Home
ಸುದ್ದಿಜಾಲ

20,000ರೂ. ಒಳಗೆ ಖರೀದಿಗೆ ಲಭ್ಯವಿರುವ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

ದೇಶದ ಮೊಬೈಲ್‌ ಮಾರುಕಟ್ಟೆಯಲ್ಲಿ ಹಲವು ಮೊಬೈಲ್‌ ಸಂಸ್ಥೆಗಳು ಭಿನ್ನ ಮಾದರಿಯ ಫೋನ್‌ಗಳನ್ನು ಪರಿಚಯಿಸಿವೆ. ಹಾಗೆಯೇ ಬಜೆಟ್‌ ಬೆಲೆಯ ಫೋನ್‌ಗಳ ಜೊತೆಗೆ ಮೀಡ್‌ರೇಂಜ್‌ ಹಾಗೂ ಹೈ ಎಂಡ್‌ ದರದ ಫೋನ್‌ಗಳ ಲಿಸ್ಟ್‌ ಅನ್ನು ಗ್ರಾಹಕರ ನೀಡಿವೆ. ಆದ್ರೆ, ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಾಗುವ ಕೆಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಆಕರ್ಷಕಯಲ್ಲಿ ಕಾಣಿಸಿಕೊಂಡಿವೆ.

ಹೌದು, ಬಜೆಟ್‌ ದರದಲ್ಲಿ ಖರೀದಿಸಬಹುದಾದ ಅತ್ಯುತ್ತಮ ಫೀಚರ್ಸ್‌ನ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚು ಗಮನ ಸೆಳೆದಿವೆ. ಅವುಗಳಲ್ಲಿ ಬಹುತೇಕ ಫೋನ್‌ಗಳು ಕ್ಯಾಮೆರಾ, ಪ್ರೊಸೆಸರ್‌, ಬ್ಯಾಟರಿ ಆಯ್ಕೆಗಳಿಂದಲೂ ಗಮನ ಸೆಳೆದಿವೆ. ಹಾಗಾದರೆ 20,000ರೂ. ಒಳಗೆ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಯೋಣ ಬನ್ನಿರಿ.

20,000ರೂ. ಒಳಗೆ ಖರೀದಿಗೆ ಲಭ್ಯವಿರುವ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

ವಿವೋ T1 ಸ್ಮಾರ್ಟ್‌ಫೋನ್‌ : ಈ ಫೋನ್‌ 1,080 x 2,400 ಪಿಕ್ಸೆಲ್‌ ರೆಸಲ್ಯೂಶನ್‌ ಒಳಗೊಂಡ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ರೆಡ್ಮಿ ನೋಟ್‌ 12 5G : ರೆಡ್ಮಿ ನೋಟ್‌ 12 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 128GB, 4GB RAM + 128GB ಮತ್ತು 6GB RAM + 128GB ಇಂಟರ್‌ ಸ್ಟೋರೇಜ್‌ ಆಯ್ಕೆಗಳನ್ನು ಹೊಂದಿದೆ. ಇದರೊಂದಿಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

20,000ರೂ. ಒಳಗೆ ಖರೀದಿಗೆ ಲಭ್ಯವಿರುವ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

ವಿವೋ T1x ಸ್ಮಾರ್ಟ್‌ಫೋನ್‌ : ಈ ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಹೊಂದಿದ್ದು, 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಐಕ್ಯೂ Z7 5G ಫೋನ್‌ : ಈ ಹೊಸ ಸ್ಮಾರ್ಟ್‌ಫೋನ್ 6.28 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಿಹಿಸಲಿದೆ. ಹಾಗೆಯೇ ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, 4500mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದೆ.

ವಿವೋ Y22 ಸ್ಮಾರ್ಟ್‌ಫೋನ್‌ : ಈ ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G70 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
5 Best Mobile Under Rs 20,000 in India (May 2023). know more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+