ಆಪಲ್ 10 ವಿನ್ಯಾಸದ "ಮೈ ಮಿಕ್ಸ್ 2ಎಸ್" ಬಿಡುಗಡೆಗೆ ಸಜ್ಜಾಯಿತು ಶಿಯೋಮಿ!!..ಬೆಲೆ ಎಷ್ಟು ಗೊತ್ತಾ?!
ಆಪಲ್ 10 ವಿನ್ಯಾಸವನ್ನು ಹೊಂದಿರುವ ಶಿಯೋಮಿಯ ಹೈ ಎಂಡ್ ಸ್ಮಾರ್ಟ್‌ಫೋನ್ 2018ನೇ ವರ್ಷದ ಮೊಬೈಲ್ ವರ್ಲ್ಡ್ ಕಾಂಗ್ರೆಸ್‌ನಲ್ಲಿ ಬಿಡುಗಡೆಯಾಗುವುದು ನಿಶ್ಚಿತ ಎಂದು ಪ್ರಮುಖ ಇಂಗ್ಲೀಷ್ ಮಾಧ್ಯಮಗಳು ವರದಿ ಮಾಡಿವೆ.!
ಆಪಲ್ 10 ವಿನ್ಯಾಸವನ್ನು ಹೊಂದಿರುವ ಶಿಯೋಮಿಯ ಹೈ ಎಂಡ್ ಸ್ಮಾರ್ಟ್‌ಫೋನ್ 2018ನೇ ವರ್ಷದ ಮೊಬೈಲ್ ವರ್ಲ್ಡ್ ಕಾಂಗ್ರೆಸ್‌ನಲ್ಲಿ ಬಿಡುಗಡೆಯಾಗುವುದು ನಿಶ್ಚಿತ ಎಂದು ಪ್ರಮುಖ ಇಂಗ್ಲೀಷ್ ಮಾಧ್ಯಮಗಳು ವರದಿ ಮಾಡಿವೆ.! ಹಾಗಾಗಿ, ''ಶೀಯೋಮಿ ಮೈ ಮಿಕ್ಸ್ 2ಎಸ್'' ಸ್ಮಾರ್ಟ್‌ಫೋನ್ ವಿಷಯ ಮತ್ತೊಮ್ಮೆ ಗರಿಗೆದರಿದೆ.!!
ಕಳೆದ ವರ್ಷದ ಶಿಯೋಮಿ ಮತ್ತು ಕ್ವಾಲ್ಕಂ ಕಂಪೆನಿಯ ಮಾತುಕತೆಯಂತೆ, ಶೀಯೋಮಿ ಮೈ ಮಿಕ್ಸ್ 2ಎಸ್ ಸ್ಮಾರ್ಟ್‌ಫೋನ್ ಕ್ವಾಲ್ಕಂ ಸ್ನ್ಯಾಪ್‌ಡ್ರಾಗನ್ 845 SOC ಪ್ರೊಸೆಸರ್ ಹೊಂದಲಿದೆ ಎಂದು ಹೇಳಲಾಗಿದೆ. ಹಾಗಾಗಿ, ಶಿಯೋಮಿಯ ಮೊದಲ ಸ್ಮಾರ್ಟ್‌ಫೋನ್ ಒಂದು ಸ್ನ್ಯಾಪ್‌ಡ್ರಾಗನ್ 845 SOC ಪ್ರೊಸೆಸರ್ ಅಳವಡಿಸಿಕೊಂಡಂತಾಗುತ್ತದೆ.!!

ಇನ್ನು ಭಾರತ ಸೇರಿದಂತೆ ಹಲವೆಡೆ ಭಾರಿ ಯಶಸ್ಸನ್ನು ಗಳಿಸಿರುವ ಶಿಯೋಮಿ ಕಂಪೆನಿ ಮೂರನೇ ತಲೆಮಾರಿನ ಸ್ಮಾರ್ಟ್‌ಫೋನ್ ಉತ್ಪಾದನೆಗೆ ಒಲವು ತೋರಿರುವುದರಿಂದ ''ಶೀಯೋಮಿ ಮೈ ಮಿಕ್ಸ್ 2ಎಸ್'' ಸ್ಮಾರ್ಟ್‌ಫೋನ್ ಫೀಚರ್ಸ್ ಕೂಡ ಅದ್ಬುತವಾಗಿರಲಿವೆ.! ಹಾಗಾದರೆ, ಮೈ ಮಿಕ್ಸ್ 2ಎಸ್‌ನ ಇತರೆ ಫೀಚರ್ಸ್‌ಗಳೆನು? ಮತ್ತು ಬೆಲೆ ಎಷ್ಟು? ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!!

403PPi ಡೆನ್‌ಸಿಟಿ ಡಿಸ್‌ಪ್ಲೇ !!
5.99-ಇಂಚಿನ ಬೆಜೆಲ್ ಡಿಸ್‌ಪ್ಲೇ 1080x2160 ಪಿಕ್ಸೆಲ್ ಮೂಲಕ ಶಿಯೋಮಿ ಮೈ ಮಿಕ್ಸ್ 2 ಹೊರಬಂದಿದ್ದು, 403PPi ಡೆನ್‌ಸಿಟಿ ವೈಶಿಷ್ಟ್ಯ ಹೊಂದಿದೆ.!! 151.8x75.5x7.7 ಮಿಮೀ ಅಳತೆ, ಮತ್ತು 185 ಗ್ರಾಂ ತೂಕವಿರುವ ಮೈ ಮಿಕ್ಸ್ 2 ಆಪಲ್ ಮತ್ತು ಸ್ಯಾಮ್‌ಸಂಗ್‌ಗೆ ನೇರ ಸೆಡ್ಡು ಹೊಡೆದಿದೆ.!!

ಕ್ಯಾಮೆರಾ ಹೇಗಿದೆ?
ಸೋನಿ IMX386 ಸೆನ್ಸಾರ್, 1.25-ಮೈಕ್ರಾನ್ ಪಿಕ್ಸೆಲ್ ಹಾಗೂ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್, 5-ಪೀಸ್ ಲೆನ್ಸ್ ಮತ್ತು ಎಫ್ / 2.0 ಅಪರ್ಚರ್‌ನೊಂದಿದಗೆ 18k ಚಿನ್ನ ಲೇಪಿತ ಕ್ಯಾಮೆರಾ ರಿಂಗ್ ಮೂಲಕ ಶಿಯೋಮಿ ಮೈ ಮಿಕ್ಸ್ 2 ರಿಯರ್ ಕ್ಯಾಮೆರಾ ಹೊರಬಂದಿದೆ.! ರಿಯರ್ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸಾಮರ್ಥ್ಯ ಹೊಂದಿದ್ದರೆ, 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಫೋನ್‌ನಲ್ಲಿದೆ.!!

ಪ್ರೊಸೆಸರ್ ಮತ್ತು ಕನೆಕ್ಟಿವಿಟಿ!!
ಶಿಯೋಮಿ ಮೈ ಮಿಕ್ಸ್ 2 ಸ್ಮಾರ್ಟ್‌ಫೋನ್ ಕ್ವಾಲ್ಕಮ್‌ನ ಸ್ನ್ಯಾಪ್‌ಡ್ರಾಗನ್ 835 SoC ಪ್ರೊಸೆಸರ್ ಹಾಗೂ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ ಮೂಲಕ ಕಾರ್ಯನಿರ್ವಹಿಸಲಿದೆ. ಜೊತೆಗೆ 4ಜಿ ಎಲ್‌ಟಿಇ, ಡ್ಯೂಯಲ್-ಬ್ಯಾಂಡ್ (2.4GHz ಮತ್ತು 5GHz), Wi-Fi, ಜಿಪಿಎಸ್ / ಎ-ಜಿಪಿಎಸ್, ಬ್ಲೂಟೂತ್ ವಿ 5.0, ಮತ್ತು ಟೈಪ್ ಸಿ ಯುಎಸ್‌ಬಿ ಎಲ್ಲವಕ್ಕೂ ಕನೆಕ್ಟಿವಿಟಿ ಹೊಂದಿದೆ.!!

ಇತರೆ ಏನೆಲ್ಲಾ ಫೀಚರ್ಸ್?
ವಿಶ್ವದ ಟಾಪ್ ಕಂಪೆನಿಗಳಿಗೂ ಸೆಡ್ಡು ಹೊಡೆಯುವಂತಹ ಸಂವೇದಕಗಳಿಂದ ಮೈ ಮಿಕ್ಸ್ 2 ಹೊರಬಂದಿದೆ.! ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬಾರೋಮೀಟರ್, ಡಿಜಿಟಲ್ ದಿಕ್ಸೂಚಿ, ಜ್ಯೋರೋಸ್ಕೋಪ್ ಮತ್ತು ಅಲ್ಟ್ರಾಸಾನಿಕ್ ಪೀಚರ್ಸ್‌ಗಳು ಸ್ಮಾರ್ಟ್‌ಫೋನ್‌ನಲ್ಲಿವೆ.ಮತ್ತು 3400mAh ಬ್ಯಾಟರಿ ಶಕ್ತಿಯನ್ನು ಹೊಂದಿದೆ.!!


ಶಿಯೋಮಿ ಮಿಕ್ಸ್ 2 ಬೆಲೆ.!
ಇಷ್ಟೆಲ್ಲಾ ಫೀಚರ್ಸ್ ಹೊಂದಿರುವ ಶಿಯೋಮಿ ಕಂಪೆನಿ ಈ ಹೈ ಎಂಡ್ ಫೋನ್ ಶಿಯೋಮಿ ಮಿಕ್ಸ್ 2 6GB RAM ಹಾಗೂ 128GB ವೆರಿಯಂಟ್ ಸ್ಮಾರ್ಟ್‌ಫೊನ್ ಬೆಲೆ ಚೀನಾದಲ್ಲಿ 4000 CNY ಆಗಿರಲಿದೆ ಎನ್ನಲಾಗಿದೆ. ಅಂದರೆ ಭಾರತದಲ್ಲಿ 39 ಸಾವಿರ ರೂಪಾಯಿಗಳ ಆಸುಪಾಸಿನಲ್ಲಿರಲಿದೆ ಎನ್ನಬಹುದು.!!


Click it and Unblock the Notifications