ಇಂದಿನಿಂದ ರೆಡ್‌ಮಿ ಕೆ20 ಮತ್ತು ಕೆ20 ಪ್ರೊ ಮೊದಲ ಸೇಲ್!..ತಿಳಿಯಬೇಕಾದ ವಿಷಯಗಳು!

|

ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಶಿಯೋಮಿ ರೆಡ್‌ಮಿ ಕೆ20 ಮತ್ತು ಕೆ20 ಪ್ರೊ ಸ್ಮಾರ್ಟ್‌ಪೋನ್‌ಗಳ ಮೊದಲ ಮಾರಾಟ ಇಂದಿನಿಂದ ಆರಂಭವಾಗುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಫ್ಲಿಪ್‌ಕಾರ್ಟ್ ಮತ್ತು ಶಿಯೋಮಿಯ ಅಫಿಷಿಯಲ್ ವೆಬ್‌ಸೈಟ್‌ (ಮಿ.ಕಾಮ್ )ನಲ್ಲಿ ಎರಡೂ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ.

ಇಂದಿನಿಂದ ರೆಡ್‌ಮಿ ಕೆ20 ಮತ್ತು ಕೆ20 ಪ್ರೊ ಮೊದಲ ಸೇಲ್!..ತಿಳಿಯಬೇಕಾದ ವಿಷಯಗಳು!

ರೆಡ್ಮಿ ಕೆ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಕಳೆದ ವಾರ ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಪೂರ್ಣ-ಎಚ್‌ಡಿ + ಅಮೋಲೆಡ್ ಡಿಸ್ಪ್ಲೇ, ಮತ್ತು ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಸೆಟಪ್ ಸೇರಿದಂತೆ ಹಲವು ಅತ್ಯಾಧುನಿಕ ಫೀಚರ್ಸ್ ಹೊಂದಿರುವ ಈ ಸ್ಮಾರ್ಟ್‌ಫೋನ್‌ಗಳು ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಎರಡೂ ಫೋನ್‌ಗಳಿಗೂ ಪೈಪೊಟಿ ನೀಡಲು ಸಿದ್ಧವಾಗಿವೆ.

ರೆಡ್‌ಮಿ ರೆಡ್‌ಮಿ ಕೆ20 ಸ್ಮಾರ್ಟ್‌ಫೋನಿನ ಬೆಲೆ 21,999 ರೂ.ಗಳಿಂದ ಆರಂಭವಾಗಿದ್ದರೆ, ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಪೋನ್ ಬೆಲೆ ಕೇವಲ 27,999 ರೂ.ಗಳಿಂದ ಆರಂಭವಾಗಿದೆ. ಈ ಮೂಲಕ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅತ್ಯಂತ ಕಡಿಮೆ ಬೆಲೆಯ ಫೋನ್‌ಗೂ ಬಂದಂತಾಗಿದೆ. ಹಾಗಾದರೆ, ಎರಡೂ ಫೋನ್‌ಗಳು ಹೇಗಿವೆ?, ಬೆಲೆಗಳು ಎಷ್ಟು ಎಂಬುದನ್ನು ಮುಂದೆ ಓದಿ ತಿಳಿಯಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರೆಡ್‌ಮಿ ಕೆ20 ಪ್ರೊ ಫೋನ್ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್‌ಗಳ ಎಫ್‌ಹೆಚ್‌ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್‌ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.

ರೆಡ್‌ಮಿ ಕೆ20 ಫೋನ್ ಕೂಡ 19.5:9 ಆಕಾರ ಅನುಪಾತದೊಂದಿಗೆ 6.39-ಇಂಚಿನ AMOLED ಪ್ರದರ್ಶನವನ್ನು ಹೊಂದಿದೆ. 2340 x 1080 ಪಿಕ್ಸೆಲ್‌ಗಳ ಎಫ್‌ಹೆಚ್‌ಡಿ + ರೆಸೊಲ್ಯೂಷನ್ ಸಾಮರ್ಥ್ಯದಲ್ಲಿ ಬಂದಿರುವ ಡಿಸ್ಪ್ಲೇಯು ಮಲ್ಟಿಮೀಡಿಯಾ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇನ್ನು 7ನೇ ಪೀಳಿಗೆಯ ಇನ್ ಡಿಸ್‌ಪ್ಲೇ ಫಿಂಗರ್ಪ್ರಿಂಟ್ ಸಂವೇದಕದಿಂದ ಸಂಯೋಜಿಸಲ್ಪಟ್ಟಿದೆ.

ಪ್ರೊಸೆಸರ್

ಪ್ರೊಸೆಸರ್

ರೆಡ್‌ಮಿ ಕೆ20 ಪ್ರೊ ರೂ ಸ್ಮಾರ್ಟ್‌ಫೋನ್ 8GB RAM ನೊಂದಿಗೆ ಸ್ನಾಪ್ಡ್ರಾಗನ್ 855 SoC ಪ್ರೊಸೆಸರ್ ಅನ್ನು ಹೊಂದಿದೆ. 256GB ವರೆಗಿನ ಆಂತರಿಕ ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಸ್ಮಾರ್ಟ್‌ಪೋನ್ ಮೆಮೊರಿ ವಿಸ್ತರಣೆಗೆ ಯಾವುದೇ ಅವಕಾಶವನ್ನು ಹೊಂದಿರುವುದಿಲ್ಲ. ಇನ್ನು ಇತ್ತೀಚಿನ MIUI 10 ಆಂಡ್ರಾಯ್ಡ್ 9 ಪೈ ರೊಂದಿಗೆ ಫೋನ್ ರನ್ ಆಗಲಿದೆ.

ರೆಡ್‌ಮಿ ಕೆ20 ಫೋನ್ 6GB RAM ನೊಂದಿಗೆ ಆಕ್ಟಾಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿ. ಪ್ರೊಸೆಸರ್ 6 ಕೋರ್‌ ಕ್ಲಾಕ್ಡ್1.8 ಗಿಗಾಹರ್ಡ್ಜ ವೇಗವನ್ನು ಪಡೆದಿದೆ. ಪ್ರೊಸೆಸರ್‌ನಲ್ಲಿ‌ 8nm ತಂತ್ರಾಜ್ಞಾನವಿದ್ದು, ಇದು ಬ್ಯಾಟರಿ ಉಳಿಕೆ ಮತ್ತು ಮಲ್ಟಿಟಾಸ್ಕ್‌ಗೆ ನೆರವಾಗಲಿದೆ. ಇನ್ನು 64GB ಮತ್ತು 128GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ.

ರಿಯರ್ ಕ್ಯಾಮೆರಾ

ರಿಯರ್ ಕ್ಯಾಮೆರಾ

ರೆಡ್ಮಿ ಕೆ 20 ಪ್ರೊ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 586 ಪ್ರಾಥಮಿಕ ಸಂವೇದಕದೊಂದಿಗೆ ಎಫ್ / 1.75 ಲೆನ್ಸ್, 13 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ವೈಡ್-ಆಂಗಲ್ ಲೆನ್ಸ್ ಮತ್ತು ಎಫ್ / 2.4 ನೊಂದಿಗೆ 8 ಮೆಗಾಪಿಕ್ಸೆಲ್ ತೃತೀಯ ಸಂವೇದಕವನ್ನು ಹೊಂದಿದೆ.

ರೆಡ್‌ಮಿ ಕೆ20 ಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 586 ಪ್ರಾಥಮಿಕ ಸಂವೇದಕದೊಂದಿಗೆ ಎಫ್ / 1.75 ಲೆನ್ಸ್, 13 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ವೈಡ್-ಆಂಗಲ್ ಲೆನ್ಸ್ ಮತ್ತು ಎಫ್ / 2.4 ನೊಂದಿಗೆ 8 ಮೆಗಾಪಿಕ್ಸೆಲ್ ತೃತೀಯ ಸಂವೇದಕವನ್ನು ಹೊಂದಿದೆ.

ಸೆಲ್ಫಿ ಕ್ಯಾಮೆರಾ!

ಸೆಲ್ಫಿ ಕ್ಯಾಮೆರಾ!

ರೆಡ್ಮಿ ಕೆ 20 ಪ್ರೊ ಫೋನ್‌ನಲ್ಲಿ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದ್ದು, ಈ ಕ್ಯಾಮೆರಾವು ಪಾಪ್‌ಅಪ್‌ ಮಾದರಿಯಲ್ಲಿದೆ. ಎಲಿಗಂಟ್ ಪನೋರಮಾ ಸೆಲ್ಫಿ ಫೋಟೊ ಸೆರೆಹಿಡಿಯಬಹುದಾಗಿದ್ದು, ಪಾಪ್‌ಅಪ್‌ ಕ್ಯಾಮೆರಾಗೆ ದಕ್ಕೆಗಳಿಂದ ರಕ್ಷಣೆಯ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಪೋಟೊ ಎಡಿಟಿಂಗ್, ಫಿಲ್ಟರ್, ಆಯ್ಕೆಗಳು ಸೇರಿಕೊಂಡಿವೆ.

ರೆಡ್‌ಮಿ ಕೆ20 ಫೋನ್‌ನಲ್ಲೂ ಕೂಡ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ. ಈ ಕ್ಯಾಮೆರಾವು ಪಾಪ್‌ಅಪ್‌ ಮಾದರಿಯಲ್ಲಿದೆ. ಎಲಿಗಂಟ್ ಪನೋರಮಾ ಸೆಲ್ಫಿ ಫೋಟೊ ಸೆರೆಹಿಡಿಯಬಹುದಾಗಿದ್ದು, ಪಾಪ್‌ಅಪ್‌ ಕ್ಯಾಮೆರಾಗೆದಕ್ಕೆಗಳಿಂದ ರಕ್ಷಣೆಯ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಪೋಟೊ ಎಡಿಟಿಂಗ್, ಫಿಲ್ಟರ್, ಆಯ್ಕೆಗಳು ಸೇರಿಕೊಂಡಿವೆ.

4,000mAh ಬ್ಯಾಟರಿ ಶಕ್ತಿ

4,000mAh ಬ್ಯಾಟರಿ ಶಕ್ತಿ

ರೆಡ್‌ಮಿ ಕೆ20 ಪ್ರೊ ಸ್ಮಾರ್ಟ್‌ಫೋನ್ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಇದು ಹೊಂದಿದೆ. ಡಿವೈಸ್ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.

ರೆಡ್‌ಮಿ ಕೆ20 ಸ್ಮಾರ್ಟ್‌ಫೋನ್ ಕೂಡ 4,000mAhನಷ್ಟು ಬಲಿಷ್ಟ ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಆದರೆ ಈ ಡಿವೈಸ್ 18W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ . ಈ ಪೋನಿನಲ್ಲಿ ಸಹ ದೀರ್ಘಾವಧಿಯ 2 ದಿನದ ಬ್ಯಾಟರಿ ಅವಧಿಯನ್ನು ವಿಸ್ತರಿಸುವ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವುದಾಗಿ ಕಂಪೆನಿ ಹೇಳಿಕೊಂಡಿದ್ದು, ಪ್ರೀಮಿಯಂ ಬ್ಯಾಟರಿ ತಂತ್ರಜ್ಞಾನ ಇದಾಗಿದೆ.

ಇತರೆ ಎಲ್ಲಾ ಫೀಚರ್ಸ್

ಇತರೆ ಎಲ್ಲಾ ಫೀಚರ್ಸ್

ರೆಡ್ಮಿ ಕೆ20 ಪ್ರೊ ಫೋನಿನಲ್ಲಿ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೋಡಬಹುದು.

ರೆಡ್ಮಿ ಕೆ20 ಪ್ರೊ ಫೋನಿನಲ್ಲೂ ಡ್ಯುಯಲ್-ಎಲ್ಇಡಿ ಫ್ಲ್ಯಾಷ್, AI ದೃಶ್ಯ ಗುರುತಿಸುವಿಕೆ, ಸೂಪರ್ ನೈಟ್ ಇಮೇಜ್ ಮೋಡ್ ಮತ್ತು 960fps ನಿಧಾನ-ಚಲನೆಯ ವೀಡಿಯೊ ರೆಕಾರ್ಡಿಂಗ್ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿದೆ. ಇನ್ನು ಬ್ಲೂಟೂತ್ 5.0, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಆಯ್ಕೆಗಳನ್ನು ನಾವು ನೋಡಬಹುದು.

ಬೆಲೆಗಳು ಮತ್ತು ಬಣ್ಣ

ಬೆಲೆಗಳು ಮತ್ತು ಬಣ್ಣ

ಭಾರತದಲ್ಲಿ ರೆಡ್ಮಿ ಕೆ 20 ಪ್ರೊ ಸ್ಮಾರ್ಟ್‌ಫೋನಿನ ಬೆಲೆಯು 6 ಜಿಬಿ RAM + 128 ಜಿಬಿ ಸ್ಟೋರೇಜ್ ರೂಪಾಂತರಕ್ಕೆ 27,999 ರೂ. ಇದ್ದರೆ, ಇದರ 8 ಜಿಬಿ RAM + 256 ಜಿಬಿ ಸ್ಟೋರೇಜ್ ಆಯ್ಕೆಯ ಸ್ಮಾರ್ಟ್‌ಫೋನ್ ಬೆಲೆ ರೂ. 30,999 ರೂ.ಗಳಾಗಿವೆ. ಕಾರ್ಬನ್ ಬ್ಲ್ಯಾಕ್, ಫ್ಲೇಮ್ ರೆಡ್ ಮತ್ತು ಗ್ಲೇಸಿಯರ್ ಬ್ಲೂ ಎಂಬ ಮೂರು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಫೋನ್ ಲಭ್ಯವಿದೆ.

ಒಟ್ಟಾರೆ ವ್ಯತ್ಯಾಸಗಳು!

ಒಟ್ಟಾರೆ ವ್ಯತ್ಯಾಸಗಳು!

ರೆಡ್‌ಮಿ ಕೆ20 ಮತ್ತು ರೆಡ್‌ಮಿ ಕೆ20 ಪ್ರೊ ಎರಡು ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಯಾಂತ್ರಿಕೃತ ಪಾಪ್-ಅಪ್ ಸೆಲ್ಫಿ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಫೋನ್‌ಗಳು AMOLED ಸ್ಕ್ರೀನ್, ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು 4,000mAh ದೊಡ್ಡ ಬ್ಯಾಟರಿಯಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತವೆ. ಆದಾಗ್ಯೂ, ಎರಡು ಫೋನ್‌ಗಳ ನಡುವೆ ಕೆಲವು ಪ್ರಮುಖ ವ್ಯತ್ಯಾಸಗಳಿವೆ. ವಿಶೇಷವೆಂದರೆ, ಕೆ 20 ಪ್ರೊ ಪ್ರೀಮಿಯಂ ಸ್ನಾಪ್‌ಡ್ರಾಗನ್ 855 ಪ್ರೊಸೆಸರ್ ನಿಂದ ಚಾಲಿತವಾಗಿದ್ದರೆ, ಕೆ 20 ಸ್ನಾಪ್‌ಡ್ರಾಗನ್ 730 ಪ್ರೊಸೆಸರ್ ನಿಂದ ನಿಯಂತ್ರಿಸಲ್ಪಡುತ್ತದೆ. ರೆಡ್ಮಿ ಕೆ 20 ಪ್ರೊ 27W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಿದರೆ, ರೆಡ್‌ಮಿ ಕೆ20 18W ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ. ಎರಡೂ ಸ್ಮಾರ್ಟ್‌ಫೋನ್‌ಗಳ ಬೆಲೆಗಳನ್ನು ಈ ಮೂರು ವ್ಯತ್ಯಾಸಗಳು ನಿರ್ಧರಿಸಿವೆ. ಒಟ್ಟಿನಲ್ಲಿ ನಾವು ನೀಡುವ ಹಣಕ್ಕೆ ಎರಡೂ ಫೋನ್‌ಗಳು ಕೂಡ ಬೆಸ್ಟ್ ಆಯ್ಕೆ ಎಂದು ಹೇಳಬಹುದು.

Best Mobiles in India

English summary
Xiaomi Redmi K20, Redmi K20 Pro on sale today at 12pm via Flipkart, Mi store; check price in India, offers, specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X