ಈ '5G' ಸ್ಮಾರ್ಟ್‌ಫೋನ್‌ಗಳನ್ನು ನೀವು ಬಜೆಟ್‌ ಬೆಲೆಗೆ ಖರೀದಿಸಬಹುದು!

|

ಸದ್ಯ ಕೈಯಲ್ಲಿ ಸ್ಮಾರ್ಟ್‌ಫೋನ್‌ ಇಲ್ಲ ಎಂದರೇ ಯಾವುದು ಕೆಲಸ ನಡೆಯುವುದೇ ಇಲ್ಲ ಎನ್ನುವಂತಹ ವಾತಾವರಣ ಇದೆ ಎಂದರೇ ತಪ್ಪಾಗಲಾರದು. ಅಷ್ಟರಮಟ್ಟಿಗೆ ಫೋನ್ ಪ್ರತಿಯೊಬ್ಬರ ದೈನಂದಿನ ಚಟುವಟಿಕೆಗಳಲ್ಲಿ ಬೆಸೆದಿದೆ. ಈ ನಿಟ್ಟಿನಲ್ಲಿ ಮಾರುಕಟ್ಟೆಗೆ ಹೊಸ ಫೀಚರ್ಸ್‌ಗಳ ಫೋನ್‌ಗಳು ಎಂಟ್ರಿ ಕೊಡುತ್ತಲೇ ಇವೆ. ಇನ್ನು ಫೋನ್ ಖರೀದಿಸುವ ಗ್ರಾಹಕರು ಸಹ ವೇಗದ ಕಾರ್ಯವೈಖರಿಯ ಫೋನ್‌ ಆಯ್ಕೆಗಳನ್ನು ಮಾಡಲು ಮನಸ್ಸು ಮಾಡುತ್ತಾರೆ. ಹೀಗಾಗಿ 5G ಫೋನ್‌ಗಳು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ.

ಈ '5G' ಸ್ಮಾರ್ಟ್‌ಫೋನ್‌ಗಳನ್ನು ನೀವು ಬಜೆಟ್‌ ಬೆಲೆಗೆ ಖರೀದಿಸಬಹುದು!

ಹೌದು, ಸದ್ಯ ಹೊಸದಾಗಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು ಹೆಚ್ಚಿನ ಕ್ಯಾಮೆರಾ ಆಯ್ಕೆ, ಅಧಿಕ RAM ಸಾಮರ್ಥ್ಯ ಇರುವ ವೇರಿಯಂಟ್ ಆಯ್ಕೆ ಮಾಡುವ ಜೊತೆಗೆ 5G ಸಪೋರ್ಟ್‌ ಪಡೆದಿರುವ ಫೋನ್‌ ಖರೀದಿಸಲು ಮುಂದಾಗುತ್ತಾರೆ. 5G ನೆಟವರ್ಕ್ ಇನ್ನು ಪ್ರಾರಂಭವಾಗಿಲ್ಲ. ಅದಾಗ್ಯೂ ಬಹುತೇಕ ಗ್ರಾಹಕರು ಬಜೆಟ್‌ ದರದಲ್ಲಿ ಲಭ್ಯವಾಗುವ 5G ಫೋನ್‌ಗಳತ್ತ ಒಲವು ವ್ಯಕ್ತಪಡಿಸುತ್ತಾರೆ. ಹಾಗಾದರೇ ಬಜೆಟ್‌ ಬೆಲೆಯಲ್ಲಿ ಲಭ್ಯ ಇರುವ ಕೆಲವು ಪ್ರಮುಖ 5G ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್ 10T 5G
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ.

ರಿಯಲ್‌ಮಿ 8s 5G
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಈ '5G' ಸ್ಮಾರ್ಟ್‌ಫೋನ್‌ಗಳನ್ನು ನೀವು ಬಜೆಟ್‌ ಬೆಲೆಗೆ ಖರೀದಿಸಬಹುದು!

iQOO Z3 5G
iQOO Z3 5G ಫೋನ್ 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಮತ್ತು 180Hz ಟಚ್‌ ಸ್ಯಾಂಪ್ಲಿಂಗ್‌ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಒಪ್ಪೋ A53s 5G
ಒಪ್ಪೋ A53s 5G ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.7% ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು ಸ್ಟ್ಯಾಂಡರ್ಡ್ 60Hz ರಿಫ್ರೆಶ್ ರೇಟ್‌ಅನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಈ '5G' ಸ್ಮಾರ್ಟ್‌ಫೋನ್‌ಗಳನ್ನು ನೀವು ಬಜೆಟ್‌ ಬೆಲೆಗೆ ಖರೀದಿಸಬಹುದು!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F42 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದ್ದು, HD+ ಇನ್ಫಿನಿಟಿ-ವಿ ಡಿಸ್‌ಪ್ಲೇ ಯನ್ನು ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ.

Best Mobiles in India

English summary
You Can Buy These 5G Smartphones Available at Budget Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X