ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರೇ, ಈ ಆಫರ್ ಒಮ್ಮೆ ಚೆಕ್ ಮಾಡಿ!
ಹಬ್ಬಗಳು ಬಂದರೆ ಸಾಕು ಇ ಕಾಮರ್ಸ್‌ಗಳು ಆಫರ್‌ಗಳ ಸುರಿಮಳೆಯನ್ನೇ ಸುರಿಸುತ್ತವೆ. ಈ ನಿಟ್ಟಿನಲ್ಲಿ ಜನಪ್ರಿಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್ ಆಯೋಜಿಸಿದ್ದು, ಈ ಸೇಲ್ ಇದೀಗ ಲೈವ್ ಇದೆ. ಈ ಮಾರಾಟದಲ್ಲಿ ಗ್ಯಾಡ್ಜೆಟ್ಸ್ ಉತ್ಪನ್ನಗಳು ಭರ್ಜರಿ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದ್ದು, ಆನ್‌ಲೈನ್ ಶಾಪಿಂಗ್ ಪ್ರಿಯರು ಖರೀದಿಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಕೆಲವು ಸ್ಮಾರ್ಟ್‌ಫೋನ್‌ಗಳು ಗ್ರಾಹಕರು ಹುಬ್ಬೇರಿಸುವಂತಹ ಡಿಸ್ಕೌಂಟ್‌ಗಳನ್ನು ಪಡೆದಿವೆ.

ಹೌದು, ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಒನ್‌ಪ್ಲಸ್, ಶಿಯೋಮಿ, ಸ್ಯಾಮ್‌ಸಂಗ್, ಐಕ್ಯೂ, ಟೆಕ್ನೋ ಸೇರಿದಂತೆ ಇತರೆ ಮೊಬೈಲ್ ಕಂಪನಿಗಳ ಕೆಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಬಿಗ್ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಈ ಹಬ್ಬದ ಸಂದರ್ಭದಲ್ಲಿ ನೀವೇನಾದರೂ ಹೊಸದೊಂದು ಸ್ಮಾರ್ಟ್‌ಫೋನ್ ಖರೀದಿಸುವ ಪ್ಲ್ಯಾನ್ ಮಾಡಿದ್ರೆ, ಅಮೆಜಾನ್ ಆಫರ್ ಒಮ್ಮೆ ಚೆಕ್ ಮಾಡಿ. ಹಾಗಾದರೆ, ಅಮೆಜಾನ್ ಸೇಲ್‌ನಲ್ಲಿ ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ ಕೆಲವು ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ರೆಡ್ಮಿ ನೋಟ್ 11 ಪ್ರೊ 5G
ರೆಡ್ಮಿ ನೋಟ್ 11 ಪ್ರೊ 5G 6.67 ಇಂಚಿನ 1080p ಪ್ಯಾನೆಲ್ ಅನ್ನು 120Hz ರಿಫ್ರೆಶ್ ದರದೊಂದಿಗೆ ಹೊಂದಿದೆ. ಜೊತೆಗೆ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಉಳಿದಂತೆ 8 ಮೆಗಾ ಪಿಕ್ಸೆಲ್ ಅಲ್ಟ್ರಾವೈಡ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಸೆನ್ಸಾರ್ ಪಡೆದಿದೆ. ಈ ಫೋನ್ 5G ಸೌಲಭ್ಯ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಮೆಜಾನ್ ಆಯೋಜಿಸಿರುವ ಸೇಲ್‌ನಲ್ಲಿ ಈ ಫೋನ್ ಅನ್ನು 21,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಒನ್‌ಪ್ಲಸ್ 10R 5G
ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಒಳಗೊಂಡಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ರೆಡ್ಮಿ ನೋಟ್ 11s
ರೆಡ್ಮಿ ನೋಟ್ 11S ಫೋನ್ 6.43 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದ್ದು, 90Hz AMOLED ಡಿಸ್ಪ್ಲೇಯನ್ನು ಪಡೆದಿದೆ. ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಹೆಡ್‌ಫೋನ್ ಜ್ಯಾಕ್‌ಗಳನ್ನು ಹೊಂದಿವೆ. ಅಮೆಜಾನ್ ಸೇಲ್‌ನಲ್ಲಿ ಈ ಫೋನ್ ಅನ್ನು ಗ್ರಾಹಕರು 14,499ರೂ. ಗಳಿಗೆ ಖರೀದಿಸಬಹುದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22
ಈ ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್+ ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇನ್ನು ಅಮೆಜಾನ್ ಸೇಲ್‌ನಲ್ಲಿ ಈ ಫೋನ್ 62,999ರೂ. ಗಳ ಬೆಲೆಗೆ ಲಭ್ಯವಾಗಲಿದೆ.

ರಿಯಲ್‌ಮಿ ನಾರ್ಜೊ 50
ಈ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ IPS LCD ಡಿಸ್‌ಪ್ಲೇ ಹೊಂದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್ಡಾರ್ಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಅಮೆಜಾನ್ ಸೇಲ್‌ನಲ್ಲಿ ಈ ಫೋನ್ 9,999ರೂ. ಗಳ ಬೆಲೆಗೆ ಲಭ್ಯವಾಗಲಿದೆ.


Click it and Unblock the Notifications








