50MP ಕ್ಯಾಮೆರಾ ಸ್ಮಾರ್ಟ್‌ಫೋನ್ ಖರೀದಿಸುವ ಪ್ಲ್ಯಾನ್ ಇದ್ರೆ, ಇಲ್ಲಿ ನೋಡಿ!
ಇತ್ತೀಚಿನ ಮೊಬೈಲ್‌ಗಳಲ್ಲಿ ಕ್ಯಾಮೆರಾ ಆಯ್ಕೆಯು ಅತೀ ಪ್ರಮುಖವಾಗಿದ್ದು, ಈ ನಿಟ್ಟಿನಲ್ಲಿ ಮೊಬೈಲ್ ಸಂಸ್ಥೆಗಳು ಅಧಿಕ ಮೆಗಾಪಿಕ್ಸಲ್ ಸೆನ್ಸಾರ್ ಆಯ್ಕೆಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ನೀಡುತ್ತವೆ. ಈಗಂತೂ ಡ್ಯಯಲ್ ಹಾಗೂ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೆಚ್ಚು ಟ್ರೆಂಡಿಂಗ್‌ನಲ್ಲಿವೆ.
ಹೌದು, ಇತ್ತೀಚಿನ ಬಹುತೇಕ ಫೋನ್‌ಗಳ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಇಲ್ಲವೇ 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿರುತ್ತವೆ. ಇದರೊಂದಿಗೆ ಉತ್ತಮ ಸೆಕೆಂಡರಿ ಕ್ಯಾಮೆರಾ ಒದಗಿಸಿರುತ್ತಾರೆ. ಹಾಗಾದರೆ ಹಿಂಬದಿಯಲ್ಲಿ 50 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ಹೊಂದಿರುವ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ವಿವೋ T2x 5G : ವಿವೋ T2x 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು,.ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಈ ಫೊನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ.

ಒನ್‌ಪ್ಲಸ್ 11R : ಒನ್‌ಪ್ಲಸ್ 11R ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಈ ಫೋನ್ 6.74 ಇಂಚಿನ 10 ಬಿಟ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 120Hz ರಿಫ್ರೆಶ್ ರೇಟ್ ಹಾಗೂ 360 Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಇದರ ಡಿಸ್‌ಪ್ಲೇಯು 2772 X 1240 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದ್ದು, ಸ್ನಾಪ್‌ಡ್ರಾಗನ್ 8 ಪ್ಲಸ್ ಜನ್ 1 ಚಿಪ್‌ಸೆಟ್ ಪವರ್ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G : ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರಲ್ಲಿ ಓಐಎಸ್ ಬೆಂಬಲದ 50 ಮೆಗಾ ಪಿಕ್ಸಲ್ ಪ್ರಾಥಮಿಕ ಇದೆ. ಜೊತೆಗೆ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಎಕ್ಸಿನೋಸ್ 1380 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A14 5G : ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಹಾಗೆಯೇ ಇದು 6.6 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಓಎಸ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6 GB RAM + 128 GB ಆಯ್ಕೆ ಪಡೆದಿದೆ.
ವಿವೋ V27 ಪ್ರೊ : ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766V ಸೆನ್ಸಾರ್ ಆಗಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.


Click it and Unblock the Notifications








