Home
ಸುದ್ದಿಜಾಲ

ಬಜೆಟ್‌ ಬೆಲೆಗೆ ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಬೇಕಿದ್ರೆ, ಇನ್ನು ತಡ ಮಾಡಬೇಡಿ!

ಇಂದಿನ ಬಹುತೇಕ ಸ್ಮಾರ್ಟ್‌ಫೋನ್‌ಗಳು ಅತ್ಯುತ್ತಮ ಕ್ಯಾಮೆರಾ ಆಯ್ಕೆ ಹೊಂದಿರುತ್ತವೆ. ಅದರಲ್ಲಿಯೂ ಹಿಂಬದಿಯ ಪ್ರಾಥಮಿಕ ಕ್ಯಾಮೆರಾ ಅಧಿಕ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿರುತ್ತವೆ. ಮುಖ್ಯವಾಗಿ 50 ಮೆಗಾ ಪಿಕ್ಸಲ್‌ ಅಥವಾ 64 ಮೆಗಾ ಪಿಕ್ಸಲ್‌ ಅಥವಾ 108 ಮೆಗಾ ಪಿಕ್ಸಲ್‌ ಹೀಗೆ ಇರುತ್ತವೆ. ಇದರೊಂದಿಗೆ ಸೆಲ್ಫಿ ಪ್ರಿಯರಿಗಾಗಿ ಮುಂಭಾಗದಲ್ಲಿಯೂ ಅತ್ಯುತ್ತಮ ಕ್ಯಾಮೆರಾ ಸೆನ್ಸಾರ್‌ ಆಯ್ಕೆ ಸಹ ಒಳಗೊಂಡಿರುತ್ತವೆ.

ಹೌದು, ಸೆಲ್ಫಿ ಕ್ಯಾಮೆರಾಗಳು ಉನ್ನತ ಸೆನ್ಸಾರ್ ಹೊಂದಿದ್ದರೆ, ಫೋಟೊಗಳನ್ನು ಅತ್ಯುತ್ತಮವಾಗಿ ಮೂಡಿಬರುತ್ತವೆ. ಈ ನಿಟ್ಟಿನಲ್ಲಿ ಬಜೆಟ್‌ ದರದ ಕೆಲವು ನೂತನ ಫೋನ್‌ಗಳು 13 ಮೆಗಾ ಪಿಕ್ಸಲ್‌ ಹಾಗೂ 16 ಮೆಗಾ ಪಿಕ್ಸಲ್‌ ಆಯ್ಕೆಯನ್ನು ಒಳಗೊಂಡಿವೆ. ಅದಾಗ್ಯೂ, ಕನಿಷ್ಠ 16 ಮೆಗಾ ಪಿಕ್ಸಲ್‌ ಅಥವಾ ಅದಕ್ಕೂ ಹೆಚ್ಚಿನ ಸಾಮರ್ಥ್ಯ ಹೊಂದಿರುವ ಫೋನ್‌ಗಳು ಉತ್ತಮ ಎನ್ನಬಹುದು. ಹಾಗಾದರೆ ಈ ಲೇಖನದಲ್ಲಿ ಬಜೆಟ್‌ ದರದಲ್ಲಿ 16 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ಪಡೆದಿರುವ ಬೆಸ್ಟ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಜೆಟ್‌ ಬೆಲೆಗೆ ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಬೇಕಿದ್ರೆ, ಇನ್ನು ತಡ ಮಾಡಬೇಡಿ!

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ : ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ HM6 ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಈ ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ.

ವಿವೋ Y100 5G ಸ್ಮಾರ್ಟ್‌ಫೋನ್‌ : ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಇದು 6.38 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, 500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬಜೆಟ್‌ ಬೆಲೆಗೆ ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಬೇಕಿದ್ರೆ, ಇನ್ನು ತಡ ಮಾಡಬೇಡಿ!

ರಿಯಲ್‌ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ : ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 6.7 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಬಜೆಟ್‌ ಬೆಲೆಗೆ ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಬೇಕಿದ್ರೆ, ಇನ್ನು ತಡ ಮಾಡಬೇಡಿ!

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ : ಈ ಫೋನ್‌ ಸಹ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಹಾಗೆಯೇ ಇದು 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದರೊಂದಿಗೆ ಕಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ಬಜೆಟ್‌ ಬೆಲೆಗೆ ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಬೇಕಿದ್ರೆ, ಇನ್ನು ತಡ ಮಾಡಬೇಡಿ!

ಪೊಕೊ X5 ಪ್ರೊ 5G ಸ್ಮಾರ್ಟ್‌ಫೋನ್‌ : ಇದು ಸಹ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ISOCELL HM2 ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದಲ್ಲದೇ ಈ ಫೋನ್ 6.67 ಇಂಚಿನ ಎಕ್ಸ್‌ಫಿನಿಟಿ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ.

Best Mobiles in India

English summary
Best 16 megapixel Selfie Camera Phones in India 2023; camera and all specifications details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+