Home
ಸುದ್ದಿಜಾಲ

ಕಡಿಮೆ ಬೆಲೆಗೆ ಬೆಸ್ಟ್‌ ಕ್ಯಾಮೆರಾ ಫೋನ್‌ ಬೇಕೆ?..ಈ ಫೋನ್‌ಗಳು ಸೂಕ್ತ ನೋಡಿ!

ಅನೇಕ ಗ್ರಾಹಕರು ನೂತನ ಸ್ಮಾರ್ಟ್‌ಫೋನ್‌ ಖರೀದಿ ಮಾಡುವಾಗ ಫೋನಿನ ಕ್ಯಾಮೆರಾ ಬಗ್ಗೆ ಗಮನ ನೀಡುತ್ತಾರೆ. ಇತ್ತೀಚಿನ ಫೋನ್‌ಗಳಂತೂ ಅತ್ಯುತ್ತಮ ಕ್ಯಾಮೆರಾ ಆಯ್ಕೆಯನ್ನು ಪರಿಚಯಿಸುತ್ತಾ ಮುನ್ನಡೆದಿದ್ದು, ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಭಿನ್ನ ಆಯ್ಕೆ ಲಭ್ಯ ಇವೆ. ಅದರಲ್ಲಿಯೂ ಈಗೀಗ ಡ್ಯುಯಲ್‌ ಹಾಗೂ ಟ್ರಿಪಲ್‌ ಕ್ಯಾಮೆರಾ ಆಯ್ಕೆ ಹೆಚ್ಚು ಚಾಲ್ತಿಯಲ್ಲಿ ಇದೆ.

ಹೌದು, ಪ್ರಸ್ತುತ ಮಾರುಕಟ್ಟೆಯಲ್ಲಿ ಬಹುತೇಕ ಬಜೆಟ್‌ ದರದ ಮೊಬೈಲ್‌ಗಳು ಡ್ಯುಯಲ್‌ ಹಾಗೂ ತ್ರಿವಳಿ ಕ್ಯಾಮೆರಾ ರಚನೆ ಒಳಗೊಂಡಿವೆ. ಇನ್ನು ಅವುಗಳ ಮುಖ್ಯ ಕ್ಯಾಮೆರಾ ಸೆನ್ಸಾರ್‌ 50 ಮೆಗಾ ಪಿಕ್ಸಲ್‌ ಇಲ್ಲವೇ 64 ಮೆಗಾ ಪಿಕ್ಸಲ್‌ ಆಗಿರುತ್ತವೆ. ಕೆಲವು ಫೋನ್‌ಗಳು 108 ಮೆಗಾ ಪಿಕ್ಸಲ್‌ನಲ್ಲಿ ಕಾಣಿಸಿಕೊಳ್ಳುತ್ತಿವೆ. ಹಾಗಾದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕ್ಯಾಮೆರಾ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಕಡಿಮೆ ಬೆಲೆಗೆ ಬೆಸ್ಟ್‌ ಕ್ಯಾಮೆರಾ ಫೋನ್‌ ಬೇಕೆ?..ಈ ಫೋನ್‌ಗಳು ಸೂಕ್ತ ನೋಡಿ!

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ : ಒನ್‌ಪ್ಲಸ್‌ ಸಂಸ್ಥೆಯ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್‌ OS 13.1 ಬೆಂಬಲ ಪಡೆದಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಇದೆ.

ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್‌ : ರಿಯಲ್‌ಮಿ 10 ಪ್ರೊ 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್ ಪಡೆದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ.

ವಿವೋ T2 5G ಸ್ಮಾರ್ಟ್‌ಫೋನ್‌ : ವಿವೋ T2 5G ಮೊಬೈಲ್‌ 6.38 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದರ ಸ್ಕ್ರೀನ್ 1,080x2,400 ಪಿಕ್ಸೆಲ್‌ ರೆಸಲ್ಯೂಶನ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಇದರೊಂದಿಗೆ 8GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ. ಅಲ್ಲದೇ ಇದು ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಐಕ್ಯೂ Z7s 5G ಸ್ಮಾರ್ಟ್‌ಫೋನ್‌ : ಐಕ್ಯೂ Z7s 5G ಮೊಬೈಲ್‌ 6.38 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಸ್ಕ್ರೀನ್‌ 2400 x 1080 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಇದು ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಜೊತೆಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ : ಗ್ಯಾಲಕ್ಸಿ M34 5G ಫೋನ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಜೊತೆಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇದರೊಂದಿಗೆ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 13 ಓಎಸ್‌ ಇದೆ. ಜೊತೆಗೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ.

Best Mobiles in India

English summary
5 Best Camera mobiles Under Rs 20,000 in India 2023. phone specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+