ಸದ್ಯ ಗಮನ ಸೆಳೆದಿರುವ 5 ಬೆಸ್ಟ್‌ ಕ್ಯಾಮೆರಾ ಫೋನ್‌ಗಳ ಲಿಸ್ಟ್ ಇಲ್ಲಿದೆ!

|

ಸದ್ಯ ಇಂದಿನ ನೂತನ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ಯಾಮೆರಾ ಫೀಚರ್‌ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಆದರೆ DSLR ಕ್ಯಾಮೆರಾಗಳೊಂದಿಗೆ ಫೋನ್ ಕ್ಯಾಮೆರಾಗಳನ್ನು ಹೋಲಿಕೆ ಮಾಡಲಾಗುವುದಿಲ್ಲ. ಏಕೆಂದರೇ ಸ್ಮಾರ್ಟ್‌ಫೋನ್‌ನಲ್ಲಿ ಸೆರೆಹಿಡಿದ ಫೋಟೊಗಳಿಗೂ ಮತ್ತು ಡಿಎಸ್‌ಎಲ್‌ಆರ್ ಕ್ಯಾಮೆರಾದಲ್ಲಿ ಸೆರೆಹಿಡಿದ ಫೋಟೊಗಳ ಪಿಕ್ಸಲ್ ರೆಸಲ್ಯೂಶನ್‌ನಲ್ಲಿ ಸಾಕಷ್ಟು ವ್ಯತ್ಯಾಸ ಇರುತ್ತದೆ. ಅದಾಗ್ಯೂ ಇತ್ತೀಚಿನ ಕೆಲವು ಫ್ಲ್ಯಾಗ್‌ಶಿಫ್ ಮಾದರಿಯ ಸ್ಮಾರ್ಟ್‌ಫೋನ್‌ಗಳಲ್ಲಿನ ಉನ್ನತ ಪಿಕ್ಸಲ್ ಕ್ಯಾಮೆರಾಗಳು DSLR ಕ್ಯಾಮೆರಾದ ಫೋಟೊಗಳಿಗೆ ಪೈಪೋಟಿ ನೀಡುವಂತಹ ಆಯ್ಕೆ ಹೊಂದಿವೆ.

ಎಂಟ್ರಿ

ಹೌದು, ಪ್ರಸ್ತುತ ಮಾರುಕಟ್ಟೆಗೆ ಹೈ ಎಂಡ್‌ ಮಾದರಿಯ ಕ್ಯಾಮೆರಾ ಫೀಚರ್‌ವುಳ್ಳ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಕೊಡುತ್ತಿವೆ. ಅವುಗಳು ಹೆಚ್ಚಿನ ಫೋಟೊ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ ಆಪಲ್, ಗೂಗಲ್, ಮತ್ತು ಸ್ಯಾಮ್‌ಸಂಗ್ ಸಂಸ್ಥೆಗಳ ಇತ್ತೀಚಿನ ಕೆಲವು ಫೋನ್‌ಗಳು ಹೈ ಎಂಡ್‌ ಕ್ಯಾಮೆರಾ ಸೆನ್ಸಾರ್ ಆಯ್ಕೆಗಳನ್ನು ಪಡೆದಿವೆ. ಮೊಬೈಲ್ ಫೋಟೊಗ್ರಫಿ ಇಷ್ಟಪಡುವವರಿಗೆ ಈ ಫೋನ್‌ಗಳು ಬೆಸ್ಟ್‌ ಅನಿಸಲಿವೆ. ಹಾಗಾದರೇ ಫೋಟೊಗ್ರಾಫಿಗೆ (2021) ಪ್ರಸ್ತುತ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಐಫೋನ್ 12 ಪ್ರೊ ಮ್ಯಾಕ್ಸ್‌

ಐಫೋನ್ 12 ಪ್ರೊ ಮ್ಯಾಕ್ಸ್‌

ಐಫೋನ್ 12 ಪ್ರೊ ಮ್ಯಾಕ್ಸ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಐಫೋನ್ 12 ಪ್ರೊ ಮ್ಯಾಕ್ಸ್ ಟೆಲಿಫೋಟೋ ಕ್ಯಾಮೆರಾದೊಂದಿಗೆ ಉತ್ತಮವಾದ ಕ್ಯಾಮೆರಾ ಸೆಟ್ ಹೊಂದಿದೆ. ಹಿಂಬದಿಯಲ್ಲಿ ಮೂರು ಕ್ಯಾಮೆರಾಗಳ ರಚನೆಯಿದ್ದು, ಅವುಗಳು 12ಎಂಪಿ ಸೆನ್ಸಾರ್‌ ಬಲದಲ್ಲಿವೆ. ಹಾಗೆಯೇ 65 ಎಂಎಂ ಫೋಕಲ್ ಉದ್ದವನ್ನು ಹೊಂದಿದ್ದು ಅದು ನಿಮಗೆ 2.5x ಆಪ್ಟಿಕಲ್ ಜೂಮ್ ಮತ್ತು 5x ಜೂಮ್ ಶ್ರೇಣಿಯನ್ನು ಅನುಮತಿಸುತ್ತದೆ. ಸುಧಾರಿತ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಕೂಡ ಹೊಂದಿದೆ. ಡಾಲ್ಬಿ ಸಪೋರ್ಟ್‌ ಸಹ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ

ಗ್ಯಾಲಕ್ಸಿ S21 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ OIS ಸಪೋರ್ಟ್‌ ಜೊತೆಗೆ 108ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 10ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 40ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಐಫೋನ್ 12 ಪ್ರೊ

ಐಫೋನ್ 12 ಪ್ರೊ

ಐಫೋನ್ 12 ಪ್ರೊ 6.1-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದರೊಂದಿಗೆ ಮುಖ್ಯವಾಗಿ ಐಫೋನ್ 12 ಪ್ರೊ ಕ್ಯಾಮೆರಾ ವಿಭಾಗದಲ್ಲಿ ಸಾಕಷ್ಟು ಅಪ್‌ಗ್ರೇಡ್‌ ಫೀಚರ್ಸ್‌ಗಳನ್ನು ಅಳವಡಿಸಿಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಅವುಗಳು ಮೂರು 12ಎಂಪಿ ಸೆನ್ಸಾರ್‌ನಲ್ಲಿವೆ. ಎರಡು ವೈಡ್-ಆಂಗಲ್ ಸೆನ್ಸರ್‌ಗಳು ಮತ್ತು ಟೆಲಿಫೋಟೋ ಸಂವೇದಕವನ್ನು ಒಳಗೊಂಡಿದೆ. ಐಫೋನ್ 12 ಪ್ರೊ 128GB ವೇರಿಯಂಟ್ ಆಯ್ಕೆ ಸಹ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ನೋಟ್‌ 20 ಅಲ್ಟ್ರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ನೋಟ್‌ 20 ಅಲ್ಟ್ರಾ

ಗ್ಯಾಲಕ್ಸಿ ನೋಟ್‌ 20 ಅಲ್ಟ್ರಾ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮುಖ್ಯ ಕ್ಯಾಮೆರಾವು 108ಎಂಪಿ ಸೆನ್ಸಾರ್‌ ಹೊಂದಿದೆ. ಇನ್ನು ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳೆರಡು ಸಹ ಕ್ರಮವಾಗಿ 12ಎಂಪಿಯ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿ ಕ್ಯಾಮೆರಾವು 10ಎಂಪಿ ಸೆನ್ಸಾರ್‌ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (ಒಐಎಸ್) ಮತ್ತು ಡ್ಯುಯಲ್ ಫೇಸ್ ಡಿಟೆಕ್ಷನ್ ಆಟೋಫೋಕಸ್ ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 123 ಡಿಗ್ರಿ ಫೀಲ್ಡ್ ವ್ಯೂ ಜೊತೆಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್‌ ಅನ್ನು ಹೊಂದಿದೆ.ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Best Mobiles in India

English summary
5 Best Camera Smartphones In India 2021.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X