Just In
- 1 hr ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 1 hr ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 2 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 3 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Movies
Sathya Serial: ಸತ್ಯ-ಕಾರ್ತಿಕ್ ನಡುವೆ ಜಗಳ
- News
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಅದಾನಿ, ಇದು ಆರ್ಥಿಕ ದಿವಾಳಿತನದ ಮುನ್ಸೂಚನೆಯೇ
- Finance
Jio, Airtel 5G: ಕಳೆದ 4 ತಿಂಗಳಲ್ಲಿ ಎಷ್ಟು ಗ್ರಾಹಕರನ್ನು ಆಕರ್ಷಿಸಿವೆ ಟೆಲಿಕಾಂ ಕಂಪನಿಗಳು? ಇಲ್ಲಿದೆ ಮಾಹಿತಿ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Automobiles
ಭಾರತದಲ್ಲಿ ದಾಖಲೆ ಮಟ್ಟದ ಬುಕ್ಕಿಂಗ್ ಪಡೆದುಕೊಳ್ಳುತ್ತಿವೆ ಮಾರುತಿ ಜಿಮ್ನಿ, ಫ್ರಾಂಕ್ಸ್
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇಂದು ಶಿಯೋಮಿ 'ಮಿ ಎ3' ಫ್ಲಾಶ್‌ಸೇಲ್!..750 ರೂ. ಹೆಚ್ಚುವರಿ ಕ್ಯಾಶ್‌ಬ್ಯಾಕ್
ಶಿಯೋಮಿಯ ಇತ್ತೀಚಿನ ಆಂಡ್ರಾಯ್ಡ್ ಒನ್ ಸ್ಮಾರ್ಟ್‌ಫೋನ್ 'ಮಿ ಎ3' ಇಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾರಾಟವಾಗಲಿದೆ. ಮಿ.ಕಾಮ್, ಅಮೆಜಾನ್ ಮತ್ತು ದೇಶಾದ್ಯಂತದ ಅಧಿಕೃತ ಮಿ ಹೋಮ್ ಸ್ಟೋರ್‌ಗಳಿಂದ ಹೊಸ ಶಿಯೋಮಿ ಸ್ಮಾರ್ಟ್‌ಫೋನ್ ಖರೀದಿಸಬಹುದಾಗಿದ್ದು, ಎಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿಸಿದರೆ 750 ಕ್ಯಾಶ್‌ಬ್ಯಾಕ್, ಹೆಚ್ಚುವರಿ ರೂ. ಇಎಂಐ ವಹಿವಾಟಿಗೆ 250 ರೂ. ಹಾಗೂ ಏರ್ಟೆಲ್ ಗ್ರಾಹಕರು ಡಬಲ್ ಡೇಟಾ ಮತ್ತು ಅನಿಯಮಿತ ಕರೆ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
12,999 ರೂ.ಗಳ ಬೆಲೆಯಲ್ಲಿ ಕ್ಯಾಮೆರಾ ಕೇಂದ್ರಿತ ಸ್ಮಾರ್ಟ್‌ಪೋನ್ ಆಗಿರುವ 'ಮಿ ಎ3' ಸ್ಮಾರ್ಟ್‌ಫೋನ್ 48 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೇ, ಟ್ರಿಪಲ್ ರಿಯರ್ ಕ್ಯಾಮೆರಾಗಳು, ಸೂಪರ್ ಅಮೋಲೆಡ್ ಡಿಸ್ಪ್ಲೇ ಮತ್ತು ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸ್ಮಾರ್ಟ್‌ಪೋನ್ ಪ್ಯಾಕ್ ಮಾಡುತ್ತದೆ. ಹಾಗೆಯೇ 4 ಜಿಬಿ RAM + 64 ಜಿಬಿ ಸ್ಟೋರೇಜ್ ಮತ್ತು 6 ಜಿಬಿ RAM + 128 ಜಿಬಿ ಸ್ಟೋರೇಜ್ ಮಾದರಿಗಳಲ್ಲಿ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿದೆ.
'ಮಿ ಎ3' ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ ಪೈನೊಂದಿಗೆ ಪ್ರಾರಂಭಿಸುತ್ತದೆ ಮತ್ತು ಶೀಘ್ರದಲ್ಲೇ ಆಂಡ್ರಾಯ್ಡ್ 10 ಸಾಫ್ಟ್‌ವೇರ್ ನವೀಕರಣವನ್ನು ಪಡೆಯಲಿದೆ. ಪಿಕ್ಸೆಲ್ 4 ಸರಣಿಯು ಆಂಡ್ರಾಯ್ಡ್ 10 ಬರಲಿದ್ದು, ಈ ಅಪ್‌ಡೇಟ್ ಮಿ A3ಗೂ ಸಹ ದೊರೆಯಲಿದೆ. ಕೇವಲ 12,999 ರೂಪಾಯಿಗಳಿಂದ ಆರಭವಾಗಿರುವ 'ಮಿ A3' ಪೋನ್ ಕೂಡ ಆಂಡ್ರಾಯ್ಡ್ 10 ಅಪ್‌ಡೇಟ್ ಪಡೆಯುತ್ತಿರುವುದು ವಿಶೇಷ ಎಂದು ಹೇಳಬಹುದು. ಹಾಗಾದರೆ, ಶಿಯೋಮಿ ಮಿ ಎ3 ಸ್ಮಾರ್ಟ್‌ಫೋನ್ ಹೇಗಿದೆ?, ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಮುಂದೆ ಓದಿ ತಿಳಿಯಿರಿ.

ಡಿಸ್‌ಪ್ಲೇ ಹೇಗಿದೆ
ಶಿಯೋಮಿಮಿ ಎ3 ಸ್ಮಾರ್ಟ್‌ಫೋನ್ 1560x720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.1 ಇಂಚಿನ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಡಿಸ್‌ಪ್ಲೇಯಲ್ಲಿಯೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಹೊಂದಿದ್ದು, ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ. ಗ್ರೇಡಿಯಂಟ್ ಪ್ಯಾನೆಲ್ ರಚನೆ ಪಡೆದಿದ್ದು, ಸುತ್ತಳತೆಯು 153.48x71.85x8.5mm ಆಗಿದೆ.

ಪ್ರೊಸೆಸರ್ ಹಾಗೂ ಮೆಮೊರಿ
ಶಿಯೋಮಿ ಮಿ ಎ3 ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 665 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 9 ಓಎಸ್ ಬೆಂಬಲ ಪಡೆದಿದೆ. 4GB RAM + 64GB ಮತ್ತು 6GB RAM + 128GB ಸಾಮರ್ಥ್ಯದ ವೇರಿಯಂಟ್ ಮಾದರಿಗಳ ಆಯ್ಕೆ ಇದ್ದು, ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯಮೆಮೊರಿಯನ್ನು 256GB ವರೆಗೂ ವಿಸ್ತರಿಸಬಹುದಾಗದ ಅವಕಾಶ ಇದೆ.

ಹೈ ಸೆನ್ಸಾರ್ ಕ್ಯಾಮೆರಾ
ಶಿಯೋಮಿ ಮಿ ಎ3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳಲ್ಲಿ ಪ್ರಾಥಮಿಕ ಕ್ಯಾಮೆರಾವು ಎಫ್ / 1.78 ಅಪರ್ಚರ್ನೊಂದಿಗೆ 48ಎಂಪಿ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಹೊಂದಿದ್ದು, ಇನ್ನು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸೆಲ್ಫಿ ಕ್ಯಾಮೆರಾ ವಿಶೇಷ
ಶಿಯೋಮಿ ಮಿ ಎ3 ಸ್ಮಾರ್ಟ್‌ಫೋನಿನಲ್ಲಿ ಸೆಲ್ಫಿ ಕ್ಯಾಮೆರಾ ಹೆಚ್ಚಿನ ಗಮನ ನೀಡಿದ್ದು, ಎಫ್ / 2.0 ಅಪರ್ಚರ್ನೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ನೀಡಲಾಗಿದೆ. ಹಾಗೆಯೇ ಈ ಕ್ಯಾಮೆರಾವು ಎಐ ಪೋರ್ಟ್ರೇಟ್ ಮೋಡ್, 3 ಡಿ ಬ್ಯೂಟಿ, ಪನೋರಮಾ, ಗೆಸ್ಚರ್ ಫೋಟೋ, ಫ್ರಂಟ್ ಎಚ್‌ಡಿಆರ್ ಮತ್ತು ಫ್ರಂಟ್ ಸ್ಕ್ರೀನ್ ಫಿಲ್ ಸೇರಿದಂತೆ ಹಲವು ಅಗತ್ಯ ಕ್ಯಾಮೆರಾ ತಂತ್ರಜ್ಞಾನಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಶಿಯೋಮಿ ಮಿ ಎ3 ಸ್ಮಾರ್ಟ್‌ಫೋನ್ 4,030mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಬೆಂಬಲವನ್ನು ಒಳಗೊಂಡಿದೆ. ಇದರೊಂದಿಗೆ 4ಜಿ ವೋಲ್ಟ್, ಸ್ಲೊ ಮೋಷನ್ ವಿಡಿಯೋ ರೆಕಾರ್ಡಿಂಗ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಅಗತ್ಯ ಆಯ್ಕೆಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಅಮೆಜಾನ್, Mi.com, ಮಿ ಹೋಮ್ ತಾಣಗಳಲ್ಲಿ ಖರೀದಿಗೆ ಲಭ್ಯವಾಗಲಿದ್ದು, 4GB RAM + 64GB ವೇರಿಯಂಟ್ ಆರಂಭಿಕ ಬೆಲೆಯು 12,999ರೂ.ಗಳಾಗಿದೆ. ಎಚ್‌ಡಿಎಫ್‌ಸಿ ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ 750ರೂ.ಗಳ ಕ್ಯಾಶ್‌ಬ್ಯಾಕ್ ದೊರೆಯಲಿದ್ದು, ಹಾಗೂ ಇಎಮ್‌ಐಗಳ ಟ್ರಾನ್ಶಾಕ್ಷನ್ ಮೇಲೆ 250ರೂ ಕ್ಯಾಶ್‌ಬ್ಯಾಕ್ ಸಿಗಲಿದೆ. ಹಾಗೆಯೇ ಏರ್‌ಟೆಲ್‌ನಿಂದ (249ರೂ. ರೀಚಾರ್ಜ್) ಡಬಲ್ ಡೇಟಾ ಮತ್ತು ಅನಿಯಮಿತ ಕರೆಯ ಕೊಡುಗೆ ಲಭ್ಯವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470