ಮೊಬೈಲ್‌ನಲ್ಲಿ ವಿಡಿಯೋ ವೀಕ್ಷಣೆ ಮಾಡುವ ಬಳಕೆದಾರರಿಗೆ ಈ ಫೋನ್‌ಗಳು ಬೆಸ್ಟ್‌!

|

ಸದ್ಯದ ದಿನಗಳಲ್ಲಿ ಮೊಬೈಲ್‌ಗಳು ಎಲ್ಲರಿಗೂ ಅಗತ್ಯ ಮತ್ತು ಅನಿವಾರ್ಯ ಸಾಧನ ಎನ್ನುವುದರಲ್ಲಿ ಎರಡು ಮಾತಿಲ್ಲ. ಸದ್ಯ ಬಹುತೇಕ ಆನ್‌ಲೈನ್‌ ಕೆಲಸಗಳು ಸ್ಮಾರ್ಟ್‌ಫೋನ್ ಮೂಲಕವೇ ನಡೆಯುತ್ತವೆ. ಹೀಗಾಗಿ ಅನೇಕ ಜನರು ಹೆಚ್ಚಿನ RAM ಫೀಚರ್ ಇರುವ ಸ್ಮಾರ್ಟ್‌ ಫೋನ್‌ಗಳನ್ನು ಖರೀದಿಸಲು ಇಷ್ಟಪಡುತ್ತಾರೆ. ಹಾಗೆಯೇ ಇನ್ನು ಕೆಲವು ಬಳಕೆದಾರರಿಗೆ ಮೊಬೈಲ್‌ ಮನರಂಜನೆಯ ತಾಣವಾಗಿದ್ದು, ಹೆಚ್ಚಾಗಿ ವಿಡಿಯೋ ನೋಡುತ್ತಾರೆ.

ಮೊಬೈಲ್‌

ವಿಶಾಲ ಗಾತ್ರದ ಡಿಸ್‌ಪ್ಲೇ ಒಳಗೊಂಡಿರುವ ಸ್ಮಾರ್ಟ್‌ಫೋನ್‌ ಗಳು ಅತ್ಯುತ್ತಮ ವಿಡಿಯೋ ವೀಕ್ಷಣೆಗೆ ಪೂರಕ ಆಗಿರುತ್ತವೆ. ಹೀಗಾಗಿ ಮೊಬೈಲ್‌ನಲ್ಲಿ ಹೆಚ್ಚಾಗಿ ವಿಡಿಯೋ ನೋಡುವ ಅಥವಾ ಮೊಬೈಲ್‌ ಗೇಮ್‌ ಆಡುವ ಬಳಕೆದಾರರಿಗೆ ದೊಡ್ಡ ಗಾತ್ರದ ಸ್ಕ್ರೀನ್‌ ಇರುವ ಫೋನ್‌ಗಳು ಹೆಚ್ಚು ಆಕರ್ಷಕ ಎನಿಸುತ್ತವೆ. ಮುಖ್ಯವಾಗಿ 6.5 ಇಂಚಿಗಿಂತ ಅಧಿಕ ಗಾತ್ರದ ಸ್ಕ್ರೀನ್‌ಗಳು ಗಮನ ಸೆಳೆಯುತ್ತವೆ. ಈ ಲೇಖನದಲ್ಲಿ ನಾವು ನೀಡಿರುವ ಕೆಲವು ದೊಡ್ಡ ಗಾತ್ರದ ಡಿಸ್‌ಪ್ಲೇ ಫೋನ್‌ಗಳ ಲಿಸ್ಟ್‌ ಒಮ್ಮೆ ಗಮನಿಸಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್‌

ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್‌

ಆಸುಸ್ ROG ಫೋನ್ 5 ಸ್ಮಾರ್ಟ್‌ಫೋನ್‌ 1,080 x 2,448 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಮತ್ತು 1,200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ROG UI ಮತ್ತು ZEN UI ಕಸ್ಟಮ್ ಇಂಟರ್ಫೇಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12 GB RAM + 512 GB ಸಾಮರ್ಥ್ಯವನ್ನು ವೇರಿಯಂಟ್ ಆಯ್ಕೆ ಹೊಂದಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಹೊಂದಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.72 ಇಂಚಿನ WQHD+ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಆಕ್ಟಾ ಕೋರ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲಗಲಿದೆ. ಜೊತೆಗೆ ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 4,600mAh ಲಿ-ಪಾಲಿಮರ್‌ ಬ್ಯಾಟರಿಯನ್ನು ಹೊಂದಿದೆ.

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ 2K E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಸಕ್ರಿಯಗೊಳಿಸುತ್ತದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL GN5 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನ್‌ 4,700mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ಮತ್ತು 50W ವೈರ್‌ಲೆಸ್ ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
5 Best Big Display Smartphone In India 2022.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X