ನೂತನ ರೆಡ್‌ಮಿ 6A ಕೇವಲ ರೂ.5999ಕ್ಕೆ: ಇಂದು ಮಧ್ಯಾಹ್ನ 12ಕ್ಕೆ ಅಮೆಜಾನ್‌ನಲ್ಲಿ ಮಾತ್ರ..!
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಶಿಯೋಮಿಗೆ ಸರಿಸಾಟಿಯಾದ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಲು ಯಾರಿಂದಲೂ ಸಾಧ್ಯವೇ ಇಲ್ಲ ಎನ್ನುವ ವಾದಕ್ಕೆ ಪುಷ್ಠಿ ನೀಡುವಂತೆ ಲಾಂಚ್ ಆಗಿದ್ದ ರೆಡ್‌ಮಿ 6A, ರೆಡ್‌ಮಿ 6 ಮತ್ತು ರೆಡ್‌ಮಿ 6 ಪ್ರೋ ಸ್ಮಾರ್ಟ್‌ಫೋನ್‌ಗಳಲ್ಲಿ ಬಜೆಟ್ ಬೆಲೆಯಲ್ಲಿ ಲಾಂಚಾಗಿದ್ದ ರೆಡ್‌ಮಿ 6A ಸ್ಮಾರ್ಟ್‌ಫೋನ್ ಇಂದು ಮೊದಲ ಬಾರಿಗೆ ಫ್ಲಾಷ್ ಸೇಲ್‌ನಲ್ಲಿ ಕಾಣಿಸಿಕೊಂಡಿದೆ.
ಈ ಸ್ಮಾರ್ಟ್‌ಫೋನ್‌ಗಳು ಅಮೆಜಾನ್ ಎಕ್ಸ್‌ಕ್ಲೂಸಿವ್ ಆಗಿ ಸೇಲ್ ಆಗಲಿದ್ದು, ಬಜೆಟ್ ಬೆಲೆಯಲ್ಲಿ ದೊರೆಯಲಿರುವ ರೆಡ್‌ಮಿ 6A ಸ್ಮಾರ್ಟ್‌ಫೋನ್, ಈ ಹಿಂದೆ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡಿದ್ದ ರೆಡ್‌ಮಿ 5A ಸ್ಮಾರ್ಟ್‌ಫೋನಿನ ಮುಂದುವರೆದ ಆವೃತ್ತಿಯಾಗಿದೆ. ಮಾರುಕಟ್ಟೆಯಲ್ಲಿ ಈ ಬೆಲೆಗೆ ದೊರೆಯುತ್ತಿರುವ ಸ್ಮಾರ್ಟ್‌ಫೋನ್ ಎಲ್ಲಾವುಗಳಿಂತ ಇದು ಬೆಸ್ಟ್ ಎನ್ನಲಾಗಿದೆ.

ಬೆಲೆ:
ರೆಡ್‌ಮಿ 6A ಸ್ಮಾರ್ಟ್‌ಫೋನ್ ಎರಡು ಆವೃತ್ತಿಯಲ್ಲಿ ಮಾರಾಟವಾಗಲಿದ್ದು, 2GB RAM ಮತ್ತು 16 GB ಇಂಟರ್ನಲ್ ಮೆಮೊರಿಯ ಆವೃತ್ತಿ ರೂ.5999ಕ್ಕೆ ಮಾರಾಟವಾಗಲಿದೆ. 2GB RAM ಮತ್ತು 32 GB ಇಂಟರ್ನಲ್ ಮೆಮೊರಿ ಆವೃತ್ತಿ ರೂ.6999ಕ್ಕೆ ಮಾರಾಟವಾಗಲಿದೆ.

ಅಮೆಜಾನ್ ಎಕ್ಸ್‌ಕ್ಲೂಸಿವ್
ರೆಡ್‌ಮಿ 6A ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ ಅಮೆಜಾನ್ ಎಕ್ಸ್‌ಕ್ಲೂಸಿವ್ ಆಗಿ ಲಾಂಚ್ ಆಗಲಿದೆ. ಮಿ.ಕಾಮ್ ಮತ್ತು ಅಮೆಜಾನ್ ನಲ್ಲಿ ಸೆಪ್ಟೆಂಬರ್ 19 ರಂದು ಮಧ್ಯಾಹ್ನ 12ಕ್ಕೆ ಫಸ್ಟ್ ಸೇಲ್‌ನಲ್ಲಿ ಕಾಣಿಸಿಕೊಳ್ಳಲಿದೆ. ಅಂದರೆ ಇಂದು ಮಧ್ಯಾಹ್ನ 12ಕ್ಕೆ ಮಾರಾಟವಾಗಲಿದೆ.

ಡಿಸ್‌ಪ್ಲೇ:
ರೆಡ್‌ಮಿ 6A ಸ್ಮಾರ್ಟ್‌ಫೋನಿನಲ್ಲಿ 18:9 ಅನುಪಾತದ 5.45 ಇಂಚಿನ HD+ ಡಿಸ್‌ಪ್ಲೇಯನ್ನು ಕಾಣಬಹುದಾಗಿದೆ. ಇದು ಹಿಂದಿನ ಸ್ಮಾರ್ಟ್‌ಫೋನ್‌ಗಿಂತಲೂ ಡಿಸ್‌ಪ್ಲೇ ದೊಡ್ಡದಾಗಿದೆ ಎನ್ನಬಹುದಾಗಿದೆ. ಇದು ಪುಲ್ ಸ್ಕ್ರಿನ್ ವಿನ್ಯಾಸವನ್ನು ಹೊಂದಿದೆ ಎನ್ನಲಾಗಿದೆ.

ಪ್ರೋಸೆಸರ್;
ಇದೇ ಮೊದಲ ಬಾರಿಗೆ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಅನ್ನು ಬಿಟ್ಟು ಹೆಲಿಯೊ A22 ಪ್ರೋಸೆಸರ್ ಅನ್ನು ರೆಡ್‌ಮಿ 6A ಸ್ಮಾರ್ಟ್‌ಫೋನಿನಲ್ಲಿ ಅಳವಡಿಸಲು ಮುಂದಾಗಿದೆ. ಕ್ವಾಡ್ ಕೋರ್ ಪ್ರೋಸೆಸರ್ ಇದಾಗಿದೆ. ಇದು 2.0 GHz ವೇಗದಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ

ಕ್ಯಾಮೆರಾ:
ರೆಡ್‌ಮಿ 6A ಸ್ಮಾರ್ಟ್‌ಫೋನಿನಲ್ಲಿ 13 MP ಹಿಂಬದಿಯ ಕ್ಯಾಮೆರಾವನ್ನು ಕಾಣಬಹುದಾಗಿದೆ. ಇದಲ್ಲದೇ ಮುಂಭಾಗದಲ್ಲಿ 5 MP ಕ್ಯಾಮೆರಾವನ್ನು ಇದರಲ್ಲಿ ಅಳವಡಿಸಲಾಗಿದೆ. ಅಲ್ಲದೇ AI ಫೇಸ್ ಲಾಕ್ ಅನ್ನು ಇದರಲ್ಲಿ ನೋಡಬಹುದಾಗಿದೆ. ಅಲ್ಲದೇ ಉತ್ತಮ ಸೆಲ್ಫಿಗಳನ್ನು ಕ್ಲಿಕಿಸಿಕೊಳ್ಳಲು AI ಪೋಟ್ರೆಟ್ ಅನ್ನು ನೀಡಲಾಗಿದೆ.

ಆಂಡ್ರಾಯ್ಡ್
ರೆಡ್‌ಮಿ 6A ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 8.1 ಒರಿಯೋದಲ್ಲಿ ಕಾರ್ಯನಿರ್ವಹಿಸಲಿದ್ದು, ಇದರೊಂದಿಗೆ MIUI 9.6 ಅನ್ನು ನೋಡಬಹುದಾಗಿದೆ. ಅಲ್ಲದೇ 3000mAh ಬ್ಯಾಟರಿಯನ್ನು ಇದರಲ್ಲಿ ಅಳವಡಿಸಲಾಗಿದೆ. ಅಲ್ಲದೇ ಡ್ಯುಯಲ್ VoLTE ಸಪೋರ್ಟ್ ಮಾಡಲಿದೆ. ಅಲ್ಲದೇ ಇದರಲ್ಲಿ ಎರಡು ಸಿಮ್ ಮತ್ತು ಒಂದು ಮೆಮೊರಿ ಕಾರ್ಡ್ ಅನ್ನು ಹಾಕಿಕೊಳ್ಳುವ ಅವಕಾಶವು ಇದೆ.


Click it and Unblock the Notifications








