ಏರ್‌ಟೆಲ್ ಟೆಲಿಕಾಂನ ಈ ಐದು ರೀಚಾರ್ಜ್ ಪ್ಲ್ಯಾನ್ ಗ್ರಾಹಕರಿಗೆ ಖಂಡಿತಾ ಇಷ್ಟ!
ಭಾರತೀಯ ಟೆಲಿಕಾಂ ವಲಯದಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಏರ್‌ಟೆಲ್ ಟೆಲಿಕಾಂ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಮತ್ತೆ ಕೆಲವು ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ.
ಹೌದು, ಏರ್‌ಟೆಲ್ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್ ಹೆಚ್ಚು. 84 ದಿನಗಳ ವ್ಯಾಲಿಡಿಟಿಯ ಏರ್‌ಟೆಲ್ ಪ್ರಮುಖ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್ 719ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ.

ಏರ್‌ಟೆಲ್‌ನ 779ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ನೂತನ 779ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90 GB ಡೇಟಾ ಲಭ್ಯ ಆಗುತ್ತದೆ.

ಏರ್‌ಟೆಲ್‌ನ 839ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 839ರೂ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಸೌಲಭ್ಯ ಲಭ್ಯ.

ಏರ್‌ಟೆಲ್ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ.

ಏರ್‌ಟೆಲ್ 666ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 666 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ.


Click it and Unblock the Notifications








