ಶಿಯೋಮಿ ಮಿ 11X ವಿಮರ್ಶೆ: ಕ್ಲಾಸಿಕ್ ಫೀಚರ್ಸ್ ಜೊತೆ ಪವರ್‌ಫುಲ್ ಪ್ರೊಸೆಸರ್!
ಶಿಯೋಮಿ ಸಂಸ್ಥೆಯು ತನ್ನ ಜನಪ್ರಿಯ ಮಿ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಇತ್ತೀಚಿಗೆ ಹೊಸದಾಗಿ ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಬಜೆಟ್ ಪ್ರೈಸ್ ಮತ್ತು ಆಕರ್ಷಕ ಫೀಚರ್ಸ್‌ಗಳಿಂದ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. 5,000mAh ಸಾಮರ್ಥ್ಯದ ಬ್ಯಾಟರಿ, ಹೈ ಎಂಡ್ ಕ್ಯಾಮೆರಾ ಸೆನ್ಸಾರ್ ಸೇರಿದಂತೆ ಫುಲ್ ಹೆಚ್ ಪ್ಲಸ್‌ನ 120Hz ರಿಫ್ರೆಶ್ ರೇಟ್ ಡಿಸ್‌ಪ್ಲೇಯನ್ನು ಪಡೆದಿರುವುದು ಪ್ರಮುಖ ಹೈಲೈಟ್ ಆಗಿ ಕಾಣಿಸುತ್ತದೆ.

ಶಿಯೋಮಿಯ ಕಂಪನಿಯು ನೂತನವಾಗಿ ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ವೇಗದ ಕಾರ್ಯವೈಖರಿಯನ್ನು ಒಳಗೊಂಡಿದೆ. ಹಾಗಾದರೇ ಹೊಸ ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಫಸ್ಟ್ ಲುಕ್ ಹೇಗಿದೆ? ಈ ಪೋನಿನ ಇತರೆ ಫೀಚರ್ಸ್‌ಗಳ ಕಾರ್ಯವೈಖರಿ ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಮತ್ತು ರಚನೆ
ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED 120Hz ರಿಫ್ರೆಶ್ ರೇಟ್, 360Hz ಟಚ್ ಸ್ಯಾಂಪ್ಲಿಂಗ್ ರೇಟ್, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ-ಪಿ3 ಯನ್ನು ಹೊಂದಿದೆ. ಸಿನಿಮಾ, ಯೂಟ್ಯೂಬ್ ವೀಡಿಯೊಗಳು ವೀಕ್ಷಣೆ ಮಾಡಲು ಪೂರಕವೆನಿಸಿದೆ. ಬ್ರೈಟ್ನೆಸ್ ಸಹ ಅತ್ಯುತ್ತಮವಾಗಿದ್ದು, ಹೆಚ್ಚು ಪ್ರಕಾಶಮಾನವಾಗಿ ಕಾಣುತ್ತದೆ.

ಪ್ರೊಸೆಸರ್ ಕಾರ್ಯವೈಖರಿ
ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಮಲ್ಟಿಟಾಸ್ಕ್ ಕೆಲಸಗಳಿಗೆ ಈ ಪ್ರೊಸೆಸರ್ ಪೂರಕವಾಗಿದೆ. ಕರೆ ಮಾಡುವುದು, ಮೆಸೆಜ್ ಕಳುಹಿಸುವುದು, ಫೋಟೋಗಳನ್ನು ಕ್ಲಿಕ್ ಮಾಡುವುದು, ವೀಡಿಯೊಗಳನ್ನು ವೀಕ್ಷಿಸುವುದು ಬೆಂಬಲಿತವಾಗಿದೆ. ಅಧಿಕ ಗ್ರಾಫಿಕ್ ಗೇಮ್‌ಗಳನ್ನು ಪ್ಲೇ ಮಾಡಲು ಇದು ಪೂರಕವಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್
ಶಿಯೋಮಿ ಮಿ 11X ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಪೋರ್ಟ್ರೇಟ್ ಮೋಡ್, ನೈಟ್ ಮೋಡ್, 30 ಎಫ್‌ಪಿಎಸ್‌ನಲ್ಲಿ 4 ಕೆ ವೀಡಿಯೊಗಳು, ಬ್ಯೂಟಿ ಮೋಡ್, ವ್ಲಾಗ್ ಮೋಡ್ ಆಯ್ಕೆಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಮಿ 11X ಸ್ಮಾರ್ಟ್‌ಫೋನ್ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ ಡಾಲ್ಬಿ ಅಟ್ಮೋಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್‌ಗಳನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ ವೈ-ಫೈ, ವೈ-ಫೈ 6, ಜಿಪಿಎಸ್, ಎಜಿಪಿಎಸ್, ನ್ಯಾವಿಕ್ ಬೆಂಬಲ, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಹೈ-ರೆಸ್ ಆಡಿಯೋ ಮತ್ತು ಡಾಲ್ಬಿ ಅಟ್ಮೋಸ್ ಜೋರಾಗಿ ಮತ್ತು ಸಮತೋಲಿತ ಆಡಿಯೊ ವ್ಯವಸ್ಥೆ ನೀಡುತ್ತವೆ.

ಬೆಲೆ ಮತ್ತು ಲಭ್ಯತೆ
ಮಿ 11X ಸ್ಮಾರ್ಟ್‌ಫೋನ್ 6GB RAM + 128GB ಮಾದರಿಗೆ 29,999ರೂ. ಹಾಗೂ 8GB RAM + 128GB RAM ಆಯ್ಕೆಗೆ 31,999 ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಸೆಲೆಸ್ಟಿಯಲ್ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟಿ ವೈಟ್ ಬಣ್ಣಗಳನ್ನು ಪಡೆದಿದೆ. ಮಿ.ಕಾಮ್, ಮಿ ಹೋಮ್ಸ್, ಮಿ ಸ್ಟುಡಿಯೋಸ್, ಅಮೆಜಾನ್.ಇನ್ ಮತ್ತು ಶಿಯೋಮಿಯ ಪಾಲುದಾರ ಆಫ್‌ಲೈನ್ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








