ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

|

ರೆಡ್ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಪೋನ್‌ಗಳಿಂದ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ ನೋಟ್‌ 11SE ಅನ್ನು ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ಅಡಾಪ್ಟಿವ್‌ಸಿಂಕ್ ತಂತ್ರಜ್ಞಾನವನ್ನು ಹೊಂದಿರುವ ಡಿಸ್‌ಪ್ಲೇಯನ್ನು ಹೊಂದಿದೆ.

 ರೆಡ್ಮಿ ನೋಟ್‌ 11SE

ಹೌದು, ರೆಡ್ಮಿ ಕಂಪೆನಿ ಹೊಸ ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡೀಪ್‌ ಸ್ಪೇಸ್‌ ಬ್ಲೂ ಮತ್ತು ಶ್ಯಾಡೋ ಬ್ಲಾಕ್‌ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಅಡಾಪ್ಟಿವ್‌ಸಿಂಕ್ ಟೆಕ್ನಾಲಜಿ ಹೊಂದಿರುವ 6.5 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 30Hz, 50Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸುವುದಕ್ಕೆ ಅವಕಾಶವಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಎರಡೂ ಕ್ಯಾಮೆರಾ ಸೆಟಪ್‌ಗಳು 30 fps ನಲ್ಲಿ ಫುಲ್‌ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.1 ಮತ್ತು ಡ್ಯುಯಲ್-ಬ್ಯಾಂಡ್ ವೈ-ಫೈನೊಂದಿಗೆ ಬರುತ್ತದೆ. ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಅಧಿಕೃತ ಶಿಯೋಮಿ ಚೀನಾ ಸೈಟ್‌ನಲ್ಲಿ ಚೀನಾದಲ್ಲಿ ಫ್ರೀ-ಆರ್ಡರ್ ಮಾಡಲು ಲಭ್ಯವಿದೆ. ಇದು ಮೇ 31 ರಂದು ಚೀನಾದಲ್ಲಿ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB RAM + 12GB ಸ್ಟೋರೇಜ್ ಮಾದರಿಗೆ CNY 1,099 (ಅಂದಾಜು 13,000ರೂ.) ಮತ್ತು 8GB RAM + 128GB ಸ್ಟೋರೇಜ್ ಮಾದರಿಗೆ CNY 1,399 (ಅಂದಾಜು 16,000ರೂ) ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡೀಪ್ ಸ್ಪೇಸ್ ಬ್ಲೂ ಮತ್ತು ಶ್ಯಾಡೋ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

Read more about:
English summary
Redmi Note 11SE also sports a 6.5-inch full-HD+ display with AdaptiveSync technology.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X