Subscribe to Gizbot

ನುಬಿಯಾದ ಹೊಸ ಮಧ್ಯಮ ಸರಣಿಯ ಸ್ಮಾರ್ಟ್‌ಫೋನ್‌ನಲ್ಲಿ 5000mAh ಬ್ಯಾಟರಿ..!

Posted By: -

ಜಾಗತಿಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿರುವ ZTE, ನುಬಿಯಾ ಬ್ರಾಂಡ್ ಅಡಿಯಲ್ಲಿ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ಬಿಡುಗಡೆಯನ್ನು ಮಾಡುತ್ತಿದೆ. ಇದೇ ಮಾದರಿಯಲ್ಲಿ ನುಬಿಯಾ ಮಾರುಕಟ್ಟೆಗೆ ಮಧ್ಯಮ ಬೆಲೆಯ ಸ್ಮಾರ್ಟ್ ಫೋನ್ ವೊಂದನ್ನು ಲಾಂಚ್ ಮಾಡಲು ಮುಂದಾಗಿದೆ. ಮಾರ್ಚ್ 24 ರಿಂದ ಚೀನಾ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿರುವ ನುಬಿಯಾ N2 ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಸದ್ದು ಮಾಡುವುದು ಖಂಡಿತ.

ನುಬಿಯಾದ ಹೊಸ ಮಧ್ಯಮ ಸರಣಿಯ ಸ್ಮಾರ್ಟ್‌ಫೋನ್‌ನಲ್ಲಿ 5000mAh ಬ್ಯಾಟರಿ..!

ನುಬಿಯಾ N2 ಸ್ಮಾರ್ಟ್ ಫೋನ್ ನಲ್ಲಿ 5.99 ಇಂಚಿನ ಡಿಸ್ ಪ್ಲೇಯನ್ನು ಕಾಣಬಹುದಾಗಿದ್ದು, ಆಲ್ಲದೇ ಇದು 18:9 ಅನುಪಾತದ ಡಿಸ್ ಪ್ಲೇಯಾಗಿದ್ದು, FHD ಗುಣಮಟ್ಟದಾಗಿದೆ. ಅಲ್ಲದೇ ಈ ಸ್ಮಾರ್ಟ್ ಫೋನಿನಲ್ಲಿ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಅನ್ನು ಅಳವಡಿಸಲಾಗಿದ್ದು, ವೇಗದ ಕಾರ್ಯಚರಣೆಗೆ ಹೇಳಿ ಮಾಡಿಸಿದ ಹಾಗಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದಾಗಿದೆ.

Jio Fi ಬಳಸಿ 2G ಮತ್ತು 3G ಗ್ರಾಹಕರು ಕಾಲ್ ಮಾಡುವುದು ಹೇಗೆ?
ನುಬಿಯಾ N2 ಸ್ಮಾರ್ಟ್ ಫೋನ್ ನಲ್ಲಿ 4GB RAM ಮತ್ತು 64GB ಇಂಟರ್ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಮೈಕ್ರೋ ಎಸ್ ಡಿ ಕಾರ್ಡ್ ಸ್ಲಾಟ್ ಸಹ ಈ ಸ್ಮಾರ್ಟ್ ಫೋನಿನಲ್ಲಿದೆ. ಅಲ್ಲದೇ ಈ ಸ್ಮಾರ್ಟ್ ಫೋನ್ ಆಂಡ್ರಾಯ್ಡ್ 7.1ನಲ್ಲಿ ಕಾರ್ಯನಿರ್ವಹಿಸಲು ಶಕ್ತವಾಗಿದ್ದು, ನುಬಿಯಾ UIಅನ್ನು ಜೊತೆಯಲ್ಲಿ ಕಾಣಬಹುದು.

ಓದಿರಿ: 12ಗಂಟೆಗೆ Mi 4A ಸ್ಮಾರ್ಟ್‌ ಟಿವಿ ಫಸ್ಟ್ ಸೇಲ್‌: ರೂ.13,999ರ TV ಮೇಲೆ ರೂ. 2200 ಕ್ಯಾಷ್ ಬ್ಯಾಕ್ ಆಫರ್.!

ನುಬಿಯಾ N2 ಸ್ಮಾರ್ಟ್ ಫೋನ್ ನಲ್ಲಿ ನೀವು ದೊಡ್ಡ ಮಟ್ಟದ ಬ್ಯಾಟರಿಯನ್ನು ಕಾಣಬಹುದಾಗಿದ್ದು, 5000mAh ಬ್ಯಾಟರಿಯನ್ನು ಇದರಲ್ಲಿ ನೀಡಲಾಗಿದೆ. ಅಲ್ಲದೇ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಮಾಡಲಿದೆ. ಇದು ವೇಗದ ಬ್ಯಾಟರಿ ಚಾರ್ಜಿಂಗ್ ಮತ್ತು ದೀರ್ಘಕಾಲ ಬ್ಯಾಟರಿ ಬಾಳಿಕೆಗೆ ಸಹಾಯಕಾರಿಯಾಗಲಿದೆ.

ನುಬಿಯಾ N2 ಸ್ಮಾರ್ಟ್ ಫೋನ್ ಬೆಲೆಯ ಬಗ್ಗೆ ಯಾವುದೇ ಮಾಹಿತಿಯೂ ಇನ್ನೂ ಲಭ್ಯವಾಗಿಲ್ಲ. ಮಾರುಕಟ್ಟೆಯಲ್ಲಿ ಈಗಾಗಲೇ ಮಧ್ಯಮ ಸರಣಿಯಲ್ಲಿ ಹಲವು ಸ್ಮಾರ್ಟ್ ಫೋನ್ ಗಳು ಕಾಣಿಸಿಕೊಂಡಿರುವ ಕಾರಣ ಸ್ಪರ್ಧಾತ್ಮಕ ಬೆಲೆಯಲ್ಲಿ ಈ ಸ್ಮಾರ್ಟ್ ಫೋನ್ ಮಾರಾಟವಾಗಲಿದೆ.

English summary
ZTE Nubia N3 launched with 18:9 display, 5,000mAh battery. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot