್‌ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 84.6% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಪಡೆದಿದೆ. ಇ-ಪೇಪರ್ ಓದುವುದಕ್ಕೆ ಪೂರಕವಾಗಿದೆ. ಹೈ ಎಂಡ್‌ ಗೇಮ್‌ಗಳು ಅತ್ಯುತ್ತಮವಾಗಿ ಮೂಡಿಬರುತ್ತವೆ.

ಯಾವ ಪ್ರೊಸೆಸರ್‌

ಯಾವ ಪ್ರೊಸೆಸರ್‌

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ ಹೊಂದಿದೆ.ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ ಈ ಫೋನ್ ಮೂರು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 6GB RAM+64GB, 6GB RAM+128GB ಮತ್ತು 8GB RAM+128GB ಆಗಿವೆ. ಇನ್ನು ಈ ಫೋನಿನ ಪ್ರೊಸೆಸರ್ ವೇಗದ ಗೇಮಿಂಗ್‌ ಆಟಗಳಿಗೆ ಪೂರಕವಾಗಿದೆ.

108MP ಸೆನ್ಸಾರ್‌ ಕ್ಯಾಮೆರಾ ರಚನೆ

108MP ಸೆನ್ಸಾರ್‌ ಕ್ಯಾಮೆರಾ ರಚನೆ

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿರುವುದು ಪ್ರಮುಖ ಹೈಲೈಟ್‌ ಆಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಕ್ಯಾಮೆರಾ ಪ್ರಿಯರಿಗೆ ಇಷ್ಟವಾಗುವ ಅಂಶಗಳನ್ನು ಕಾಣಬಹುದಾಗಿದೆ.

ಬ್ಯಾಟರಿ ಮತ್ತು ಸೌಂಡ್‌ ಫೀಚರ್ಸ್‌

ಬ್ಯಾಟರಿ ಮತ್ತು ಸೌಂಡ್‌ ಫೀಚರ್ಸ್‌

ಶಿಯೋಮಿ ಮಿ10i ಸ್ಮಾರ್ಟ್‌ಫೋನ್‌ 5,820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಜಸ್ಟ್‌ 58 ನಿಮಿಷದಲ್ಲಿ 100% ವರೆಗೂ ಬ್ಯಾಟರಿ ಚಾರ್ಜ್‌ ಆಗುವ ಸಾಮರ್ಥ್ಯ ಪಡೆದಿದೆ ಎಂದು ಕಂಪನಿ ಹೇಳಿಕೊಂಡಿದೆ. ಡ್ಯುಯಲ್‌ ಸ್ಪೀಕರ್ಸ್‌ ಸೌಲಭ್ಯದ ಜೊತೆಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, GPS, USB ಟೈಪ್‌ ಸಿ2 ಅನ್ನು ಬೆಂಬಲಿಸಲಿದೆ. ಇತ್ತೀಚಿಗಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳು ಹಾಗೂ ಸೆನ್ಸಾರ್ಗಳು ಈ ಫೋನಿನಲ್ಲಿ ಇವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಶಿಯೋಮಿ ಮಿ10i ಸ್ಮಾರ್ಟ್‌ಫೋನ್‌ 6GB RAM+64GB ವೇರಿಯಂಟ್‌ ದರವು 20,999ರೂ.ಗಳು ಆಗಿದೆ. 6GB RAM+128GB ವೇರಿಯಂಟ್‌ ಬೆಲೆಯು 21,999ರೂ. ಆಗಿದ್ದು, ಇನ್ನು 8GB RAM+128GB ವೇರಿಯಂಟ್‌ ದರವು 23,999ರೂ.ಗಳು ಆಗಿದೆ. ಈ ಫೋನ್ ಅಮೆಜಾನ್ ಇ-ಕಾಮರ್ಸ್ ಹಾಗೂ ಅಧಿಕೃತ ಕಂಪನಿಯ ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
The new Mi 10i is a 5G-enabled camera-centric smartphone with a big battery, 108MP primary sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X