ಡೈಲಿ 3GB ಡೇಟಾ ಅಗತ್ಯವಿದ್ದರೆ, ಇಲ್ಲಿವೆ ನೋಡಿ ಬೆಸ್ಟ್ ಪ್ಲ್ಯಾನ್‌ಗಳು!
ಸದ್ಯ ಸ್ಮಾರ್ಟ್‌ಫೋನ್‌ಗಳು ಸಂಪೂರ್ಣ ಇಂಟರ್ನೆಟ್ ಮಯವಾಗಿದ್ದು, ಬಹುತೇಕ ಕೆಲಸಗಳು ಇಂಟರ್ನೆಟ್ ಮೂಲಕವೇ ನಡೆಯುತ್ತವೆ. ಹೀಗಾಗಿ ಪ್ರತಿಯೊಬ್ಬರು ಅಗತ್ಯ ಡೇಟಾ ಯೋಜನೆ ರೀಚಾರ್ಜ್ ಮಾಡಿಸಿಕೊಳ್ಳುತ್ತಾರೆ. ಅವರಲ್ಲಿ ಬಹುತೇಕ ಬಳಕೆದಾರರು ಅಧಿಕ ಡೇಟಾ ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಇರುವ ಪ್ಲ್ಯಾನ್ ಆಯ್ಕೆ ಮಾಡಿಕೊಳ್ಳಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಟೆಲಿಕಾಂ ಸಂಸ್ಥೆಗಳು ಕೆಲವು ಅಧಿಕ ಡೇಟಾ ಪ್ರಯೋಜನಗಳ ಪ್ಲ್ಯಾನ್ ಪರಿಚಯಿಸಿ ಗ್ರಾಹಕರನ್ನು ಸೆಳೆಯುತ್ತಿವೆ.

ಹೌದು, ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳು ಪ್ರತಿದಿನ 1GB, 2GB ಮತ್ತು 3GB ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳಲ್ಲಿ ಹೆಚ್ಚಿನ ಚಂದಾದಾರರು ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಪ್ಲ್ಯಾನ್‌ನತ್ತ ಗಮನ ನೀಡುತ್ತಾರೆ. ಮುಖ್ಯವಾಗಿ ಹೆಚ್ಚಾಗಿ ಇಂಟರ್ನೆಟ್ ಬಳಕೆ ಮಾಡುವ ಗ್ರಾಹಕರು ಪ್ರತಿದಿನ ದೀರ್ಘ ವ್ಯಾಲಿಡಿಟಿ ಜೊತೆಗೆ 3GB ಡೇಟಾ ಪ್ರಯೋಜನದ ಯೋಜನೆಗಳನ್ನು ರೀಚಾರ್ಜ್ ಮಾಡಿಸುತ್ತಾರೆ. ಹೀಗೆ ಪ್ರತಿದಿನ 3GB ಡೇಟಾ ಸೌಲಭ್ಯ ಪಡೆದ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಟೆಲಿಕಾಂಗಳ ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋ 349ರೂ. ಪ್ಲ್ಯಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.

ಜಿಯೋ 999ರೂ.ಪ್ಲ್ಯಾನ್
ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೆ 3,000 ನಿಮಿಷಗಳ ಮಿತಿ ಇರಲಿದೆ. ಇದರೊಂದಿಗೆ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ವೊಡಾಫೋನ್ 299ರೂ. ಪ್ಲ್ಯಾನ್
ವೊಡಾಫೋನಿನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಲಭ್ಯವಿತ್ತು. ಆದ್ರೆ ಈಗ ಈ ಪ್ಲ್ಯಾನ್ ಡಬಲ್ ಡೇಟಾ ಆಫರ್ ಪಡೆದಿದ್ದು, ಹೀಗಾಗಿ 4GB ಡೇಟಾ ಲಭ್ಯವಾಗಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 499ರೂ. ಪ್ಲ್ಯಾನ್
ವೊಡಾಫೋನಿನ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಆದ್ರೆ ಈಗ ಈ ಪ್ಲ್ಯಾನ್ ಡಬಲ್ ಡೇಟಾ ಆಫರ್ ಪಡೆದಿದ್ದು, ಹೀಗಾಗಿ 4GB ಡೇಟಾ ಲಭ್ಯವಾಗಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ 699ರೂ. ಪ್ಲ್ಯಾನ್
ವೊಡಾಫೋನಿನ 699ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಹೊಂದಿದೆ. ಆದ್ರೆ ಈಗ ಈ ಪ್ಲ್ಯಾನ್ ಡಬಲ್ ಡೇಟಾ ಆಫರ್ ಪಡೆದಿದ್ದು, ಹೀಗಾಗಿ 4GB ಡೇಟಾ ಲಭ್ಯವಾಗಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್ 401ರೂ.ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಿರುವುದಿಲ್ಲ.


Click it and Unblock the Notifications








