'ರೆಡ್ಮಿ ನೋಟ್ 7' ಸ್ಮಾರ್ಟ್‌ಫೋನ್‌ ರಿಲೀಸ್‌ಗೆ ಅಂತೂ ದಿನಾಂಕ ಫಿಕ್ಸ್ ಆಯ್ತು.!!

|

ಅಗ್ಗದ ದರದಲ್ಲಿ ಹೈ ಎಂಡ್‌ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ ಅನ್ನು ನೀಡುವ ಕಂಪನಿ ಎಂದೇ ಜನಪ್ರಿಯವಾಗಿರುವ 'ಶಿಯೋಮಿ' ಭಾರತೀಯ ಮಾರುಕಟ್ಟೆಯಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ಆದರೆ ಇತ್ತೀಚಿಗಿನ ದಿನಗಳಿಂದ 'ರೆಡ್ಮಿ ನೋಟ್‌ 7' ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವುದಾಗಿ ಗ್ರಾಹಕರನ್ನು ಸತಾಯಿಸುತ್ತಿದ್ದ ಕಂಪನಿಯು ಇದೀಗ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಅದೆನೆಂದರೇ 'ರೆಡ್ಮಿ ನೋಟ್‌ 7' ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ.

'ರೆಡ್ಮಿ ನೋಟ್ 7' ಸ್ಮಾರ್ಟ್‌ಫೋನ್‌ ರಿಲೀಸ್‌ಗೆ ಅಂತೂ ದಿನಾಂಕ ಫಿಕ್ಸ್ ಆಯ್ತು.!!

ಹೌದು, ಬಹುನಿರೀಕ್ಷಿತ ಶಿಯೋಮಿಯ ರೆಡ್ಮಿ ನೋಟ್ 7 ಸ್ಮಾರ್ಟ್‌ಫೋನ್‌ ಇದೇ ಫೆಬ್ರುವರಿ 28 ರಂದು ಭಾರತೀಯ ಮಾರುಕಟ್ಟೆಗೆ ಲಾಂಚ್ ಆಗಲಿರುವುದು ಇದೀಗ ಅಧಿಕೃತವಾಗಿ ಕನ್‌ಫರ್ಮ್ ಆಗಿದ್ದು, ಪ್ರಮುಖ ಇ ಕಾಮರ್ಸ್ ಜಾಲತಾಣ ಫ್ಲಿಪ್‌ಕಾರ್ಟ್ ಸಹಯೋಗದೊಂದಿದೆ ಲಾಂಚ್‌ ಆಗಲಿದೆ. 'ರೆಡ್ಮಿ ನೋಟ್‌ 7' ಸ್ಮಾರ್ಟ್‌ಫೋನ್ ಸುಮಾರು ಒಂದು ತಿಂಗಳ ಹಿಂದೆಯೇ ಚೀನಾದಲ್ಲಿ ಬಿಡುಗಡೆ ಆಗಿದ್ದು ಭರ್ಜರಿ ಸೇಲ್ ಆಗುತ್ತಿದೆ.

'ರೆಡ್ಮಿ ನೋಟ್ 7' ಸ್ಮಾರ್ಟ್‌ಫೋನ್‌ ರಿಲೀಸ್‌ಗೆ ಅಂತೂ ದಿನಾಂಕ ಫಿಕ್ಸ್ ಆಯ್ತು.!!

'ರೆಡ್ಮಿ ನೋಟ್‌ 7' ಸ್ಮಾರ್ಟ್‌ಫೋನ್ ಬಗ್ಗೆ ಗ್ರಾಹಕರಲ್ಲಿ ನಿರೀಕ್ಷೆಗಳು ಹೆಚ್ಚುತ್ತಿರುವುದಕ್ಕೆ, ಅದು ಒಳಗೊಂಡಿರುವ ಮುಂದುವರಿದ ಅತ್ಯುತ್ತಮ ಫೀಚರ್ಸ್‌ಗಳೆ ಕಾರಣ. ಈ ಸ್ಮಾರ್ಟ್‌ಫೋನಿನ ಹೈಲೈಟ್ಸ್‌ಎಂದರೆ 48 ಮೆಗಾಪಿಕ್ಸಲ್ ಕ್ಯಾಮೆರಾ ಹೊಂದಿರುವುದು, ಇದರೊಂದಿಗೆ ಅತ್ಯುತ್ತಮ ಪ್ರೊಸೆಸರ್ ಮತ್ತು ಗಟ್ಟಿಮುಟ್ಟಾದ ಬಾಹ್ಯ ರಚನೆಯನ್ನು ಸಹ ಹೊಂದಿದೆ. ಹಾಗಾದರೇ ಇತರೆ ಏನೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ನೋಡೋಣ ಬನ್ನಿರಿ.

'ರೆಡ್‌ಮಿ ನೋಟ್ 7' ವಿನ್ಯಾಸ

'ರೆಡ್‌ಮಿ ನೋಟ್ 7' ವಿನ್ಯಾಸ

ವಾಟರ್‌ಡ್ರಾಪ್ ಚಿಕ್ಕ ನೋಚ್ ವಿನ್ಯಾಸದ ಡಿಸ್‌ಪ್ಲೇ, ಡ್ಯುಯಲ್ ಕ್ಯಾಮೆರಾ, ಫಿಂಗರ್‌ಪ್ರಿಂಟ್ ಆಯ್ಕೆ ಸೇರಿದಂತೆ ಹಿಂಬಾಗದಲ್ಲಿ 2.5 ಡಿ ಬಾಗಿದ ಗಾಜಿನ ರಕ್ಷಣೆ ವಿನ್ಯಾಸವನ್ನು ಹೊಂದಿರುವ ಸ್ಮಾರ್ಟ್‌ಪೋನ್ ಹೈ ಎಂಡ್ ಲುಕ್ ಹೊಂದಿದೆ. ಪ್ರೀಮಿಯಮ್ ಸ್ಮಾರ್ಟ್‌ಫೋನ್‌ಗಳಿಗೂ ಸೆಡ್ಡು ಹೊಡೆಯುವಂತಹ ಲುಕ್‌ನಲ್ಲಿ ಬಿಡುಗಡೆಯಾಗ ಮೊದಲ ಬಜೆಟ್ ಫೋನಿನಂತೆ ಕಾಣುತ್ತಿದೆ.

'ರೆಡ್‌ಮಿ ನೋಟ್ 7' ಡಿಸ್‌ಪ್ಲೇ

'ರೆಡ್‌ಮಿ ನೋಟ್ 7' ಡಿಸ್‌ಪ್ಲೇ

'ರೆಡ್‌ಮಿ ನೋಟ್ 7' ಫೋನ್ 19.5: 9 ಆಕಾರ ಅನುಪಾತದಲ್ಲಿ 1080x2340 ಪಿಕ್ಸೆಲ್‌ಗಳ ಸಾಮರ್ಥ್ಯದ 6.3-ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿರುವ ಡಿಸ್‌ಪ್ಲೇ ವಾಟರ್‌ಡ್ರಾಪ್ ಚಿಕ್ಕ ನೋಚ್ ವಿನ್ಯಾಸವನ್ನು ಹೊಂದಿರುವುದನ್ನು ನೋಡಬಹುದಾಗಿದೆ. ಇದು ಮಲ್ಟಿಮೀಡಿಯಾ ಪ್ರಿಯರ ಮನಗೆಲ್ಲಲು ಯಶಸ್ವಿಯಾಗಿದೆ.

ಪ್ರೊಸೆಸರ್ ಮತ್ತು RAM

ಪ್ರೊಸೆಸರ್ ಮತ್ತು RAM

'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 2.2GHz ಸ್ನಾಪ್ಡ್ರಾಗನ್ 660 ಎಸ್‌ಒಸಿ ಪ್ರೊಸೆಸರ್, ಅಡ್ರಿನೋ 512 ಗ್ರಾಫಿಕ್ಸ್, ಮತ್ತು 3 ಜಿಬಿ, 4 ಜಿಬಿ, ಮತ್ತು 6 ಜಿಬಿ RAM ಆಯ್ಕೆಗಳೊಂದಿಗೆ ಬಿಡುಗಡೆಯಾಗಿದೆ. 32GB ಮತ್ತು 64GB ಮೆಮೊರಿ ಆಯ್ಕೆಗಳ ಸ್ಮಾರ್ಟ್‌ಫೋನಿನ ಆಂತರಿಕ ಮೆಮೊರಿಯನ್ನು 256GB ವರೆಗೆ ವಿಸ್ತರಿಸುವ ಆಯ್ಕೆಯೂ ಸಹ ಲಭ್ಯವಿದೆ.

48MP ಕ್ಯಾಮೆರಾ

48MP ಕ್ಯಾಮೆರಾ

ಶಿಯೋಮಿ ಕಂಪೆನಿ ಇದೇ ಮೊದಲ ಬಾರಿಗೆ 48MP ಸಾಮರ್ಥ್ಯದ ಕ್ಯಾಮೆರಾವನ್ನು ತನ್ನ ಸ್ಮಾರ್ಟ್‌ಪೋನಿನಲ್ಲಿ ಅಳವಡಿಸಿದೆ. 48 ಮೆಗಾಪಿಕ್ಸೆಲ್ ಸೋನಿ IMX586 ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಎರಡು ಕ್ಯಾಮೆರಾಗಳನ್ನು ಹಿಂಬಾಗದಲ್ಲಿ ನೀಡಲಾಗಿದೆ. ಡ್ಯುಯಲ್-ಎಲ್ಇಡಿ ಫ್ಲಾಶ್ ಬೆಂಬಲ, ಪಿಡಿಎಎಫ್ ಅನ್ನು ಸಹ ಹಿಂಬಾಗದಲ್ಲಿ ನೋಡಬಹುದಾಗಿದೆ.

13MP ಸೆಲ್ಫಿ ಕ್ಯಾಮೆರಾ

13MP ಸೆಲ್ಫಿ ಕ್ಯಾಮೆರಾ

ಹಿಂಬಾಗದಲ್ಲಿ 48MP+5MP ಸಾಮರ್ಥ್ಯದ ಕ್ಯಾಮೆರಾಗಳನ್ನು ಹೊಂದಿರುವ 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನಿನಲ್ಲಿ 13-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಪೊರ್ಟ್ರೇಟ್ ಮೋಡ್, , ಹೆಚ್‌ಡಿಆರ್, ಎಐ ಫೇಸ್ ಅನ್ಲಾಕ್, ಎಐ ಸ್ಮಾರ್ಟ್ ಬ್ಯೂಟಿ, ಎಐ ಸಿಂಗಲ್ ಶಾಟ್ ಬ್ಲರ್, ಫ್ರಂಟ್ ಹೆಚ್‌ಡಿಆರ್‌ನಂತಹ ವಿಶೇಷತೆಗಳನ್ನು ಈ ಕ್ಯಾಮೆರಾ ತಂತ್ರಜ್ಞಾನದಲ್ಲಿವೆ.

ಬ್ಯಾಟರಿ ಶಕ್ತಿ ಎಷ್ಟು

ಬ್ಯಾಟರಿ ಶಕ್ತಿ ಎಷ್ಟು

ಕ್ವಿಕ್ ಚಾರ್ಜ್ 4 ತಂತ್ರಜ್ಞಾನ ಬೆಂಬಲದೊಂದಿಗೆ 4,000 mAh ಬ್ಯಾಟರಿಯನ್ನು 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಫೋನಿನಲ್ಲಿ ನೀಡಲಾಗಿದೆ. ಇದು 251 ಗಂಟೆಗಳ ಸ್ಟ್ಯಾಂಡ್‌ ಬೈ ಸಮಯ, 23 ಗಂಟೆಗಳ ಟಾಕ್ ಟೈಮ್, 13 ಗಂಟೆಗಳ ವೀಡಿಯೋ ಪ್ಲೇಬ್ಯಾಕ್, ಮತ್ತು 7 ಗಂಟೆಗಳ ಗೇಮಿಂಗ್‌ವರೆಗೆ ಬ್ಯಾಟರಿ ಸಾಮರ್ಥ್ಯವನ್ನು ನೀಡಲಿದೆ ಎಂದು ಶಿಯೋಮಿ ಕಂಪೆನಿ ಹೇಳಿಕೊಂಡಿದೆ.

ಇತರೆ ಏನೆಲ್ಲಾ ಫೀಚರ್ಸ್

ಇತರೆ ಏನೆಲ್ಲಾ ಫೀಚರ್ಸ್

ಟೈಪ್ ಸಿ ಪೋರ್ಟ್, 3.5mm ಆಡಿಯೋ ಜ್ಯಾಕ್, 4ಜಿ ವೋಲ್ಟ್, ಜಿಪಿಎಸ್, ಎಜಿಪಿಎಸ್, ಗ್ಲೋನಾಸ್, ಬ್ಲೂಟೂತ್ ವಿ5, ಮತ್ತು ವೈ-ಫೈ 802.11 ಎ / ಬಿ / ಜಿ / ಎನ್ / ಎಸಿ. ಸೇರಿದಂತೆ 450 ನಿಟ್ಸ್ ಬ್ರೈಟ್ನೆಸ್, 84 ಶೇಕಡಾ ಎನ್ ಟಿ ಎಸ್ ಸಿ ಕಲರ್ ಗ್ಯಾಮೆಟ್‌ನಂತಹ ಇತ್ತೀಚಿನ ಹಲವು ನೂತನ ತಂತ್ರಜ್ಞಾನಗಳನ್ನು 'ರೆಡ್‌ಮಿ ನೋಟ್ 7' ಸ್ಮಾರ್ಟ್‌ಪೋನಿನಲ್ಲಿ ತರಲಾಗಿದೆ.

Best Mobiles in India

English summary
Redmi Note 7 will launch in India on February 28 and it will be a Flipkart exclusive device, as suggested by Flipkart's microsite dedicated to Redmi Note 7.to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X