20,000ರೂ. ಒಳಗೆ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್‌ಫೋನ್ ಬೇಕೆ?.ಇಲ್ಲಿ ನೋಡಿ!
ಹೊಸ ಸ್ಮಾರ್ಟ್‌ಫೋನ್ ಖರೀದಿ ಮಾಡುವಾಗ ಬಹುತೇಕ ಗ್ರಾಹಕರು ಕ್ಯಾಮೆರಾ ಆಯ್ಕೆಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಹೀಗಾಗಿ ಮೊಬೈಲ್ ತಯಾರಿಕಾ ಸಂಸ್ಥೆಗಳು ಸಹ ಅತ್ಯುತ್ತಮ ಸೆನ್ಸಾರ್ ನೀಡುತ್ತ ಸಾಗಿವೆ. ಸದ್ಯ ತ್ರಿವಳಿ ಕ್ಯಾಮೆರಾ ಆಯ್ಕೆ ಹಾಗೂ ಕ್ವಾಡ್ ಕ್ಯಾಮೆರಾ ರಚನೆಯ ಫೋನ್‌ಗಳು ಹೆಚ್ಚು ಸದ್ದು ಮಾಡುತ್ತಿವೆ.
ಹೌದು, ಇತ್ತೀಚಿಗೆ ಬಿಡುಗಡೆ ಆಗಿರುವ ಹಲವು ಫೋನ್‌ಗಳು ಟ್ರಿಪಲ್ ಕ್ಯಾಮೆರಾ ಆಯ್ಕೆ ಪಡೆದಿವೆ. ಅವುಗಳಲ್ಲು ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮಾನ್ಯ ಎನ್ನುವಂತಾಗಿದೆ. ಅದಾಗ್ಯೂ 20,000ರೂ. ಒಳಗೆ ಬೆಸ್ಟ್ ಕ್ಯಾಮೆರಾ ಆಯ್ಕೆ ಇರುವ ಫೋನ್‌ಗಳು ಹೆಚ್ಚು ಡಿಮ್ಯಾಂಡ್ ಪಡೆದಿವೆ. ಅಂತಹ ಕೆಲವು ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ.

ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್
ರಿಯಲ್‌ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇನ್ನು ಈ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಒಪ್ಪೋ A78 5G ಸ್ಮಾರ್ಟ್‌ಫೋನ್
ಒಪ್ಪೋ A78 5G ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ರೆಡ್ಮಿ ನೋಟ್ 11 ಪ್ರೊ 5G ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 11 ಪ್ರೊ 5G ಫೋನ್ 6.67 ಇಂಚಿನ 1080p ಪ್ಯಾನೆಲ್ ಅನ್ನು 120Hz ರಿಫ್ರೆಶ್ ದರದೊಂದಿಗೆ ಹೊಂದಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಆಗಿದೆ. ಇನ್ನುಳಿದ ಎರಡು ಕ್ಯಾಮೆರಾಗಳು 8 ಮೆಗಾ ಪಿಕ್ಸೆಲ್, 2 ಮೆಗಾಪಿಕ್ಸೆಲ್ ಆಗಿವೆ. ಈ ಫೋನ್ 5G ವೇರಿಯಂಟ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಪಡೆದಿದ್ದು, 67W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿವೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD + ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್,6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್‌ಫೋನ್
ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








