ತಂಪು ಪಾನೀಯಕ್ಕಿಂತ 1ಜಿಬಿ ಡೇಟಾ ಅಗ್ಗ!..'ಮೋದಿ' ಹೀಗೆ ಹೇಳಲು 8 ಶಾಕಿಂಗ್ ಕಾರಣಗಳು!!

|

ಇತ್ತೀಚಿಗಷ್ಟೇ ನಡೆದ ಇಂಡೊ-ಜಪಾನ್‌ 13ನೇ ವಾರ್ಷಿಕ ಶೃಂಗಸಭೆಯಲ್ಲಿ ಭಾರತದ ಡಿಜಿಟಲ್‌ ಮೂಲ ಸೌಕರ್ಯದಲ್ಲಾದ ಪ್ರಗತಿಯನ್ನು ಉಲ್ಲೇಖೀಸಿದ ಪ್ರಧಾನಮಂತ್ರಿ ಮೋದಿ ಅವರು, 'ಭಾರತದಲ್ಲಿ ಈಗ ಒಂದು ಬಾಟಲಿ ತಂಪು ಪಾನೀಯಕ್ಕಿಂತಲೂ ಕಡಿಮೆ ದರದಲ್ಲಿ 1ಜಿಬಿ ಡೇಟಾ ಸಿಗುತ್ತಿದೆ. ಬ್ರಾಡ್‌ಬ್ಯಾಂಡ್‌ ಕನೆಕ್ಟಿವಿಟಿಯು ದೇಶದ ಗ್ರಾಮ ಗ್ರಾಮಗಳಿಗೂ ತಲುಪುತ್ತಿದೆ. ಸುಮಾರು 100 ಕೋಟಿ ಮೊಬೈಲ್‌ ಫೋನ್‌ಗಳು ಭಾರತದಲ್ಲಿ ಬಳಕೆಯಲ್ಲಿವೆ' ಎಂದು ಹೇಳಿದರು.

ಮೋದಿ ಹೇಳಿದ ಅವರ ಇಂತಹದೊಂದು ಹೇಳಿಕೆ ದೇಶದೆಲ್ಲೆಡೆ ವೈರಲ್ ಆಗಿತ್ತು. ಒಂದು ಬಾಟಲಿ ತಂಪು ಪಾನೀಯಕ್ಕಿಂತಲೂ ಕಡಿಮೆ ದರದಲ್ಲಿ 1ಜಿಬಿ ಡೇಟಾ ಸಿಗುತ್ತಿದೆ ಎಂಬುದನ್ನು ಜನ ಕೂಡ ಒಪ್ಪಿದರು. ಇಂತಹ ಒಂದು ಕ್ರಾಂತಿಕಾರಿ ಬದಲಾವಣೆ ಭಾರತದ ಟೆಲಿಕಾಂ ಪ್ರಪಂಚದಲ್ಲಿ ನಡೆದದ್ದನ್ನು ಜನರು ಈಗಲೂ ಮರೆತಿಲ್ಲ. ಏಕೆಂದರೆ, ಕೇವಲ ಎರಡು ವರ್ಷಗಳ ಹಿಂದೆ ಇದ್ದಂತಹ ದೇಶದ ಟೆಲಿಕಾಂ ಪರಿಸ್ಥಿತಿಯು ಕಣ್ಣಿಗೆ ಕಟ್ಟಿದಂತೆ ನಮ್ಮ ಕಣ್ಣಮುಂದೆಯೇ ಇತ್ತು.

ತಂಪು ಪಾನೀಯಕ್ಕಿಂತ 1ಜಿಬಿ ಡೇಟಾ ಅಗ್ಗ!.'ಮೋದಿ' ಹೀಗೆ ಹೇಳಲು 8 ಶಾಕಿಂಗ್ ಕಾರಣಗಳು!

ಹೌದು, ಮೋದಿಯವರು ಹೇಳಿದಂತೆ ಇಂದು ದೇಶದಲ್ಲಿ ಡಿಜಿಟಲ್ ಕ್ರಾಂತಿಯೇ ನಡೆದಿದೆ. ಡಿಜಿಟಲ್ ಸೌಕರ್ಯದ ಬೆಳವಣಿಗೆ ದರ ಸಾವಿರಾರು ಪಟ್ಟು ಏರಿಕೆಯಾಗಿದೆ. ಗ್ರಾಹಕರನ್ನು ಸುಲಿಗೆ ಮಾಡುತ್ತಿದ್ದ ಟೆಲಿಕಾಂ ಕಂಪೆನಿಗಳು ಈಗ ಗ್ರಾಹಕರ ಕಾಲ್ಕೆಳಗೆ ಬಿದ್ದಿವೆ. ನಿಜಕ್ಕೂ ಭಾರತದಲ್ಲಿ ಇಂತಹ ಬೆಳವಣಿಗೆ ನಡೆದದ್ದು ಸಾಮಾನ್ಯ ಮಾತೇನಲ್ಲ. ಹಾಗಾಗಿ, ಇಂದಿನ ಲೇಖನದಲ್ಲಿ ಗ್ರಾಹಕರ ರಕ್ತ ಹೀರುತ್ತಿದ್ದ ಟೆಲಿಕಾಂ ಪ್ರಪಂಚದ ಬಗ್ಗೆ ಒಮ್ಮೆ ತಿರುಗಿ ನೋಡಬೇಕು ಎನ್ನುವುದು ನಮ್ಮ ಅಭಿಲಾಷೆ.

ಒಂದು ಜಿಬಿ ಡೇಟಾ ಬೆಲೆ 300 ರೂ.!

ಒಂದು ಜಿಬಿ ಡೇಟಾ ಬೆಲೆ 300 ರೂ.!

ಕೇವಲ ಎರಡು ವರ್ಷಗಳ ಹಿಂದೆ ಭಾರತದಲ್ಲಿ ಒಂದು ಜಿಬಿ ಹೈಸ್ಪೀಡ್ ಡೇಟಾ ಪಡೆಯಲು ಪಾವತಿಸಬೇಕಿದ್ದ ಸರಾಸರಿ ಬೆಲೆ 300 ರೂ.ಗಳು ಎಂದರೆ ಈಗ ಆಶ್ಚರ್ಯವಾಗಬಹುದು. ಈಗ ಒಂದು ಜಿಬಿ ಹೈಸ್ಪೀಡ್ ಡೇಟಾ ಕೇವಲ ಮೂರರಿಂದ ನಾಲ್ಕು ರೂಪಾಯಿಗಳಲ್ಲಿ ಜನರಿಗೆ ಸಿಗುತ್ತಿದೆ. ಕೇವಲ ಡೇಟಾ ಮಾತ್ರವಲ್ಲದೆ, ಉಚಿತ ಕರೆ ಹಾಗೂ ಎಸ್‌ಎಮ್‌ಎಸ್‌ಗಳು ಕೂಡ ಇದೇ ಡೇಟಾದ ಜೊತೆಗೆ ಉಚಿತವಾಗಿದೆ. ಹಾಗಾಗಿ, ಒಂದು ಬಾಟಲಿ ತಂಪು ಪಾನೀಯಕ್ಕಿಂತ 1ಜಿಬಿ ಡೇಟಾ ಅಗ್ಗವೆಂದು 'ಮೋದಿ' ಹೇಳಿದ್ದು ನಿಜವೆನ್ನಲೇಬೇಕು.

ಆಗ ಟೆಲಿಕಾಂ ಆದಾಯ ಎಷ್ಟು ಗೊತ್ತಾ?

ಆಗ ಟೆಲಿಕಾಂ ಆದಾಯ ಎಷ್ಟು ಗೊತ್ತಾ?

ಕಳೆದ ಎರಡು ವರ್ಷಗಳ ಹಿಂದೆ ಒಂದು ವರ್ಷಕ್ಕೆ ಭಾರತದ ಒಟ್ಟು ಟೆಲಿಕಾಂಗಳ ಆದಾಯ ಎಷ್ಟು ಎಂಬುದನ್ನು ನೀವು ಊಹೆ ಮಾಡಲು ಸಾಧ್ಯವಿಲ್ಲಾ. ನಂಬಿದರೆ ನಂಬಿ ಬಿಟ್ಟರೆ ಬಿಡಿ. ಒಂದು ವರದಿಯ ಪ್ರಕಾರ, ಎರಡು ವರ್ಷಗಳ ಹಿಂದೆ ಭಾರತದ ಎಲ್ಲಾ ಟೆಲಿಕಾಂ ಕಂಪೆನಿಗಳ ಒಂದು ವರ್ಷದ ಆದಾಯ ಮೂರು ಲಕ್ಷಕೋಟಿಗೂ (3,00,000cR) ಹೆಚ್ಚು. ಭಾರತೀಯ ಟೆಲಿಕಾಂ ಪ್ರಪಂಚವನ್ನು ಏಕಸ್ವಾಮ್ಯ ಮಾಡಿಕೊಂಡಿದ್ದರ ಪರಿಣಾಮ ಇದು ಎಂದು ಆ ವರದಿ ಹೇಳಿದೆ.

ದಿಕ್ಕುತಪ್ಪಿಸುತ್ತಿದ್ದವು ಟೆಲಿಕಾಂ ಕಂಪೆನಿಗಳು

ದಿಕ್ಕುತಪ್ಪಿಸುತ್ತಿದ್ದವು ಟೆಲಿಕಾಂ ಕಂಪೆನಿಗಳು

ಇಂದು ಟ್ರಾಯ್ ಕೇವಲ ಒಂದು ಟೆಲಿಕಾಂ ಕಂಪೆನಿಗೆ ಸಹಾಯ ಮಾಡುತ್ತಿದೆ ಎಂಬ ಆರೋಪವಿದೆ. ಆದರೆ, ಎರಡು ವರ್ಷಗಳ ಹಿಂದೆ ಟೆಲಿಕಾಂ ಕಂಪೆನಿಗಳು ಟ್ರಾಯ್ ಅನ್ನು ಸಹ ಮೀರಿ ಬೆಳೆದಿದ್ದವು. ಟೆಲಿಕಾಂ ಕಂಪೆನಿಗಳ ಮೇಲೆ ಟ್ರಾಯ್ ನಿಯಂತ್ರಣವಿದ್ದರೂ ಸಹ ಎಲ್ಲಾ ಟೆಲಿಕಾಂಗಳು ಟ್ರಾಯ್ ಅನ್ನು ದಿಕ್ಕುತಪ್ಪಿಸುತ್ತಿದ್ದವು. ತನ್ನ ಗ್ರಾಹಕರಿಗೆ ಇತರ ಉತ್ತಮ ಸೇವೆಗಳನ್ನು ನೀಡುವುದಾಗಿ ಹೇಳಿ ಅವರಿಂದ ಟೆಲಿಕಾಂ ಕಂಪೆನಿಗಳು ಹೆಚ್ಚು ಹಣ ಪೀಕುತ್ತಿದ್ದವು ಎಂದು ಸ್ವತಃ ಟ್ರಾಯ್ ಹೇಳಿಕೊಂಡಿದ್ದು ನಿಮಗೆ ತಿಳಿದಿರಬಹುದು.

ಗ್ರಾಹಕರ ಜೇಬಿಗೆ ಕನ್ನ

ಗ್ರಾಹಕರ ಜೇಬಿಗೆ ಕನ್ನ

ಮೊಬೈಲ್‌ ಬಳಕೆದಾರರ ರೀಚಾರ್ಜ್ ಮಾಡಿಸುವಾಗ ತೆರಬೇಕಿದ್ದ ಹಣ ಒಂದೆಡೆಯಾದರೆ, ಮೊಬೈಲ್‌ನಲ್ಲಿ ಮಾತನಾಡುವಾಗ ಕರೆಕಡಿತದಂತಹ ಲೋಪಗಳಿಂದಲೂ ಟೆಲಿಕಾಂ ಕಂಪೆನಿಗಳು ದುಡ್ಡು ಮಾಡಿಕೊಳ್ಳುತ್ತಿದ್ದವು. ಆಗಿದ್ದ ರೇಡಿಯೋ ಲಿಂಕ್ ತಂತ್ರಜ್ಞಾನವನ್ನು ತಮಗೆ ಬೇಕಾದಂತೆ ಮಾರ್ಪಡಿಸಿಕೊಂಡ ಟೆಲಿಕಾಂ ಕಂಪೆನಿಗಳು ಕರೆ ಕಡಿತವಾಗಿದ್ದರೂ ಅದು ಚಾಲನೆಯಲ್ಲೇ ಇರುವಂತೆ ತೋರಿಸಿ ಗ್ರಾಹಕರ ಜೇಬಿಗೆ ಕನ್ನ ಹಾಕುತದತಿದ್ದವು. ಒಂದು ಮಾಹಿತಿಯಂತೆ ಇದರಿಂದ ಅವುಗಳಿಗೆ ಸಿಗುತ್ತಿದ್ದ ಆದಾಯವೇ ಪ್ರತಿದಿನ 50 ಕೋಟಿಗೂ ಹೆಚ್ಚಿತ್ತಂತೆ.

ದಿನವೊಂದರ ಗಳಿಕೆ 250 ಕೋಟಿ ರೂ.

ದಿನವೊಂದರ ಗಳಿಕೆ 250 ಕೋಟಿ ರೂ.

ಇಂದು ನಿವ್ವಳ ಲಾಭದಲ್ಲಿ ಸಾವಿರಾರು ಕೋಟಿ ಇಳಿಕೆ ಕಂಡಿರುವ ಟೆಲಿಕಾಂ ಕಂಪೆನಿಗಳು ಅಂದು ಒಂದು ದಿನಕ್ಕೆ ಗಳಿಸುತ್ತಿದ್ದ ಆದಾಯ ಎಷ್ಟು ಎಂಬುದನ್ನು ಕೇಳಿದರೆ ನೀವು ದಂಗಾಗಬಹುದು. ಏಕೆಂದರೆ, ಕರೆ ಕಡಿತದ ಕ್ರಮಕ್ಕೆ ಟೆಲಿಕಾಂ ಕಂಪೆನಿಗಳಿಗೆ ಟ್ರಾಯ್ ದಂಡ ವಿಧಿಸುವ ಪ್ರಸ್ತಾಪಕ್ಕೆ ಸಂಬಂಧಿಸಿದ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಮುಕುಲ್ ರೋಹಟಗಿ ಅವರು ನೀಡಿದ ಮಾಹಿತಿಯಂತೆ, ಟೆಲಿಕಾಂ ಕಂಪೆನಿಗಳ ದಿನವೊಂದರ ಸರಾಸರಿ ಗಳಿಕೆ 250 ಕೋಟಿ ರೂಪಾಯಿಗಳಿಗೂ ಹೆಚ್ಚು.!

ಟೆಲಿಕಾಂ ಏಕಸ್ವಾಮ್ಯವಾಗಿತ್ತು.!

ಟೆಲಿಕಾಂ ಏಕಸ್ವಾಮ್ಯವಾಗಿತ್ತು.!

ಇಂದು ಜಿಯೋ ಭಾರತದ ಟೆಲಿಕಾಂ ಅನ್ನು ಏಕಸ್ವಾಮ್ಯ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ, ಎರಡು ವರ್ಷಗಳ ಹಿಂದೆ ಒಂದೇ ಒಂದು ಟೆಲಿಕಾಂ ಕಂಪೆನಿ ತನ್ನ ತೆಕ್ಕೆಯಲ್ಲಿ ಭಾರತದ ಟೆಲಿಕಾಂ ಅನ್ನು ಹಿಡಿದಿಟ್ಟುಕೊಂಡಿತ್ತು. ಈ ಒಂದು ಕಂಪೆನಿಯನ್ನೇ ಹಹಿಂಬಾಲಿಸುತ್ತಿದ್ದ ಇತರೆ ಟೆಲಿಕಾಂ ಕಂಪೆನಿಗಳು ಸಹ ಸೇವೆಯ ಹೆಸರಿನಲ್ಲಿ ಒಂದೇ ಬಗೆಯಲ್ಲಿ ಕಾರ್ಯನಿರ್ವಹಣೆ ನೀಡುತ್ತಿದ್ದವು. ಇದರಿಂದ ಗ್ರಾಹಕನಿಗೆ ಆಯ್ಕೆಗಳೇ ಇಲ್ಲದ ಸ್ಥಿತಿ ಎದುರಾಗಿತ್ತು ಎಂದರೆ ತಪ್ಪಾಗುವುದಿಲ್ಲ ಎನ್ನುವುದು ನನ್ನ ಅಭಿಪ್ರಾಯ.

ಮೂಲ ಸೌಕರ್ಯಕ್ಕೆ ಹೂಡಿಕೆ ಮಾಡಿರಲಿಲ್ಲ!

ಮೂಲ ಸೌಕರ್ಯಕ್ಕೆ ಹೂಡಿಕೆ ಮಾಡಿರಲಿಲ್ಲ!

ಎರಡು ವರ್ಷಗಳ ಹಿಂದೆಯೇ ಭಾರತದಲ್ಲಿದ್ದ ಮೊಬೈಲ್ ಸಂಪರ್ಕಗಳ ಸಂಖ್ಯೆ 96.2 ಕೋಟಿಯಾಗಿತ್ತು. ಆದರೆ, ಇಷ್ಟು ದೊಡ್ಡದ ಟೆಲಿಕಾಂ ಇದ್ದರೂ ಕೂಡ ಯಾವುದೇ ಟೆಲಿಕಾಂ ಕಂಪೆನಿ ಕೂಡಾ ಕರೆಗಳ ಗುಣಮಟ್ಟವನ್ನು ಉತ್ತಮ ಪಡಿಸುವ ಹೂಡಿಕೆಗೆ ಸಿದ್ಧವಿಲ್ಲ ಎಂದು ವರದಿಯೊಂದು ಹೇಳಿತ್ತು. 300ರಿಂದ 900 ಮೆಗಾಹರ್ಟ್ಸ್ ಕಂಪನಾಂಕದ ತರಂಗಗಳಲ್ಲಿ ಕರೆಯಗುಣಮಟ್ಟ ಚೆನ್ನಾಗಿರುತ್ತದೆ ಎಂದು ತಿಳಿದಿದ್ದರೂ ಆ ತರಂಗಗಳ ಖರೀದಿಗೆ ಯಾವ ಟೆಲಿಕಾಂ ಕಂಪೆನಿಯೂ ಮುಂದೆ ಬರಲಿಲ್ಲ. ಏಕೆಂದರೆ, ಗ್ರಾಹಕರಿಂದ ಹಣ ಪೀಕಲು ಹೆಚ್ಚು ವೆಚ್ಚ ಮಾಡಲು ಯಾವ ಟೆಲಿಕಾಂ ಕಂಪೆನಿಗಳಿಗೂ ಇಷ್ಟವಿರಲಿಲ್ಲ.

ಶೇ. 80% ರಷ್ಟು ಬೆಲೆ ಇಳಿಕೆ

ಶೇ. 80% ರಷ್ಟು ಬೆಲೆ ಇಳಿಕೆ

ಎರಡು ವರ್ಷಗಳ ಹಿಂದೆ ಜಿಯೋ ಭಾರತದ ಟೆಲಿಕಾಂ ಮಾರುಕಟ್ಟೆಗೆ ಕಾಲಿಟ್ಟಿತು. ಟೆಲಿಕಾಂಗೆ ಜಿಯೋ ಪ್ರವೇಶ ಮಾಡಿದ ನಂತರ ಜನರ ದುಡ್ಡನ್ನು ನುಂಗಿ ನೀರುಕುಡಿಯುತ್ತಿದ್ದ ಉಳಿದ ಟೆಲಿಕಾಂ ಕಂಪೆನಿಗಳ ಸೇವೆಗಳ ಬೆಲೆಗಳು ಶೇ 80% ರಷ್ಟು ಇಳಿಕೆಯಾಯಿತು. ಒಂದು GB ಡೇಟಾಗೆ 300 ರಿಂದ 400ರೂಪಾಯಿಗಳನ್ನು ಪೀಕುತ್ತಿದ್ದ ಕಂಪೆನಿಗಳು ಇದೀಗ 2 ರಿಂದ 3 ರೂಪಾಯಿಗೆ ಒಂದು GB ಡೇಟಾ ನೀಡುತ್ತಿವೆ.ಈಗ ಏನಿದ್ದರೂ ಅನ್‌ಲಿಮಿಟೆಡ್ ಸೇವೆಗಳದ್ದೇ ಜಮಾನವಾಗಿದ್ದು, ಗ್ರಾಹಕರು ಅತ್ಯುತ್ತಮ ದರದಲ್ಲಿ ಹೆಚ್ಚು ಸೇವೆಯನ್ನು ಪಡೆಯುತ್ತಿರುವುದನ್ನು ನೀವು ನೋಡಬಹುದು.

ಭಾರತೀಯರಿಂದ ಚೀನಾ ಮೊಬೈಲ್ ಕಂಪೆನಿಗಳು ದೋಚಿದ ಹಣವೆಷ್ಟು ಗೊತ್ತಾ?..ಶಾಕ್ ಆಗ್ತೀರಾ!!

ಭಾರತೀಯರಿಂದ ಚೀನಾ ಮೊಬೈಲ್ ಕಂಪೆನಿಗಳು ದೋಚಿದ ಹಣವೆಷ್ಟು ಗೊತ್ತಾ?..ಶಾಕ್ ಆಗ್ತೀರಾ!!

ಚೀನಾ ಕಂಪೆನಿಗಳ ಮೊಬೈಲ್‌ಗಳನ್ನು ಯಾವುದೇ ಕಾರಣಕ್ಕೂ ಖರೀದಿಸುವುದಿಲ್ಲ ಎನ್ನುವವರ ಸಂಖ್ಯೆ ಕಡಿಮೆಯಿಲ್ಲ. ಆದರೆ, ಅತ್ಯಂತ ಕಡಿಮೆ ಬೆಲೆಯಲ್ಲಿ ಉತ್ತಮ ಫೀಚರ್ಸ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತಿರುವ ಚೀನಾ ಮೊಬೈಲ್ ಕಂಪೆನಿಗಳಿಗೆ ಮನಸೋತ ಭಾರತೀಯರು, ಒಂದೇ ವರ್ಷದಲ್ಲಿ ಸಾವಿರಾರು ಕೋಟಿ ಹಣವನ್ನು ಅವುಗಳ ಬಾಯಿಗೆ ಸುರಿದಿದ್ದಾರೆ.

ಹೌದು, ವಿಶ್ವದ ಮೊಬೈಲ್ ಮಾರುಕಟ್ಟೆಯ ಬಗ್ಗೆ ಅಧ್ಯಯನ ನಡೆಸುವ ಕೌಂಟರ್ ಪಾಯಿಂಟ್ ಬಿಡುಗಡೆ ಮಾಡಿರುವ ವರದಿಯೊಂದರ ಪ್ರಕಾರ ಇಂತಹ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. 2017-18ನೇ ಸಾಲಿನ ಆರ್ಥಿಕ ವರ್ಷದಲ್ಲಿ ಭಾರತೀಯರು ಚೀನಾದ ಕಂಪನಿಗಳ ಮೊಬೈಲ್‌ಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದಾರೆ ಎಂದು ಅಂದಾಜಿಸಿದೆ.

ದೇಶದ ನಂ.1 ಮೊಬೈಲ್ ಕಂಪೆನಿ ಶಿಯೋಮಿ ಸೇರಿದಂತೆ ಒನ್ಪ್ಲಸ್, ಹುವಾವೆ, ಹಾನರ್, ವಿವೋ, ಒಪ್ಪೋ, ಲೆನೊವೊ, ಮತ್ತು ಮೊಟೊ ಕಂಪನಿಯ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿವೆ ಎಂದು ತಿಳಿದುಬಂದಿದೆ. ಹಾಗಾದರೆ, ಭಾರತೀಯರು ಯಾವ ಯಾವ ಚೀನಾ ಕಂಪೆನಿಗಳಿಗೆ ಎಷ್ಟು ಹಣ ಸುರಿದಿದ್ದಾರೆ ಎಂಬುದನ್ನು ಮುಂದೆ ಓದಿರಿ.

ಚೀನೀ ಕಂಪೆನಿಗಳ ಪ್ರಾಬಲ್ಯ!

ಚೀನೀ ಕಂಪೆನಿಗಳ ಪ್ರಾಬಲ್ಯ!

ವಿಶ್ವದಲ್ಲಿಯೇ ಎರಡನೇ ಅತಿ ದೊಡ್ಡ ಮೊಬೈಲ್ ಮಾರುಕಟ್ಟೆಯನ್ನು ಹೊಂದಿರುವ ಭಾರತದಲ್ಲಿ ಚೀನಾ ಮೊಬೈಲ್ ಕಂಪೆನಿಗಳು ಪ್ರಾಬಲ್ಯ ಮೆರೆದಿವೆ. ಅಂದಾಜು 1 ಲಕ್ಷ ಕೋಟಿ ಮೊಬೈಲ್ ಮಾರುಕಟ್ಟೆಯಲ್ಲಿ ಚೀನಾ ಮೊಬೈಲ್ ಕಂಪೆನಿಗಳು ಬಹುಪಾಲು ಮಾರುಕಟ್ಟೆಯನ್ನು ವಶಪಡಿಸಿಕೊಂಡಿದ್ದು, ವರ್ಷದಿಂದ ವರ್ಷಕ್ಕೆ ಅವುಗಳ ಪ್ರಾಬಲ್ಯ 10 ರಿಂದ 11 ಪರ್ಸೆಂಟ್ ಏರಿಕೆಯಾಗುತ್ತಿದೆ.

ಮಾರುಕಟ್ಟೆಯಲ್ಲಿ 50% ಕ್ಕಿಂತ ಹೆಚ್ಚು!

ಮಾರುಕಟ್ಟೆಯಲ್ಲಿ 50% ಕ್ಕಿಂತ ಹೆಚ್ಚು!

ಚೀನಾದ ನಾಲ್ಕು ಪ್ರಮುಖ ಕಂಪೆನಿಗಳಾದ ಶಿಯೋಮಿ, ಒಪ್ಪೊ, ವಿವೊ ಮತ್ತು ಹಾನರ್ ಕಂಪೆನಿಗಳು ದೇಶದ ಮೊಬೈಲ್ ಮಾರುಕಟ್ಟೆಯಲ್ಲಿ 50,000 ಕೋಟಿ ವ್ಯವಹಾರ ನಡೆಸಿವೆ. ಇನ್ನು ಒನ್‌ಪ್ಲಸ್, ಮೊಟೊನಂತಹ ಚೀನಾ ಮೊಬೈಲ್‌ ಕಂಪೆನಿಗಳು ಸಹ ಸೇರಿದರೆ ದೇಶದ ಮೊಬೈಲ್ ಮಾರುಕಟ್ಟೆಯಲ್ಲಿ ಶೇ.50% ಪರ್ಸೆಂಟ್ ಪಾಲನ್ನು ಚೀನಾ ಕಂಪೆನಿಗಳೇ ಹೊಂದಿವೆ.

ವರ್ಷದಲ್ಲೇ 2 ಪಟ್ಟು ಹೆಚ್ಚಾಯ್ತು!

ವರ್ಷದಲ್ಲೇ 2 ಪಟ್ಟು ಹೆಚ್ಚಾಯ್ತು!

2016-17ರ ಆರ್ಥಿಕ ವರ್ಷದಲ್ಲಿ ಚೀನಾ ಸ್ಮಾರ್ಟ್‌ಫೋನ್‌ಗಳಿಗೆ ಭಾರತೀಯರು 26,262.4 ಕೋಟಿ ರೂಪಾಯಿ ವ್ಯಯಿಸಿದ್ದಾರೆ. ಆದರೆ, ಈ2017-18ರ ಅವಧಿಯಲ್ಲಿ ಒಟ್ಟು 51,722.1 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ, ಚೀನಾ ಮೊಬೈಲ್ ಕಂಪೆನಿಗಳು ಒಂದೇ ವರ್ಷದಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟವನ್ನು ದ್ವಿಗುಣಮಾಡಿಕೊಂಡಿವೆ ಎಂದು ವರದಿ ತಿಳಿಸಿದೆ.

ಯಾವ ಕಂಪೆನಿ ಎಷ್ಟು ಆದಾಯ ಗಳಿಸಿದೆ?

ಯಾವ ಕಂಪೆನಿ ಎಷ್ಟು ಆದಾಯ ಗಳಿಸಿದೆ?

ಭಾರತದ ನಂ.1 ಮೊಬೈಲ್ ಕಂಪೆನಿ ಶಿಯೋಮಿ ದೇಶದಲ್ಲಿ 22,947.3 ಕೋಟಿ ರೂ. ವಹಿವಾಟು ನಡೆಸುವ ಮೂಲಕ ಪ್ರಥಮ ಸ್ಥಾನಗಳಿಸಿದೆ. ಎರಡನೇ ಸ್ಥಾನದಲ್ಲಿ ಒಪ್ಪೋ ಕಂಪನಿಯು 11,994.3 ಕೋಟಿ ರೂ. ವಹಿವಾಟು ನಡೆಸಿದೆ. ವಿವೋ 11,179.3 ಕೋಟಿ ರೂ. ವ್ಯಾಪಾರ ನಡೆಸಿದ್ದರೆ, ಪ್ರಖ್ಯಾತ ಬ್ರ್ಯಾಂಡ್ ಹುವಾವೆ ಕಂಪೆನಿ 5,601.3 ಕೋಟಿ ರೂ. ವಹಿವಾಟು ನಡೆಸಿದೆ.

ಬಜೆಟ್ ಫೋನ್‌ಗಳ ಮೇಲೆ ಹಿಡಿತ!

ಬಜೆಟ್ ಫೋನ್‌ಗಳ ಮೇಲೆ ಹಿಡಿತ!

ಶಿಯೋಮಿ ಕಂಪೆನಿ .6,000-13,000 ಬೆಲೆಯ ಮೊಬೈಲ್‌ಗಳ ಮೇಲೆ ಹಿಡಿತ ಸಾಧಿಸಿದರೆ, ಒಪ್ಪೊ ಮತ್ತು ವಿವೊ ಕ್ರಮವಾಗಿ 10,000-22,000 ರೂ. ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಹೆಚ್ಚು ಮಾರಾಟ ಮಾಡಿವೆ. ಹಾನರ್ ಕಂಪೆನಿ ಕೂಡ 8,000-12,000 ವಿಭಾಗದಲ್ಲಿ ಹೆಚ್ಚು ಪಾಲನ್ನು ಪಡೆದಿದೆ. ಇವುಗಳ ಮಧ್ಯೆ ಕೊರಿಯಾದ ಸ್ಯಾಮ್‌ಸಂಗ್ ಮಾತ್ರ ಹೆಚ್ಚು ಹೋರಾಟ ಮಾಡಿದೆ.

ಪ್ರೀಮಿಯಮ್‌ನಲ್ಲಿ ಒನ್‌ಪ್ಲಸ್!

ಪ್ರೀಮಿಯಮ್‌ನಲ್ಲಿ ಒನ್‌ಪ್ಲಸ್!

ಮಧ್ಯಮ ಬಜೆಟ್ ಸ್ಮಾರ್ಟ್‌ಪೋನ್ ಮಾರುಕಟ್ಟೆಯಲ್ಲಿ ಇವುಗಳ ಪಾಲು ಹೆಚ್ಚಿದ್ದರೆ, ಪ್ರೀಮಿಯಮ್ ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಒನ್‌ಪ್ಲಸ್ ಕಂಪೆನಿ ಮಿಂಚುತ್ತಿದೆ. ಈ ವರ್ಷ ಸತತ ಎರಡು ತ್ರೈಮಾಸಿಕಗಳಿದಲೂ ರೂ 30,000-ಪ್ಲಸ್ ವಿಭಾಗದಲ್ಲಿ ನಾಯಕತ್ವವನ್ನು ಉಳಿಸಿಕೊಳ್ಳುವಲ್ಲಿ ಒನ್‌ಪ್ಲಸ್ ಯಶಸ್ವಿಯಾಗಿದೆ. ಭಾರತ ಈ ಬ್ರಾಂಡ್‌ಗೆ ಅತಿ ದೊಡ್ಡ ಮಾರುಕಟ್ಟೆಯಾಗಿದೆ.

ಸ್ಯಾಮ್‌ಸಂಗ್ ಕಥೆ ಗೊತ್ತಿಲ್ಲ!

ಸ್ಯಾಮ್‌ಸಂಗ್ ಕಥೆ ಗೊತ್ತಿಲ್ಲ!

ಕೊರಿಯಾದ ಸ್ಯಾಮ್‌ಸಂಗ್ 2016-17ರ ಸಾಲಿನಲ್ಲಿ 34,261 ಕೋಟಿ ರೂ.ವ್ಯವಹಾರ ನಡೆಸಿದೆ. ಆದರೆ, 2018ರ ಆರ್ಥಿಕ ಸಾಲಿನ ಸ್ಯಾಮ್‍ಸಂಗ್ ಹಾಗೂ ಲೆನೆವೊ ಕಂಪನಿಗಳ ಮಾಹಿತಿಗಳು ಲಭ್ಯವಾಗಿಲ್ಲ. ಇನ್ನು 2018ನೇ ಆರ್ಥಿಕ ಸಾಲಿನಲ್ಲಿ ಆಪಲ್ 13,097 ಕೋಟಿ ರೂ. ವಹಿವಾಟನ್ನು ಭಾರತದ ಮಾರುಕಟ್ಟೆಯಲ್ಲಿ ನಡೆಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

Most Read Articles
Best Mobiles in India

English summary
Prime Minister Narendra Modi on a visit to Japan on Monday hailed India's "tremendous progress" in the digital infrastructure, saying 1 GB data. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more