Subscribe to Gizbot

ಮೊಬೈಲ್ ಜಗತ್ತನೇ ಹೆದರಿಸಿರುವ 'ಶಿಯೋಮಿ' ಸ್ಮಾರ್ಟ್‌ಫೋನ್ ನಾಳೆ ಬಿಡುಗಡೆ!!

Written By:

ವಿಶ್ವ ಮೊಬೈಲ್ ಮಾರುಕಟ್ಟೆ ಭಾರೀ ಕುತೋಹಲದಿಂದ ಎದುರು ನೋಡುತ್ತಿರುವ ''ಶಿಯೋಮಿ ಮಿ ಮಿಕ್ಸ್ 2ಎಸ್'' ಸ್ಮಾರ್ಟ್‌ಫೋನ್ ನಾಳೆ ಬಿಡುಗಡೆಯಾಗುತ್ತಿದೆ.! 2018ನೇ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಶಿಯೋಮಿ ಕಂಪೆನಿ ತಿಳಿಸಿದಂತೆ ಮಾರ್ಚ್ 27ಕ್ಕೆ ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಗೆ ಫೋನ್ ಪರಿಚಯಿಸುತ್ತಿದೆ.!!

ಫೇಸ್‌ ಅನ್‌ಲಾಕ್ ಫೀಚರ್, ಸ್ನ್ಯಾಪ್‌ಡ್ರಾಗನ್ 845 SOC ಪ್ರೊಸೆಸರ್ ಹಾಗೂ 18k ಚಿನ್ನ ಲೇಪಿತ ಕ್ಯಾಮೆರಾ ರಿಂಗ್‌ನಂತರ ಫೀಚರ್ಸ್‌ಗಳ ಮಾಹಿತಿ ಈಗಾಗಲೇ ಲೀಕ್ ಆಗಿರುವುದರಿಂದ , ನಾಳೆ ಬಿಡುಗಡೆಯಾಗುವ 'ಶಿಯೋಮಿ ಮಿ ಮಿಕ್ಸ್ 2ಎಸ್' ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಹೊಂದಿರಬಹುದು ಎಂಬ ಕುತೋಹಲ ವಿಶ್ವ ಮೊಬೈಲ್ ಮಾರುಕಟ್ಟೆಯಲ್ಲಿ ಮನೆಮಾಡಿದೆ.!!

ಮೊಬೈಲ್ ಜಗತ್ತನೇ ಹೆದರಿಸಿರುವ 'ಶಿಯೋಮಿ' ಸ್ಮಾರ್ಟ್‌ಫೋನ್ ನಾಳೆ ಬಿಡುಗಡೆ!!

ಆಪಲ್ ಐಫೋನ್ ಎಕ್ಸ್ ಹಾಗೂ ಸ್ಯಾಮ್‌ಸಂಗ್ ಗ್ಯಾಲಾಕ್ಸಿ 9 ಸ್ಮಾರ್ಟ್‌ಫೋನ್‌ಗಳಿಗೆ ಸೆಡ್ಡುಹೊಡೆಯುವಂತಹ ಸ್ಮಾರ್ಟ್‌ಫೋನ್ ಇದಾಗಿರಲಿದೆ ಎನ್ನಲಾಗಿದ್ದು, ಹಾಗಾದರೆ ಲೀಕ್ ಆಗಿರುವ ಮಾಹಿತಿಯಂತೆ ಸಂಚಲನ ಮೂಡಿಸಿರುವ ಶಿಯೋಮಿ ಮಿ ಮಿಕ್ಸ್ 2ಎಸ್ ಸ್ಮಾರ್ಟ್‌ಪೋನ್ ಇನ್ನಿತರ ಏನೆಲ್ಲಾ ಫೀಚರ್ಸ್ ಹೊಂದಿರಬಹುದು ಎಂಬುದನ್ನು ಮುಂದೆ ತಿಳಿಯಿರಿ.!!

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಬೆಜೆಲ್ ಲೆಸ್ ಡಿಸ್‌ಪ್ಲೇ

ಬೆಜೆಲ್ ಲೆಸ್ ಡಿಸ್‌ಪ್ಲೇ

403PPi ಡೆನ್‌ಸಿಟಿ ವೈಶಿಷ್ಟ್ಯ ಹೊಂದಿರುವ 5.99-ಇಂಚಿನ ಬೆಜೆಲ್ ಲೆಸ್ ಡಿಸ್‌ಪ್ಲೇ 1080x2160 ಪಿಕ್ಸೆಲ್‌ ಮೂಲಕ ಶಿಯೋಮಿ ಮಿ ಮಿಕ್ಸ್ 2ಎಸ್ ಸ್ಮಾರ್ಟ್‌ಪೋನ್ ಹೊರಬರಲಿದೆ.! 151.8x75.5x7.7 ಮಿಮೀ ಅಳತೆ, ಮತ್ತು 185 ಗ್ರಾಂ ತೂಕವಿರುವ ಮೈ ಮಿಕ್ಸ್ 2 ಆಪಲ್ ಮತ್ತು ಸ್ಯಾಮ್‌ಸಂಗ್‌ ಗ್ಯಾಲಾಕ್ಸಿ 9ಗೆ ನೇರ ಸೆಡ್ಡು ಹೊಡೆದಿದೆ.!!

ಪ್ರೊಸೆಸರ್ ಮತ್ತು RAM!!

ಪ್ರೊಸೆಸರ್ ಮತ್ತು RAM!!

ಶಿಯೋಮಿ ಮಿ ಮಿಕ್ಸ್ 2ಎಸ್ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಕಂಪೆನಿಯ ಸ್ನ್ಯಾಪ್‌ಡ್ರಾಗನ್ 835 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಆಂಡ್ರಾಯ್ಡ್ ಓರಿಯೋ ಮೂಲಕ ಕಾರ್ಯನಿರ್ವಹಣೆ ನೀಡುವ ಮಿ ಮಿಕ್ಸ್ 2ಎಸ್ ಸ್ಮಾರ್ಟ್‌ಫೋನ್ 4GB ಮತ್ತು 6GB ವೆರಿಯಂಟ್‌ಗಳಲ್ಲಿ ಮಾರುಕಟ್ಟೆಗೆ ಬರಲಿದೆ ಎಂದು ಹೇಳಲಾಗಿದೆ.!!

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

1.25-ಮೈಕ್ರಾನ್ ಪಿಕ್ಸೆಲ್ ಹಾಗೂ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್, 5-ಪೀಸ್ ಲೆನ್ಸ್ ಮತ್ತು ಎಫ್ / 2.0 ಅಪರ್ಚರ್‌ ಹೊಂದಿರುವ 18k ಚಿನ್ನ ಲೇಪಿತ ರಿಂಗ್‌ನ 12 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಹಾಗೂ ಸೋನಿ IMX386 ಸೆನ್ಸಾರ್, ಎಫ್ / 2.0 ಅಪರ್ಚರ್‌ ಹೊಂದಿರುವ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸ್ಮಾರ್ಟ್‌ಫೋನಿನಲ್ಲಿರಲಿದೆ ಎಂದು ಹೇಳಲಾಗಿದೆ.!!

ಇತರೆ ಏನೆಲ್ಲಾ ಫೀಚರ್ಸ್?

ಇತರೆ ಏನೆಲ್ಲಾ ಫೀಚರ್ಸ್?

ಶಿಯೋಮಿ ಮಿ ಮಿಕ್ಸ್ 2ಎಸ್ ಸ್ಮಾರ್ಟ್‌ಫೋನ್ ಜಿ ಎಲ್‌ಟಿಇ, ಡ್ಯೂಯಲ್-ಬ್ಯಾಂಡ್ (2.4GHz ಮತ್ತು 5GHz), Wi-Fi, ಜಿಪಿಎಸ್ / ಎ-ಜಿಪಿಎಸ್, ಬ್ಲೂಟೂತ್ ವಿ 5.0, ಮತ್ತು ಟೈಪ್ ಸಿ ಯುಎಸ್‌ಬಿ ಫೀಚರ್ಸ್‌ಗಳನ್ನು ಒಳಗೊಂಡಿದೆ. ವಾಟರ್ ಮತ್ತು ಡಸ್ಟ್ ನಿರೋಧಕ ತಂತ್ರಜ್ಞಾನವನ್ನು ಸ್ಮಾರ್ಟ್‌ಫೋನ್ ಹೊಂದಿರಲಾಗಿದೆ ಎನ್ನಲಾಗಿದೆ.!!

How to Activate UAN Number? KANNADA
ಶಿಯೋಮಿ ಮೈ ಮಿಕ್ಸ್ 2 ಬೆಲೆ.!

ಶಿಯೋಮಿ ಮೈ ಮಿಕ್ಸ್ 2 ಬೆಲೆ.!

ಶಿಯೋಮಿ ಮಿ ಮಿಕ್ಸ್ 2ಎಸ್ ಸ್ಮಾರ್ಟ್‌ಫೋನ್ ಹೈ ಎಂಡ್ ಸ್ಮಾರ್ಟ್‌ಫೋನ್ ಆಗಿದ್ದರೂ ಕೂಡ ಸ್ಮಾರ್ಟ್‌ಫೋನ್ ಬೆಲೆ ಕಡಿಮೆ ಇದರಲಿದೆ. 6GB RAM ಹಾಗೂ 128GB ವೆರಿಯಂಟ್ ಸ್ಮಾರ್ಟ್‌ಫೊನ್ ಬೆಲೆ ಚೀನಾದಲ್ಲಿ 4000 CNYಗೆ ಬಿಡುಗಡೆಯಾಗಲಿದೆ ಎನ್ನಲಾಗಿದ್ದು, ಭಾರತದ ರೂಪಾಯಿಗಳ ಲೆಕ್ಕದಲ್ಲಿ 39 ಸಾವಿರ ರೂಪಾಯಿಗಳು ಎನ್ನಬಹುದು.!!

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
xiaomi Mi MIX 2S launch date is March 27: What to expect from Xiaomi smartphone. to know more visit to kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot