ರೆಡ್ಮಿ ಸಂಸ್ಥೆಯ ಈ ಫೇಮಸ್ ಫೋನಿನ ಬೆಲೆಯಲ್ಲಿ ಸಖತ್ ಇಳಿಕೆ!
ರೆಡ್ಮಿ ಮೊಬೈಲ್ ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ರೆಡ್ಮಿ 10 ಪವರ್ ಮೊಬೈಲ್ ಕೂಡಾ ಒಂದಾಗಿದೆ. ಈ ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದಿದ್ದು, ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಅಂದಹಾಗೆ ಈ ಮೊಬೈಲ್ 50 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಪಡೆದುಕೊಂಡಿದೆ.
ಹೌದು, ದೈತ್ಯ ಇ ಕಾಮರ್ಸ್ ತಾಣ ಅಮೆಜಾನ್ ಸೇಲ್‌ನಲ್ಲಿ ರೆಡ್ಮಿ 10 ಪವರ್ ಮೊಬೈಲ್ ಶೇ. 48% ನೇರ ಡಿಸ್ಕೌಂಟ್ ಹೊಂದಿದ್ದು, 8 GB RAM + 128 GB ವೇರಿಯಂಟ್ ಫೋನ್ 18,999ರೂ. ಗಳ ಬೆಲೆಯಲ್ಲಿ ಲಭ್ಯ ಇದೆ. ಇದಲ್ಲದೇ ಆಯ್ದ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಆಫರ್ ಹಾಗೂ ಇತರೆ ಕೊಡುಗೆ ಸೇರಿ ಈ ಫೋನ್ ಅನ್ನು 9,899ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಇನ್ನು ರೆಡ್ಮಿ ಸಂಸ್ಥೆಯ ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲದ ಆಯ್ಕೆ ಪಡೆದಿದೆ. ಇದಲ್ಲದೇ ಈ ಫೋನ್ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಆಯ್ಕೆ ಸಹ ಪಡೆದುಕೊಂಡಿದೆ. ಹಾಗಾದರೇ ಇನ್ನುಳಿದಂತೆ ರೆಡ್ಮಿ 10 ಪವರ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ರಚನೆ ಹೀಗಿದೆ
ರೆಡ್ಮಿ 10 ಪವರ್ ಮೊಬೈಲ್ 6.7 ಇಂಚಿನ HD+ IPS LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಇದರ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದು 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದಿದೆ.

ಪ್ರೊಸೆಸರ್ ಬಲ ಹೀಗಿದೆ
ರೆಡ್ಮಿ 10 ಪವರ್ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ನಲ್ಲಿ MIUI 13 ಸಪೋರ್ಟ್ ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಕೂಡಾ ಒಳಗೊಂಡಿದೆ.
ಕ್ಯಾಮೆರಾ ಸೆನ್ಸಾರ್ ಹೀಗಿದೆ
ರೆಡ್ಮಿ 10 ಪವರ್ ಫೋನ್ ಎರಡು ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಜೊತೆಗೆ f/2.4 ಅಪರ್ಚರ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಹಾಗೆಯೇ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಇದು ಹೊಂದಿದೆ.
ಬ್ಯಾಟರಿ ಮತ್ತು ಇತರೆ ಆಯ್ಕೆ ಹೀಗಿವೆ
ರೆಡ್ಮಿ ಸಂಸ್ಥೆಯ ಈ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಇದರೊಂದಿಗೆ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಪಡೆದುಕೊಂಡಿದೆ. ಇನ್ನು ಈ ಫೋನ್ ರಿಯರ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.


Click it and Unblock the Notifications








