Home
ಸುದ್ದಿಜಾಲ

ಪ್ರತಿದಿನ 2GB ಡೇಟಾ ಬೇಕಿದ್ದರೆ, ಸದ್ಯ ಇವೇ ಬೆಸ್ಟ್‌ ಪ್ಲ್ಯಾನ್‌ಗಳು!

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳು ಸಂಪೂರ್ಣ ಇಂಟರ್ನೆಟ್ ಆಧಾರಿತವಾಗಿದ್ದು, ನೆಟ್‌ ಇಲ್ಲದಿದ್ದರೇ ಫೋನ್ ಖಾಲಿ ಡಬ್ಬ ಇದ್ದಂತೆ ಎನ್ನುವ ಸ್ಥಿತಿ ಇದೆ. ಹೀಗಾಗಿ ಪ್ರತಿಯೊಬ್ಬ ಬಳಕೆದಾರರು ಅಧಿಕ ಡೇಟಾ ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಇರುವ ಪ್ಲ್ಯಾನ್‌ ಆಯ್ಕೆ ಮಾಡಿಕೊಳ್ಳಲು ಮುಂದಾಗುತ್ತಾರೆ. ಆದ್ರೆ ಕಳೆದ ಡಿಸೆಂಬರನಲ್ಲಿ ಖಾಸಗಿ ಟೆಲಿಕಾಂಗಳ ಪ್ರೀಪೇಯ್ಡ್‌ ಬೆಲೆಯಲ್ಲಿ ಏರಿಕೆ ಆಗಿದ್ದು, ಗ್ರಾಹಕರಿಗೆ ಹೊರೆ ಅನಿಸಿದೆ. ಈ ನಿಟ್ಟಿನಲ್ಲಿ ಟೆಲಿಕಾಂ ಸಂಸ್ಥೆಗಳು ಕೆಲವು ಆಕರ್ಷಕ ಡೇಟಾ ಪ್ರಯೋಜನಗಳ ಪ್ಲ್ಯಾನ್‌ ಪರಿಚಯಿಸಿದವು.

ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್

ಸದ್ಯ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳು ಪ್ರತಿದಿನ 1GB, 1.5GB ಮತ್ತು 2GB ಪ್ರಯೋಜನಗಳ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರು ಪ್ರತಿದಿನ 1.5GB ಬಯಸಿದರೇ, ಇನ್ನು ಕೆಲವು ಚಂದಾದಾರರಿಗೆ ಪ್ರತಿದಿನ 2GB ಡೇಟಾ ಅಗತ್ಯವಾಗಿದೆ. ಡೇಟಾ ಜೊತೆಗೆ ಉಚಿತ ವಾಯಿಸ್‌ ಕರೆ ಮತ್ತು ಅಧಿಕ ವ್ಯಾಲಿಡಿಟಿ ಇದ್ದರೇ ಸಾಕು ಎನ್ನುತ್ತಾರೆ. ಹೀಗಾಗಿ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳ ಪ್ರತಿದಿನ 2GB ಡೇಟಾ ಸೌಲಭ್ಯ ನೀಡುವ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ 249ರೂ. ಪ್ಲ್ಯಾನ್

ಜಿಯೋ 249ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ಜಿಯೋ 444ರೂ. ಪ್ಲ್ಯಾನ್

ಜಿಯೋ 444ರೂ. ಪ್ಲ್ಯಾನ್

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 2,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ ಪೂರ್ಣ ಅವಧಿಗೆ ಒಟ್ಟು 2000ಎಸ್ಎಮ್ಎಸ್‌ಗಳ ಪ್ರಯೋಜನ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 1.2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಏರ್‌ಟೆಲ್ 298ರೂ. ಪ್ಲ್ಯಾನ್

ಏರ್‌ಟೆಲ್ 298ರೂ. ಪ್ಲ್ಯಾನ್

ಏರ್‌ಟೆಲ್‌ನ 298ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 349ರೂ. ಪ್ಲ್ಯಾನ್‌

ಏರ್‌ಟೆಲ್‌ನ 349ರೂ. ಪ್ಲ್ಯಾನ್‌

ಏರ್‌ಟೆಲ್‌ನ 349ರೂ. ಪ್ರೀಪೇಡ್‌ ಪ್ಲ್ಯಾನ್‌ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್ 449ರೂ. ಪ್ಲ್ಯಾನ್

ಏರ್‌ಟೆಲ್ 449ರೂ. ಪ್ಲ್ಯಾನ್

ಏರ್‌ಟೆಲ್‌ನ 449ರೂ. ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ವೊಡಾಫೋನ್ 299ರೂ. ಪ್ಲ್ಯಾನ್

ವೊಡಾಫೋನ್ 299ರೂ. ಪ್ಲ್ಯಾನ್

ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 499ರೂ. ಪ್ಲ್ಯಾನ್

ವೊಡಾಫೋನ್ 499ರೂ. ಪ್ಲ್ಯಾನ್

ವೊಡಾಫೋನಿನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 699ರೂ. ಪ್ಲ್ಯಾನ್

ವೊಡಾಫೋನ್ 699ರೂ. ಪ್ಲ್ಯಾನ್

ವೊಡಾಫೋನಿನ 699ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಒಟ್ಟು 168GB ಡೇಟಾ ಲಭ್ಯ.

Best Mobiles in India

English summary
Jio's 2GB data per day prepaid recharges are priced on the lower side when we compare them to those of Bharti Airtel and Vodafone.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+